ಇವಿಎಂ ಬೇಡ, ಬ್ಯಾಲೆಟ್ ಪೇಪರ್ಗಾಗಿ ಕಾಂಗ್ರೆಸ್ ಆಗ್ರಹ
Team Udayavani, Dec 15, 2017, 3:23 PM IST
ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಇವಿಎಂ (ವಿದ್ಯುನ್ಮಾನ ಮತಯಂತ್ರ) ಬದಲಿಗೆ ಮತಪತ್ರಗಳನ್ನೇ ಬಳಕೆ ಮಾಡಬೇಕೆಂದು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಇವಿಎಂ ಮತಯಂತ್ರಗಳ ಬಗ್ಗೆ ದೇಶಾದ್ಯಂತಸಂಶಯ ವ್ಯಕ್ತವಾಗುತ್ತಿದೆ ಹೀಗಾಗಿ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ಗಳನ್ನೇ ಬಳಸಿದರೆ ಒಳ್ಳೆಯದು’ ಎಂದರು.
‘ಉತ್ತರಪ್ರದೇಶದಲ್ಲಿ ಮಾಯಾವತಿ, ಅಖೀಲೇಶ್ ಯಾದವ್, ಅಡ್ವಾಣಿ ಅವರೂ ಮತ ಯಂತ್ರಗಳ ಬಗ್ಗೆ ಸಂಶಯ ವ್ಯಕ್ತ ಪಡಿಸಿದ್ದಾರೆ. ಅಮೆರಿಕ, ಜರ್ಮನಿಯಂತ ದೇಶಗಳು ಇವಿಎಂಗೆ ಹೋಗಿ ಈಗ ಮತ್ತೆ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸುತ್ತಿವೆ. ಇಲ್ಲೂ ಹಾಗೇ ಆಗಬೇಕು’ ಎಂದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರೂ ಬ್ಯಾಲೆಟ್ ಪತ್ರಗಳ ಮೂಲಕ ಚುನಾವಣೆ ನಡೆಸಲು ಒತ್ತಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.