ಬಿಎಸ್ ವೈ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಎಲ್ಲಿದೆ ಆ್ಯಂಬುಲೆನ್ಸ್? ಡಿಕೆ ಶಿವಕುಮಾರ್ ಗುಡುಗು
Team Udayavani, Aug 17, 2020, 4:39 PM IST
ಬೆಂಗಳೂರು: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
— DK Shivakumar (@DKShivakumar) August 17, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Australia vs Pakistan T20: ಪಾಕ್ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.