Dk Shivakumar: ಶೀಘ್ರ ವಿಜಯೇಂದ್ರ ಹಗರಣ ಬಯಲು: ಡಿಕೆಶಿ
Team Udayavani, Jul 28, 2024, 6:41 AM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಪ್ರಬುದ್ಧ ರಾಜಕಾರಣಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಪದೇಪದೆ ಪರಿಶಿಷ್ಟರ ಬಗ್ಗೆ ಮಾತನಾಡುತ್ತಾರೆ. ಹಾಗಾಗಿ ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ಬಗ್ಗೆ ಮಾತನಾಡಬೇಕು ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದರು.
ರಾಹುಲ್ ಅವರಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಹಾಗೆ ನೋಡಿದರೆ ವಾಲ್ಮೀಕಿ ಹಗರಣದಲ್ಲಿ ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿರುವುದರಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಬೇಕು. ವಿಜಯೇಂದ್ರ ಅವರ ಹಗರಣಗಳನ್ನು ನಾವು ಸದ್ಯದಲ್ಲೇ ಬಹಿರಂಗಪಡಿಸುತ್ತೇವೆ. ಅವರ ಮೇಲೆ ಅಂತಾರಾಷ್ಟ್ರೀಯ ಮಟ್ಟದಿಂದ ಹಣ ವರ್ಗಾವಣೆಯಾಗಿರುವುದು ಸೇರಿದಂತೆ ಅನೇಕ ವಿಚಾರಗಳಿವೆ. ಅವರ ತಂದೆ ಮುಖ್ಯಮಂತ್ರಿಯಾಗಿದ್ದಾಗ ಏನೆಲ್ಲ ಮಾಡಿದ್ದಾರೆ? ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಯಾಕೆ? ಎಂದು ಗೊತ್ತಿದೆ. ಪ್ರಾಮಾಣಿಕರಲ್ಲದ ವಿಜಯೇಂದ್ರಗೆ ಈ ವಿಚಾರದಲ್ಲಿ ಮಾತನಾಡುವ ನೈತಿಕತೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.