ಇದೊಂದು ಕಣ್ಣಾ ಮುಚ್ಚಾಲೆ, ಬೋಗಸ್ ಬಜೆಟ್ : ಡಿ.ಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
Team Udayavani, Mar 8, 2021, 7:04 PM IST
ಬೆಂಗಳೂರು : ಜನರನ್ನು ಹೇಗೆಲ್ಲಾ ದಾರಿ ತಪ್ಪಿಸಬಹುದು ಎಂಬುದರ ಬಗ್ಗೆ ಪಿ.ಎಚ್.ಡಿ ಮಾಡಿ ಈ ಬಜೆಟ್ ರೂಪಿಸಿದಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಜೆಟ್ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.
ಬಜೆಟ್ ಮೇಲಿನ ಪ್ರತಿಕ್ರಿಯೆ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ, ಕೇಂದ್ರದ ನೆರವೂ ಸಿಕ್ಕಿಲ್ಲ. ಜಿಎಸ್ಟಿ ಸಾಲದ ಮೊರೆ ಅನಿವಾರ್ಯವಾಗಿದೆ ಎಂಬುದನ್ನು ಸಿ.ಎಂ ಯಡಿಯೂರಪ್ಪ ಅವರು ಭಾಷಣದ ಆರಂಭದಲ್ಲೇ ವಿವರಿಸಿದ್ದಾರೆ. ಕಳೆದ ವರ್ಷ ಮಾಡಿಕೊಂಡಿರುವ ಸಾಲವನ್ನೇ ತೀರಿಸಲು ಆಗಿಲ್ಲ. ಈಗ ಹೊಸದಾಗಿ 70 ಸಾವಿರ ಕೋಟಿ ರೂ. ಸಾಲದ ಹೊರೆ ರಾಜ್ಯದ ಜನರ ತಲೆ ಮೇಲೆ ಬೀಳಲಿದೆ. “ಸಾಲ ಮಾಡಿ ತುಪ್ಪ ತಿನ್ನು” ಎಂದು ಸಾಲಗಾರರನ್ನು ಅಣಕಿಸುವ ಮಾತಿದೆ. ಆದರೆ ಈ ಸರಕಾರ ಸಾಲ ಮಾಡಿ ಜನರಿಗೆ ಮಣ್ಣು ತಿನ್ನಿಸಲು ಹೊರಟಿದೆ ಎಂದರು.
ರಾಜ್ಯಗಳ ಜಿಎಸ್ಟಿ ಪಾಲು ಹಂಚುವಾಗ ಗುಜರಾತ್, ಅಸ್ಸಾಂ ಮತ್ತಿತರ ರಾಜ್ಯಗಳ ಕಣ್ಣಿಗೆ ಬೆಣ್ಣೆ ಹಚ್ಚಿದ ಕೇಂದ್ರ ಸರಕಾರ ರಾಜ್ಯದ ಕಣ್ಣಿಗೆ ಸುಣ್ಣ ಸುರಿದಿದೆ. ಅದನ್ನು ರಾಜ್ಯ ಸರಕಾರವಾಗಲಿ, ರಾಜ್ಯದಿಂದ ಕೇಂದ್ರ ಪ್ರತಿನಿಧಿಸುತ್ತಿರುವ ಎರಡು ಡಜನ್ ಸಂಸದರು ಪ್ರಶ್ನಿಸುವ ಗೋಜಿಗೆ ಹೋಗಲಿಲ್ಲ. ಅದರ ಫಲವೇ ಈಗ ರಾಜ್ಯದ ಜನರ ತಲೆ ಮೇಲೆ ಬೀಳುತ್ತಿರುವ ಸಾಲದ ಹೊರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅವೈಜ್ಞಾನಿಕ ಲಾಕ್ ಡೌನ್ ರಾಜ್ಯದ ಆರ್ಥಿಕ ಸ್ಥಿತಿ ಹದಗೆಡಿಸಿದೆ ಎಂಬುದನ್ನು ಮುಖ್ಯಮಂತ್ರಿಗಳೇ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ. ಆದರೂ ಜನರ ಕಣ್ಣಿಗೆ ಮಣ್ಣೆರೆಚುವ ರೀತಿಯಲ್ಲಿ ಘೋಷಣೆಗಳ ಮೇಲೆ ಘೋಷಣೆಗಳನ್ನು ಸಿಎಂ ಪ್ರಕಟಿಸಿದ್ದಾರೆ ಎಂದರು.
ಆದರೆ ಇದಕ್ಕೆ ಸಂಪನ್ಮೂಲ ಕ್ರೋಡೀಕರಣ ಹೇಗೆ? ಎಲ್ಲಿಂದ ದುಡ್ಡು ತರುತ್ತಾರೆ ಎಂಬುದನ್ನೇ ಹೇಳಿಲ್ಲ. ಹೀಗಾಗಿ ಈ ಘೋಷಣೆಗಳೆಲ್ಲ ಘೋಷಣೆಯಾಗಿಯೇ ಉಳಿದುಕೊಳ್ಳುವ ಅಪಾಯವಿದೆ. ಪ್ರತಿ ಬಾರಿ ಬಜೆಟ್ ಅನ್ನು ಮಂಡಿಸುವಾಗ ಇಲಾಖೆವಾರು ಅನುದಾನ ಹಂಚಿಕೆ ಮಾಡಲಾಗುತ್ತದೆ. ಆಗ ಯಾವ ಇಲಾಖೆಗೆ ಏನು, ಎಷ್ಟು ಎಂಬುದು ತಿಳಿಯುತ್ತದೆ. ಆದರೆ ಈಗ ಸರ್ಕಾರ ವಲಯವಾರು ಘೋಷಣೆ ಮಾಡಿ “ಗುಂಪಲ್ಲಿ ಗೋವಿಂದಾ” ಎನ್ನುವಂತೆ ಜನರ ಕಣ್ಣಿಗೆ ಮಣ್ಣೆರಚಿದೆ.
ಕೃಷಿಗೆ 31,028 ಕೋಟಿ ಘೋಷಿಸಿ, ಇದು ರೈತರಿಗೆ ಬಂಪರ್ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ವಾಸ್ತವದಲ್ಲಿ ಇದು ಕೇವಲ ಕೃಷಿ ಕ್ಷೇತ್ರಕ್ಕೆ ಮಾತ್ರವಲ್ಲ. ಅದಕ್ಕೆ ಪೂರಕವಾಗಿರುವ ನೀರಾವರಿ ಯೋಜನೆಗಳು, ತೋಟಗಾರಿಕೆ, ಕೃಷಿ ಮಾರುಕಟ್ಟೆ ಹೀಗೆ ಎಲ್ಲವನ್ನೂ ಒಳಗೊಂಡಿದೆ. ಸರಕಾರದ ಕಣ್ ಕಟ್ ಆಟಕ್ಕೆ ಇದೊಂದು ಸ್ಯಾಂಪಲ್ ಅಷ್ಟೇ.
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 61 ಸಾವಿರ ಕೋಟಿ ರುಪಾಯಿ ಎಂದು ಬಿಂಬಿಸುತ್ತಿರುವ ಸರ್ಕಾರ, ಇದರಲ್ಲಿ ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ, ವಸತಿ, ಕಾರ್ಮಿಕ, ಮಾನವ ಸಂಪನ್ಮೂಲ, ಗ್ರಾಮೀಣಭಿವೃದ್ಧಿ ಇಲಾಖೆಯನ್ನೂ ಸೇರಿಸಿದೆ.
ಇನ್ನು ಒಂದು ರೂಪಾಯಿ ಹೊರೆ ಹಾಕದ ಬಜೆಟ್ ಎಂದು ಸಿಎಂ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಆದರೆ ಈಗಾಗಲೇ ರಾಜ್ಯ ಸರಕಾರ ಪೆಟ್ರೋಲ್ ಮೇಲೆ 33 ರೂ., ಡೀಸೆಲ್ ಮೇಲೆ 20 ರೂ. ಸುಂಕ ವಸೂಲಿ ಮಾಡುತ್ತಿದೆ.
ಬಜೆಟ್ ಮುನ್ನವೇ ಆಸ್ತಿ ತೆರಿಗೆ ಹೆಚ್ಚಿಸಿದೆ. ವಿದ್ಯುತ್, ನೀರಿನ ದರ ಏರಿಕೆ ಮಾಡಿದೆ. ಈಗಾಗಲೇ ಸುಲಿಗೆ ಮಾಡಲು ಆರಂಭಿಸಿರುವ ಬಿಜೆಪಿ ಈಗ ತಾನು ಜನರ ಮೇಲೆ ಹೊರೆ ಹಾಕಿಲ್ಲ ಎಂದು ಸುಳ್ಳು ಹೇಳುತ್ತಿದೆ. ಹೀಗೆ ರಾಜ್ಯ ಸರ್ಕಾರ ತನ್ನ ಹುಳುಕು ಮುಚ್ಚಿಕೊಳ್ಳಲು ಬಜೆಟ್ ನಲ್ಲಿ ಸುಳ್ಳಿನ ಹೊಳೆ ಹರಿಸಿದೆ.
ಇನ್ನು ಈ ಬಾರಿ ಬಜೆಟ್ ನಲ್ಲಿ ನಿಗಮಗಳ ಉದ್ದದ ಪಟ್ಟಿಯನ್ನೇ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕೆಲಸ ಮಾಡಬೇಕು. ಎಲ್ಲ ಜಾತಿ, ಧರ್ಮದ ಜನರ ಹಿತ ಚಿಂತಿಸಬೇಕು.
ಆದರೆ ಈ ಸರ್ಕಾರ ಜಾತಿ, ಧರ್ಮದ ಹೆಸರಲ್ಲಿ ಸಮಾಜ ಒಡೆದು ರಾಜಕೀಯ ಲಾಭ ಪಡೆಯಲು ಹವಣಿಸುತ್ತಿದೆ. ಈ ನಿಗಮಗಳಿಂದಲೇ ಆಯಾ ಸಮುದಾಯದ ಏಳಿಗೆಯಾಗುವುದಾದರೆ, ನಿಗಮಗಳೇ ಇಲ್ಲದ ಬೇರೆ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿಲ್ಲ ಎಂದು ಅರ್ಥವೇ? ಈ ನಿಗಮಗಳ ಹೆಸರಲ್ಲೂ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ. ಹಿಂದುಳಿದ ವರ್ಗಕ್ಕೆ ಸೇರಿದ ಅಂಬೇಡ್ಕರ್, ವಾಲ್ಮೀಕಿ, ಆದಿಜಾಂಬವ, ಭೋವಿ, ತಾಂಡ, ಸಫಾಯಿ ಕರ್ಮಚಾರಿ, ಬಾಬು ಜಗಜೀವನ್ ರಾಮ್, ಮಡಿವಾಳ ಮಾಚಿದೇವ, ಉಪ್ಪಾರ, ಆರ್ಯಶೈವ, ವಿಶ್ವಕರ್ಮ, ಕಾಡುಗೊಲ್ಲ, ಅಂಬಿಗರ ಚೌಡಯ್ಯ, ಸವಿತಾ ಸಮಾಜ – ಹೀಗೆ ಎಲ್ಲ ನಿಗಮಗಳಿಗೂ ಒಟ್ಟಾರೆ ಸರ್ಕಾರ ಕೊಟ್ಟಿರೋದು ಕೇವಲ 500 ಕೋಟಿ ರು. ಅನುದಾನ ಯಾರಿಗೆ ಎಷ್ಟು, ಇದಕ್ಕೆ ಮಾನದಂಡವೇನು ಎಂಬುದನ್ನೂ ವಿವರಿಸಿಲ್ಲ. ಇದು ಜನರಿಗೆ ಟೋಪಿ ಹಾಕುವ ಹುನ್ನಾರವಲ್ಲದೇ ಮತ್ತೇನು?
ಒಟ್ಟಿನಲ್ಲಿ ಈ ಬಜೆಟ್ ನಲ್ಲಿ ರಾಜ್ಯದ ಜನರ ಪರವಾಗಿ ಯಾವುದೇ ಯೋಜನೆ ರೂಪಿಸಿಲ್ಲ. ಇದು ಜನರಿಗೆ ಗಾಳಿ ಗೋಪುರ ತೋರಿಸಿ ದಾರಿ ತಪ್ಪಿಸುವ ಬಜೆಟ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.