ಡಿಕೆಶಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, Oct 12, 2019, 3:03 AM IST
ಬೆಂಗಳೂರು: ಐಟಿ ದಾಳಿ ವೇಳೆ ದೆಹಲಿಯ ನಿವಾಸಗಳಲ್ಲಿ ಸಿಕ್ಕ 8.6 ಕೋಟಿ ರೂ.ದಾಖಲೆ ಇಲ್ಲದ ಹಣ ಪತ್ತೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮತ್ತವರ ಆಪ್ತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.
ಪ್ರಕರಣದ ಆರೋಪದಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಮತ್ತವರ ಆಪ್ತರಾದ ಆಂಜನೇಯ ಹನುಮಂತಯ್ಯ ಹಾಗೂ ಎನ್.ರಾಜೇಂದ್ರ ಹೈಕೋರ್ಟ್ಗೆ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.
ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರು ಹಾಗೂ ಪ್ರತಿವಾದಿ ಆದಾಯ ತೆರಿಗೆ ಇಲಾಖೆ ಪರ ವಕೀಲರ ವಾದ-ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿರುವುದಾಗಿ ಹೇಳಿತು. ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಈಗಾಗಲೇ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.