ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ
Team Udayavani, Jul 7, 2022, 7:15 AM IST
ಬೆಂಗಳೂರು: ಎಪ್ಪತ್ತೈದನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬೆಂಗಳೂರಿನಲ್ಲಿ 1 ಲಕ್ಷ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಜಾಥಾ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಜ್ಜಾಗುತ್ತಿದ್ದಾರೆ.
ಆ. 3ರಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಹುಟ್ಟುಹಬ್ಬದ ಮೂಲಕ ಶಕ್ತಿ ಪ್ರದರ್ಶನ ಒಂದೆಡೆ ಯಾದರೆ, ಮತ್ತೂಂದೆಡೆ ಆ. 15ರಂದು ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್ ಅವರ ಶಕ್ತಿ ಪ್ರದರ್ಶನ ಎಂದೇ ಹೇಳಲಾಗುತ್ತಿದೆ.
ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷಕ್ಕೆ ಏನೆಲ್ಲ ಕಾರ್ಯಕ್ರಮಗಳು ಅನುಕೂಲವಾಗುತ್ತವೋ ಅದಕ್ಕೆ ಪಕ್ಷದ ಅಧ್ಯಕ್ಷನಾಗಿ ನಾನು ಬೆಂಬಲವಾಗಿ ನಿಲ್ಲುತ್ತೇನೆ ಎಂದರು.
ಸೋನಿಯಾ ಸೂಚನೆ
ಸೋನಿಯಾ ಗಾಂಧಿ ಅವರು ಆ. 15ರಂದು ದೇಶದ 75ನೇ ಸ್ವಾತಂತ್ರೊéàತ್ಸವ ಆಚರಣೆ ವಿಚಾರವಾಗಿ ನನಗೆ ಜವಾಬ್ದಾರಿ ವಹಿಸಿದ್ದು, 1 ಲಕ್ಷ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬೆಂಗಳೂರಿನಲ್ಲಿ ಜಾಥಾವನ್ನು ಮಾಡಲಿದ್ದಾರೆ.
ಇದರ ಜತೆಗೆ 75 ಕಿ.ಮೀ ಪಾದಯಾತ್ರೆ ಮಾಡಲು ತಿಳಿಸಿದ್ದು ಇದನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಸಲು ಸೂಚಿಸಲಾಗಿದೆ. ಈ ವಿಚಾರವಾಗಿ ಗುರುವಾರ ಸಭೆ ಕರೆದಿದ್ದೇನೆ. ನಾನು ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದೇನೆ ಎಂದು ಹೇಳಿದರು.
ಹುಟ್ಟುಹಬ್ಬ ತಪ್ಪಲ್ಲ
ಸಿದ್ದರಾಮಯ್ಯ ಓರ್ವ ನಾಯಕ. ಅವರು 75ನೇ ಹುಟ್ಟಹುಬ್ಬ ಆಚರಿಸಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ ಡಿ.ಕೆ. ಶಿವಕುಮಾರ್, ಅದು ಅವರ ವೈಯಕ್ತಿಕ ಹಾಗೂ ಅಭಿಮಾನಿಗಳ ಇಚ್ಛೆಗೆ ಬಿಟ್ಟದ್ದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.