ಸರ್ಕಾರ ಮೊದಲು ತನ್ನ ಸಲಹೆಗಾರರ ಮಾತು ಕೇಳುತ್ತದೆಯೇ; ಡಿ.ಕೆ ಶಿವಕುಮಾರ್ ಪ್ರಶ್ನೆ


Team Udayavani, Jun 2, 2021, 4:06 PM IST

ಸರ್ಕಾರ ಮೊದಲು ತನ್ನ ಸಲಹೆಗಾರರ ಮಾತು ಕೇಳುತ್ತದೆಯೇ; ಡಿ.ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ‘ಲಸಿಕೆ ವಿಚಾರದಲ್ಲಿ ಸರ್ಕಾರ ತನ್ನ ಸಲಹೆಗಾರರಾದ ಗಗನ್ ದೀಪ್ ಕಾಂಗ್ ಅವರ ಮಾತು ಕೇಳಿದರೆ ಸಾಕು, ಪರಿಣಾಮಕಾಯಾಗಿ ಲಸಿಕೆ ವಿತರಣೆ ಮಾಡಬಹುದು. ಆದರೆ ಸರ್ಕಾರ ತನ್ನ ಸಲಹೆಗಾರರ ಮಾತನ್ನು ಒಪ್ಪಲು ಸಿದ್ಧವಿದೆಯೇ?’ ಎಂದು ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಕಾಂಗ್ ಅವರು ಖ್ಯಾತ ವೈರಾಣು ತಜ್ಞರಾಗಿದ್ದು, ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ವೈರಾಣು ವಿಜ್ಞಾನ. ವಿಭಾಗದ ಪ್ರೊಫೆಸರ್ ಆಗಿದ್ದಾರೆ. ಕಳೆದ ತಿಂಗಳು ರಾಜ್ಯ ಸರ್ಕಾರ ಇವರನ್ನು ಲಸಿಕೆ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿತ್ತು.

‘ಕಾಂಗ್ ಅವರ ನೇಮಕವಾದಾಗ ಸರ್ಕಾರ ಕಡೆಗೂ ವಿಜ್ಞಾನಿಗಳ ಸಲಹೆ ಪಡೆಯಲು ಮುಂದಾಗಿದೆ ಎಂದು ಭಾವಿಸಿದ್ದೆವು. ಆದರೆ ಸಲಹೆಗಾರರ ಅಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಗಳಿಗೂ ಹೊಂದಾಣಿಕೆಯೇ ಆಗುತ್ತಿಲ್ಲ. ಹೀಗಾಗಿ ಸರ್ಕಾರ ಕೇವಲ ಪ್ರಚಾರಕ್ಕೆ ಮಾತ್ರ ಸಲಹೆಗಾರರನ್ನು ನೇಮಕ ಮಾಡಿಕೊಂಡಿದೆ ಎಂಬುದು ಸ್ಪಷ್ಟವಾಗುತ್ತಿದೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಹಿಳೆಗೆ ಕೊಲೆ ಬೆದರಿಕೆ : 7 ಜನ ಆರೋಪಿಗಳ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ ಅವರು ಕೋವಿಡ್ ನಿರ್ವಹಣೆ ವಿಚಾರವಾಗಿ ವ್ಯಕ್ತಪಡಿಸಿರುವ 10 ಅಂಶಗಳನ್ನು ಡಿ.ಕೆ. ಶಿವಕುಮಾರ್ ಅವರು ಉಲ್ಲೇಖಿಸಿದ್ದು, ಕಾಂಗ್ ಅವರ ಅಭಿಪ್ರಾಯಗಳನ್ನು ಸರ್ಕಾರ ಪರಿಗಣಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನಾಂಶಗಳು ಹೀಗಿವೆ:

ಲಸಿಕೆ ಖರೀದಿಯಲ್ಲಿ ವಿಳಂಬ:

ಲಸಿಕೆ ಖರೀದಿ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಮಾಡಬೇಕೇ ಹೊರತು, ರಾಜ್ಯ ಸರ್ಕಾರವಲ್ಲ ಎಂದು ಸಲಹೆಗಾರರು ಅಭಿಪ್ರಾಯಪಟ್ಟಿದ್ದು, ಇದನ್ನು ಸರ್ಕಾರ ಒಪ್ಪುತ್ತದೆಯೇ? ಎಂದು ಕಾಂಗ್ರೆಸ್ ಕೇಳಲು ಬಯಸುತ್ತದೆ. ಇನ್ನು ಕೇಂದ್ರ ಸರಕಾರವು ಜಾಗತಿಕ ಕಂಪನಿಗಳಿಂದ ಲಸಿಕೆ ಖರೀದಿಯಲ್ಲಿ ವಿಳಂಬ ಮಾಡಿದೆ ಎಂಬುದನ್ನಾದರೂ ಸರ್ಕಾರ ಒಪ್ಪಿಕೊಳ್ಳುತ್ತದೆಯೇ?

ಕಾಂಗ್ ಅವರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ, ‘ಇಡೀ ವಿಶ್ವ ಮುಂದಿನ ಒಂದು ವರ್ಷದಲ್ಲಿ ಎದುರಾಗುವ ಸವಾಲು ಎದುರಿಸಲು ಲಸಿಕೆ ಖರೀದಿ ಮಾಡುತ್ತಿದೆ. ಆದರೆ ನಮಗೆ ಮಾರುಕಟ್ಟೆಯಲ್ಲಿ ಸದ್ಯದ ಬೇಡಿಕೆಯಷ್ಟು ಮಾತ್ರ ಲಸಿಕೆ ಲಭ್ಯವಾಗುತ್ತಿದೆ. ಹೀಗಾಗಿ ನಾವು ಹೆಚ್ಚಿನ ಪ್ರಮಾಣದ ಲಸಿಕೆ ಖರೀದಿಸಬೇಕು’ ಎಂದಿದ್ದಾರೆ.

ಜಾಗತಿಕ ಟೆಂಡರ್:

ಇನ್ನು ಕಾಂಗ್ ಅವರು ಜಾಗತಿಕ ಟೆಂಡರ್ ಅನ್ನು ಸಂಪನ್ಮೂಲದ ವ್ಯರ್ಥ ಎಂದು ಹೇಳಿರುವ ದಾಖಲೆಗಳಿವೆ. ಹಾಗಾದರೆ ಕರ್ನಾಟಕ ಸರ್ಕಾರವು ಜಾಗತಿಕ ಟೆಂಡರ್ ಮೂಲಕ ಲಸಿಕೆ ಖರೀದಿ ನಿರ್ಧಾರದಲ್ಲಿ ಸಲಹೆಗಾರರ ಅಭಿಪ್ರಾಯವನ್ನು ಪರಿಗಣಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಜಾಗತಿಕ ಟೆಂಡರ್ ಮೂಲಕ ಎಷ್ಟು ಪ್ರಮಾಣದ ಲಸಿಕೆಯನ್ನು, ಯಾವಾಗ ಖರೀದಿ ಮಾಡಲಿದೆ ಎಂಬ ಮಾಹಿತಿ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ.

ಇದನ್ನೂ ಓದಿ: ನೀರು ಸರಬರಾಜು ಇಳಿಸುವ ವೇಳೆ ಸುಪರ್ ವೈಸರ್ ಮೇಲೆ ಬಿದ್ದ ಪೈಪ್: ಗಾಯಗೊಂಡ ಸುಪರ್ ವೈಸರ್ ಸಾವು

ಡಿಸೆಂಬರ್ ಗಡುವು ಬಗ್ಗೆ ಪ್ರಶ್ನೆ:

ಕೇಂದ್ರ ಸರ್ಕಾರ ಈ ವರ್ಷ ಡಿಸೆಂಬರ್ ವೇಳೆಗೆ 2 ಕೋಟಿ ಡೋಸ್ ಲಸಿಕೆ ಖರೀದಿ ಮಾಡುವುದಾಗಿ ತಿಳಿಸಿದ್ದು, ಗಗನ್ ದೀಪ್ ಕಾಂಗ್ ಅವರು, ‘ಇದು ವಾಸ್ತವಾಂಶಕ್ಕೆ ದೂರವಾದದ್ದು’ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗಾದರೆ ರಾಜ್ಯ ಬಿಜೆಪಿ ಸರ್ಕಾರ ತನ್ನ ಸಲಹೆಗಾರರ ಅಭಿಪ್ರಾಯವನ್ನು ಒಪ್ಪುತ್ತದೆಯೇ? ಹಾಗೂ ರಾಜ್ಯದಲ್ಲಿರುವ ಎಲ್ಲ ವಯಸ್ಕರಿಗೂ ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡಲು ಹಾಕಿಕೊಂಡಿರುವ ಕಾಲಮಿತಿಯ ಬಗ್ಗೆ ವಿವರ ನೀಡುತ್ತದೆಯೇ?

ಕೋವ್ಯಾಕ್ಸಿನ್ ಪರಿಣಾಮದ ಅಂಕಿ ಅಂಶ :

ಜನವರಿ ತಿಂಗಳಲ್ಲಿ ಕೋವ್ಯಾಕ್ಸಿನ್ ಅಂತಿಮ ಪರೀಕ್ಷೆ ವರದಿ ಪ್ರಕಟವಾಗುವ ಮುನ್ನವೇ ಅದರ ಬಳಕೆಗೆ ಅನುಮತಿ ನೀಡಿದ್ದನ್ನು ಡಾ. ಕಾಂಗ್ ಅವರು ಪ್ರಶ್ನಿಸಿದ್ದರು. ಜತೆಗೆ, ಕೋವ್ಯಾಕ್ಸಿನ್ ಅಂತಿಮ ಪರೀಕ್ಷಾ ವರದಿ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದರು. ಈ ವಿಚಾರದಲ್ಲಿ ಬಿಜೆಪಿ ಸರ್ಕಾರ ತನ್ನ ಸಲಹೆಗಾರರ ಅಭಿಪ್ರಾಯವನ್ನು ಬೆಂಬಲಿಸುತ್ತದೆಯೇ ಎಂದು ಸರ್ಕಾರವನ್ನು ಕೇಳ ಬಯಸುತ್ತೇವೆ.

2ನೇ ಅಲೆ ಕುರಿತ ಎಚ್ಚರಿಕೆಯ ನಿರ್ಲಕ್ಷ್ಯ:

ದೇಶದಲ್ಲಿ ಎರಡನೇ ಅಲೆ ವಿಚಾರವಾಗಿ ಭಾರತ ಸರ್ಕಾರದ ನಿರ್ಲಕ್ಷ್ಯವನ್ನು ಡಾ.ಕಾಂಗ್ ಅವರು ಪ್ರಶ್ನಿಸಿದ್ದರು. ‘ಸೋಂಕು ಹೆಚ್ಚಳದ ಬಗ್ಗೆ ನಾವು ಆರಂಭದಲ್ಲೇ ಗಮನ ಹರಿಸಬೇಕಿತ್ತು. ಕಡೇ ಪಕ್ಷ ಮಾರ್ಚ್ ಆರಂಭದಲ್ಲಾದರೂ ನಾವು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದರೆ ನಾವದನ್ನು ಮಾಡಲಿಲ್ಲ’ ಎಂದು ಹೇಳಿದ್ದಾರೆ.

ಅವರನ್ನು ರಾಜ್ಯದ ಲಸಿಕೆ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡ ನಂತರವೂ ಸರ್ಕಾರ ಮಾರ್ಚ್ ತಿಂಗಳಲ್ಲಿ ಸೋಂಕು ಪ್ರಕರಣ ಹೆಚ್ಚಳದ ವಿಚಾರವಾಗಿ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿತ್ತು ಎಂಬುದನ್ನು ಸರ್ಕಾರ ಒಪ್ಪಿಕೊಳ್ಳುತ್ತದೆಯೇ?

ಕೋವಿಡ್ ಅನ್ನು ಪೂರ್ಣ ಪ್ರಮಾಣದಲ್ಲಿ ಮಣಿಸಲು ತಂತ್ರಗಾರಿಕೆ ಇದೆಯೇ? :

ಗಗನ್ ದೀಪ್ ಕಾಂಗ್ ಅವರು ಸಂದರ್ಶನವೊಂದರಲ್ಲಿ, ‘ನಾವು ಪ್ರಸ್ತುತ ರೀತಿಯಲ್ಲೇ ಸಾಗಿದರೆ ನಿರಂತರವಾಗಿ ಸೋಂಕು ಹರಡುತ್ತಾ ಹೋಗುತ್ತದೆ. ನಂತರ ಅದು ಅತ್ಯಂತ ಮಾರಕ ವೈರಾಣುವಾಗಿ ರೂಪುಗೊಳ್ಳಬಹುದು. ಆಗ ಪ್ರತಿ ವರ್ಷ ಒಂದು ಅಥವಾ ಎರಡು ಅಲೆಗಳನ್ನು ಎದುರಿಸಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಈ ಸಲಹೆಯನ್ನಾದರೂ ಕೇಳುತ್ತದೆಯೇ? ಮಂದಗತಿಯಲ್ಲಿ ಲಸಿಕೆ ಹಾಕುವ ಮೂಲಕ ಸೋಂಕು ಹರಡಲು ಅವಕಾಶ ಕಲ್ಪಿಸಲಾಗುತ್ತಿದೆಯೇ? ಅಥವಾ ಕೋವಿಡ್ ಅನ್ನು ಶಾಶ್ವತವಾಗಿ ಮಣಿಸಲು ಸಮೂಹ ಲಸಿಕೆ ಕಾರ್ಯಕ್ರಮದ ಬಗ್ಗೆ ಸರ್ಕಾರ ಏನಾದರೂ ಯೋಜನೆ ರೂಪಿಸಿದೆಯೇ?

ಇದನ್ನೂ ಓದಿ: ನಡುರಸ್ತೆಯಲ್ಲಿ ವಾಹನ ತಡೆದು ಚಾಲಕನನ್ನು ಬೆದರಿಸಿ 30 ಸಾವಿರ ಲೂಟಿ, ಪರಾರಿಯಾದ ಅಪರಿಚಿತರು

ಅಂಕಿಅಂಶಗಳ ಕೊರತೆ :

ಅಂತಿಮವಾಗಿ ಡಾ. ಕಾಂಗ್ ಅವರು, ‘ಭಾರತ ಸರ್ಕಾರ ಸೋಂಕು ಪ್ರಕರಣ ಹಾಗೂ ಲಸಿಕೆ ಕುರಿತ ನೈಜ ಅಂಕಿ ಅಂಶಗಳನ್ನು ಸಂಗ್ರಹಿಸಬೇಕು. ಆಗ ಮಾತ್ರ ಕೋವಿಡ್ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಸಾಧ್ಯ’ ಎಂದು ಹೇಳಿದ್ದಾರೆ.

ಕಳಪೆ ಅಂಕಿ-ಅಂಶಗಳಿಂದಾಗಿ ಭಾರತದಲ್ಲಿ ಲಸಿಕೆ ಕಾರ್ಯಕ್ರಮದ ಪರಿಣಾಮವನ್ನು ಅಳೆಯಲು ಸಾಧ್ಯವಾಗುತ್ತಿಲ್ಲ’ ಎಂದೂ ತಿಳಿಸಿದ್ದಾರೆ. ಭಾರತದಲ್ಲಿ ಲಸಿಕೆ ಸಾಮರ್ಥ್ಯದ ಬಗ್ಗೆ ಅಧ್ಯಯನ, ಸಮೀಕ್ಷೆ, ವೈಜ್ಞಾನಿಕ ವಿಶ್ಲೇಷಣೆ ನಡೆಸಬೇಕು ಎಂದು ಅವರು ತಿಳಿಸಿದ್ದಾರೆ.

‘ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಬಿಜೆಪಿ ನಾಯಕರು ಕಾಳಸಂತೆಯಲ್ಲಿ ಲಸಿಕೆ ಮಾರಿಕೊಳ್ಳಲು ಅವಕಾಶ ನೀಡುವುದನ್ನು ಬಿಟ್ಟು, ಕೋವಿಡ್ ನಿರ್ವಹಣೆ ವಿಚಾರದಲ್ಲಿ ಮೊದಲು ತನ್ನ ಸಲಹೆಗಾರರ ಮಾತನ್ನು ಕೇಳಬೇಕಿದೆ’ ಎಂದು ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.