ಡಿಕೆಶಿ ಪ್ರಕರಣ: ವಿಚಾರಣೆ ಮುಂದಕ್ಕೆ
Team Udayavani, Mar 18, 2023, 6:44 AM IST
ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾ.24ರವರೆಗೆ ಹೈಕೋರ್ಟ್ ವಿಸ್ತರಿಸಿದೆ.
ಸಿಬಿಐ ತನಿಖೆ ರದ್ದು ಕೋರಿ ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿ, ಅರ್ಜಿದಾರರ ವಿರುದ್ಧದ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ತೆರವು ಕೋರಿ ಸಿಬಿಐ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಅದನ್ನು ಪರಿಗಣಿಸಬೇಕು ಎಂದು ಕೋರಿದರು.
ಕಾಲಾವಕಾಶದ ಕೊರತೆಯಿಂದ ಅರ್ಜಿ ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿದ ನ್ಯಾಯಪೀಠ, ಅಲ್ಲಿಯವರಗೆ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ತಡೆಯಾಜ್ಞೆಯನ್ನು ವಿಸ್ತರಿಸಿತು.
ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಬಿಐ ತನಿಖೆಗೆ 2023ರ ಫೆ.10ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.