ಸದನ ಸಮಿತಿ ಸಭೆಗೆ ಹಾಜರಾಗಿ ಎಚ್ಡಿಕೆಗೆ ಡಿಕೆಶಿ ಮನವಿ
Team Udayavani, Nov 5, 2017, 12:54 PM IST
ಬೆಂಗಳೂರು: ಕಾನೂನುಬಾಹಿರವಾಗಿ ಇಂಧನ ಖರೀದಿ ಮಾಡಿರುವ ಕುರಿತು ರಚನೆಯಾಗಿರುವ ಸದನ ಸಮಿತಿಯ ಕೊನೆಯ ಸಭೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬರಬೇಕು ಎಂದು ಸದನ ಸಮಿತಿ ಅಧ್ಯಕ್ಷರೂ ಆಗಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸದನ ಸಮಿತಿ ವರದಿಗೆ ಸಹಿ ಹಾಕುವುದಿಲ್ಲ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಸದನ ಸಮಿತಿಯ ಮುಂದೆ ತಮ್ಮ ಪಕ್ಷದ ಅಭಿಪ್ರಾಯ ಏನು ಎಂದು ಲಿಖೀತವಾಗಿ ಹೇಳಿಕೆ ನೀಡಿದ್ದಾರೆ. ರಾಜಕೀಯವಾಗಿ ಅವರು ಹೊರಗಡೆ ಏನು ಹೇಳುತ್ತಾರೋ ಅದಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ಸದನ ಸಮಿತಿ ನ. 7ರಂದು ಅಂತಿಮ ಸಭೆ ನಡೆಸಲಾಗುತ್ತಿದೆ. ಕುಮಾರಸ್ವಾಮಿ ಅವರು ಅಂದಿನ ಸಭೆಗೆ ಹಾಜರಾಗದಿದ್ದರೆ, ಸದನ ಸಮಿತಿ ಏನು ವರದಿ ನೀಡಿದೆ ಎಂದು ಅವರಿಗೆ ತಿಳಿಯುವುದಿಲ್ಲ. ಅವರು ಜವಾಬ್ದಾರಿ ಇರುವ ವ್ಯಕ್ತಿಯಾಗಿರುವುದರಿಂದ ಅಂತಿಮ ಸಭೆಗೆ ಹಾಜರಾಗಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.