Exit Polls: ಈಗಲೂ ನನ್ನ ಭವಿಷ್ಯವೇ ನಿಜ ಆಗಲಿದೆ… ಡಿ.ಕೆ.ಶಿವಕುಮಾರ್
ವಿಧಾನಸಭೆ ಚುನಾವಣೋತ್ತರ ಸಮೀಕ್ಷೆ ಸುಳ್ಳಾಗಿತ್ತು
Team Udayavani, Jun 2, 2024, 10:31 PM IST
ಬೆಂಗಳೂರು: ವಿಧಾನಸಭೆಯ ಚುನಾವಣೋತ್ತರ ಸಮೀಕ್ಷೆ ಭವಿಷ್ಯ ಸುಳ್ಳಾಗಿತ್ತು. ನನ್ನ ಭವಿಷ್ಯವೇ ನಿಜವಾಗಿತ್ತು. ಲೋಕಸಭಾ ಚುನಾವಣೋತ್ತರ ಸಮೀಕ್ಷೆ ವಿಚಾರದಲ್ಲೂ ಅದು ಪುನರಾವರ್ತನೆ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಎಐಸಿಸಿ ಮುಖಂಡರ ಜತೆಗಿನ ವೀಡಿಯೋ ಸಂವಾದದ ಬಳಿಕ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು. ಈ ಸಲವೂ ನನ್ನ ಭವಿಷ್ಯವೇ ನಿಜವಾಗಲಿದೆ. ಯಾಕೆಂದರೆ, ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹಿಸಿರುತ್ತವೆ. ಹೀಗಾಗಿ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ತಲುಪಲಿದೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಅಭಿವೃದ್ಧಿ ವಿಚಾರಗಳ ಮೇಲೆ ಹಾಗೂ ಬಿಜೆಪಿಯವರು ಭಾವನಾತ್ಮಕ ವಿಚಾರಗಳ ಮೇಲೆ ರಾಜಕೀಯ ಮಾಡುತ್ತಾರೆ. ದೇಶದ ವಿಚಾರ ಹೇಳುವುದಿಲ್ಲ, ರಾಜ್ಯದಲ್ಲಿ ಎರಡಂಕಿ ಸೀಟು ಗೆಲ್ಲಲಿದ್ದೇವೆ ಎಂಬ ಆತ್ಮವಿಶ್ವಾಸವಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.