Karnataka: ಅರ್ಹರಿಗೆ ಬಿಪಿಎಲ್ ಕೊಡಿಸಲು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಟಾಸ್ಕ್
ರದ್ದಾದ ಕಾರ್ಡ್‌ಗಳ ಪಟ್ಟಿ ಶಾಸಕರಿಗೆ ರವಾನೆ; ಈ ಕುರಿತು ಪರಿಶೀಲನೆಗೆ ತಂಡ ರಚನೆ
Team Udayavani, Nov 21, 2024, 7:15 AM IST
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ರದ್ದತಿ ಹಾಗೂ ಎಪಿಎಲ್‌ಗೆ ಪರಿವರ್ತನೆಯಾಗಿರುವ ಬಗ್ಗೆ ಬಿಸಿ ಬಿಸಿ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸಂತ್ರಸ್ತ ಬಿಪಿಎಲ್ ಕಾರ್ಡ್‌ದಾರರ ನೆರವಿಗೆ ಧಾವಿಸಲು ಮುಂದಾಗಿದೆ. ಆಯಾ ಕ್ಷೇತ್ರಗಳ ಶಾಸಕರಿಗೆ ಇದರ ನಿರ್ವಹಣೆ ಹೊಣೆಯನ್ನು ನೀಡಲು ಮುಂದಾಗಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರದ್ದಾದ ಬಿಪಿಎಲ್ ಕಾರ್ಡ್‌ಗಳ ಪಟ್ಟಿಯನ್ನು ಆಯಾ ಕ್ಷೇತ್ರಗಳ ಶಾಸಕರಿಗೆ ರವಾನಿಸುತ್ತೇವೆ. ಅವರು ಸ್ಥಳೀಯವಾಗಿ ತಂಡ ರಚಿಸಿ, ಯಾವ ಅರ್ಹರಿಗೆ ರ¨ªಾಗಿದೆ ಎಂಬುದನ್ನು ಪರಿಶೀಲಿಸುತ್ತಾರೆ. ಇನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ತಂಡದವರಿಗೂ ಮನೆ ಮನೆಗೆ ಹೋಗಿ, ಯಾರಿಗಾದರೂ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸುವಂತೆ ಜವಾಬ್ದಾರಿ ನೀಡಲಾಗುವುದು ಎಂದರು.
ಬಡವರಿಗೆ ಆತಂಕ ಬೇಡ
ಕೆಲವು ಕಡೆ ಹೆಚ್ಚು-ಕಡಿಮೆಯಾಗಿದ್ದು, ಎಲ್ಲವನ್ನೂ ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ ಅವರು, ಸರಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.