ಮನೋಸ್ಥೈರ್ಯ ಕುಗ್ಗಬಾರದು: ತಜ್ಞರ ಅಭಿಮತ
Team Udayavani, Apr 16, 2020, 10:48 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ರಾಜಧಾನಿಯಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರ ಮನೋಸ್ಥೈರ್ಯ ಕುಗ್ಗದಂತೆ ತಡೆಯಲು ಅಗತ್ಯವಿರುವ
ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು. ಹಾಗೆಯೇ ಎಲ್ಲರ ಆರೋಗ್ಯ ತಪಾಸಣೆ ನಡೆಸಿ ಸೋಂಕು ಕಾಣಿಸಿಕೊಳ್ಳದಿದ್ದರೆ ಸುರಕ್ಷಿತವಾಗಿ ಅವರ ಸ್ವಂತ ಊರುಗಳಿಗೆ ಕಳುಹಿಸುವ ವ್ಯವಸ್ಥೆ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ತಜ್ಞರಿಂದ ವ್ಯಕ್ತವಾಗಿದೆ.
ಅಸಂಘಟಿತ ವಲಯದ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ದುಡಿಮೆ ಇಲ್ಲದೆ ಹಣ ಸಿಗುತ್ತಿಲ್ಲ. ಸರಿಯಾಗಿ ಊಟದ ವ್ಯವಸ್ಥೆಯೂ ಆಗುತ್ತಿಲ್ಲ. ಸೂಕ್ತ ವಸತಿ ಕೂಡ ಇಲ್ಲದವರು ತಮ್ಮ ಊರುಗಳಿಗೆ ತೆರಳಲು ಹಂಬಲಿಸಬಹುದು. ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಸೋಂಕು ಇಲ್ಲದಿರುವುದು ದೃಢಪಟ್ಟರೆ ಸಾಮಾಜಿಕ ಅಂತರ ಕಾಯ್ದುಕೊಂಡ ಸಾರಿಗೆ ವ್ಯವಸ್ಥೆಯಡಿ ಅವರನ್ನು ಸುರಕ್ಷಿತವಾಗಿ ಸ್ವಂತ ಊರುಗಳಿಗೆ ಕಳುಹಿಸಿಕೊಡುವುದು ಸೂಕ್ತವೆನಿಸಿದೆ. ಅವರು ತಮ್ಮ ಊರಿನಲ್ಲಿ ತಮಗೆ ಗೊತ್ತಿರುವ ಕೆಲಸದಲ್ಲಿ ತೊಡಗಿಸಿಕೊಂಡು ನೆಮ್ಮದಿಯ ಜೀವನ ನಡೆಸಲು ಅನುಕೂಲವಾಗಬಹುದು ಎಂದು “ಸಿವಿಕ್’ ಸಂಸ್ಥೆಯ ಕಾರ್ಯನಿರ್ವಾಹಕ ಟ್ರಸ್ಟಿ ಕಾತ್ಯಾಯಿನಿ ಚಾಮರಾಜ್ ಅಭಿಪ್ರಾಯಪಡುತ್ತಾರೆ.
ಮಾಸಿಕ ಮನೆ ಬಾಡಿಗೆಗೆ ಮಾಲೀಕರು ಒತ್ತಡ ಹಾಕಬಾರದು ಎಂದು ಸರ್ಕಾರ ಸೂಚಿಸಿದ್ದರೂ ಹಲವೆಡೆ ಕೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರಿಗೆ ಬಾಡಿಗೆ ಹಣಕ್ಕಾಗಿ ಒತ್ತಡ ಹೇರಲಾಗುತ್ತಿದೆ. ಬಹಳಷ್ಟು ಕಡೆ ದುಡಿಮೆ ಇಲ್ಲದ ಕಾರಣ ಗುತ್ತಿಗೆದಾರರು ಕೂಲಿ ಕಾರ್ಮಿಕರಿಗೆ ವೇತನ ನೀಡುತ್ತಿಲ್ಲ. ಅಲ್ಲದೇ ನಿಯಮಿತವಾಗಿ ಈ ಕಾರ್ಮಿಕರಿಗೆ ಊಟ ಸಿಗುತ್ತಿಲ್ಲ. ಊಟ, ಹಣ, ವಸತಿ ಸೌಲಭ್ಯವಿಲ್ಲದೆ ಸಂಕಷ್ಟದಲ್ಲಿರುವ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ಇಚ್ಛಿಸಬಹುದು. ಹಾಗಾಗಿ ಅವರಿಗೆ ಇಲ್ಲೇ ತೊಂದರೆಯಿಲ್ಲದೆ ಕಾಲ ಕಳೆಯುವ ವ್ಯವಸ್ಥೆ ಕಲ್ಪಿಸುವಂತಾಗಬೇಕು ಎನ್ನುತ್ತಾರೆ.
ಆಪ್ತ ಸಮಾಲೋಚನೆ ಅಗತ್ಯ: ನಗರದಲ್ಲಿನ ವಲಸೆ ಕಾರ್ಮಿಕರಿಗೆ ಸದ್ಯದ ಲಾಕ್‌ಡೌನ್ ಅವಧಿ ಕಳೆಯುವುದು ಸವಾಲಾಗಿದ್ದರೆ ಮತ್ತೂಂದೆಡೆ ಲಾಕ್‌ಡೌನ್ ಮುಗಿದ ನಂತರ ಭವಿಷ್ಯವೇನು ಎಂಬ ಆತಂಕವಿರುತ್ತದೆ. ಅವರ ಜೀವನೋಪಾಯಕ್ಕೆ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿ ಮುಂದುವರಿಯಬೇಕು ಎಂದು ನಿವೃತ್ತ ಐಎಎಸ್ ಅಧಕಾರಿ ಮದನ್ ಗೋಪಾಲ್ ಹೇಳುತ್ತಾರೆ.
ಬೆಂಗಳೂರು ನಗರದಲ್ಲಿ ಬಿಹಾರ, ಒಡಿಶಾ ಸೇರಿದಂತೆ ಇತರೆ ಭಾಗದ ಕಾರ್ಮಿಕರು ನೆಲೆಸಿದ್ದಾರೆ. ಲಾಕ್‌ಡೌನ್ ಅವಧಿಯಲ್ಲಿ ಅವರ ಮನೋಸ್ಥೈರ್ಯ ಕುಗ್ಗದಂತೆ
ತಡೆಯಲು ಗಮನ ಹರಿಸಬೇಕು. ಮುಖ್ಯವಾಗಿ ತಮ್ಮ ಕುಟುಂಬದವರೊಂದಿಗೆ ನಿರಂತರವಾಗಿ ಆಡಿಯೋ, ವಿಡಿಯೋ ಸಂವಾದದ ಮೂಲಕ ಮಾತುಕತೆ ನಡೆಸುವ ವ್ಯವಸ್ಥೆ ಕಲ್ಪಿಸಬೇಕು. ನಗರದಲ್ಲಿರುವ ಆ ರಾಜ್ಯಗಳ ಸಂಘ- ಸಂಸ್ಥೆಗಳೊಂದಿಗೆ ಸಂಪರ್ಕಿಸಿ ವ್ಯವಹರಿಸಲು ಅವಕಾಶ ನೀಡಬೇಕು. ಇದರಿಂದ ವಲಸೆ ಕಾರ್ಮಿಕರಿಗೂ ಒಂದಿಷ್ಟು ನೆರವಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
BBK11: ದಯವಿಟ್ಟು ಬಿಗ್ ಬಾಸ್ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Manipal: ಅಪಘಾತ ತಡೆಯಲು ಹೀಗೆ ಮಾಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.