ಮೌನ ಮುರಿಯಲಿಲ್ಲ ದೇವೇಗೌಡ, ಬರಲೇ ಇಲ್ಲ ರೇವಣ್ಣ
Team Udayavani, Nov 8, 2017, 7:49 AM IST
ಮೈಸೂರು: ಮೌನ ಮುರಿಯದ ಎಚ್.ಡಿ.ದೇವೇಗೌಡ, ಸಮಾವೇಶದಿಂದ ದೂರ ಉಳಿದ ಎಚ್.ಡಿ.ರೇವಣ್ಣ, ಸಮಾವೇಶಕ್ಕೆ ಹರಿದು ಬಂದ ಜನ ಸಾಗರ..ಇವು ಮಂಗಳವಾರ ಚಾಮುಂಡೇಶ್ವರಿ ಕ್ಷೇತ್ರದ ಲಿಂಗದೇವರು ಕೊಪ್ಪಲಿನಲ್ಲಿ ನಡೆದ ಜೆಡಿಎಸ್ ಸಮಾವೇಶದ ಹೈಲೈಟ್ಸ್. ಕಾರ್ತಿಕ ಸೋಮವಾರದ ಪ್ರಯುಕ್ತ ಹರದನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ದೇವೇಗೌಡರು, ಸಂಜೆ ವೇಳೆಗೆ ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ಮಂಗಳವಾರ
ಚಾಮುಂಡಿಬೆಟ್ಟದಲ್ಲಿ ಕರ್ನಾಟಕ ವಿಕಾಸ ವಾಹಿನಿಗೆ ಚಾಲನೆ, ಉತ್ತನಹಳ್ಳಿ ಜ್ವಾಲಾಮುಖೀ ತ್ರಿಪುರ ಸುಂದರಿ ಅಮ್ಮನವರ ದರ್ಶನ ಹಾಗೂ ಹಿನಕಲ್‌ನ ನನ್ನೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ಎಲ್ಲ ಸಂದರ್ಭದಲ್ಲೂ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ದೇವೇಗೌಡರು, ಸಮಾವೇಶದ ವೇದಿಕೆಯಲ್ಲಿ ಸುದೀರ್ಘ ಭಾಷಣ ಮಾಡುತ್ತಾರೆಂಬ ನಿರೀಕ್ಷೆ ಇತ್ತು. ಆದರೆ, ಸಮಯದ ಅಭಾವದ ಕಾರಣ ನೀಡಿ ಅಲ್ಲಿಯೂ ಕೂಡ ಭಾಷಣ ಮಾಡದೆ ಹೊರಟರು.
ಈ ಮಧ್ಯೆ, ಸೋಮವಾರ ಹರದನಹಳ್ಳಿಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದ ಎಚ್.ಡಿ.ರೇವಣ್ಣ ಮತ್ತು ಅವರ ಕುಟುಂಬದವರು ಸಮಾವೇಶದಿಂದ ದೂರವೇ ಉಳಿದದ್ದು ಚರ್ಚೆಗೆ ಗ್ರಾಸವಾಗಿತ್ತು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆಂಬ ಕಾರಣಕ್ಕೆ ಈ ಸಮಾವೇಶ ಆಯೋಜಿಸಿಲ್ಲ ಎಂದು ಕುಮಾರಸ್ವಾಮಿ ಹೇಳಿದರಾದರೂ ಚಾಮುಂಡೇಶ್ವರಿಯಲ್ಲಿ
ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಈ ಸಮಾವೇಶ ಸಾಕ್ಷಿಯಾಯಿತು. ನೂರಾರು ವಾಹನಗಳಲ್ಲಿ ಸಮಾವೇಶಕ್ಕೆ ಜನರನ್ನು ಕರೆ ತರಲಾಗಿತ್ತು. ಹೀಗಾಗಿ ಸಮಾವೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು.
ಸಮಾವೇಶಕ್ಕೆ ಬರುವವರಿಗೆ ಹಣ ಹಂಚಿಕೆ
ಸಮಾವೇಶಕ್ಕೆ ಬರುವ ಕಾರ್ಯಕರ್ತರಿಗೆ ಸಾರ್ವಜನಿಕವಾಗಿ ಹಣ ಹಂಚಿದ ಘಟನೆ ನಡೆದಿದೆ. ರಿಂಗ್ ರಸ್ತೆಯ ಎಚ್.ಡಿ.ಕೋಟೆ ಜಂಕ್ಷನ್‌ನಲ್ಲಿ ಗುಂಪು ಕಟ್ಟಿಕೊಂಡು ಸಮಾವೇಶಕ್ಕೆ ದ್ವಿಚಕ್ರ ವಾಹನಗಳಲ್ಲಿ ಹಾಗೂ ಬಸ್‌ಗಳಲ್ಲಿ ಹೊರಡುವ ಜನರಿಗೆ 500 ರೂ.ನೋಟು ನೀಡಿ ಕಳುಹಿಸಲಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.