ವೈದ್ಯರಿಗೆ ಸಿದ್ದು ಮದ್ದು; ಅಂತಿಮ ತೀರ್ಮಾನ ಸಿಎಂಗೆ


Team Udayavani, Nov 10, 2017, 7:57 AM IST

10-3.jpg

ಬೆಂಗಳೂರು: ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕದಲ್ಲಿನ (ಕೆಪಿಎಂಇ) ಕೆಲವು ಆಕ್ಷೇಪಾರ್ಹ ಅಂಶಗಳನ್ನು ಮರುಪರಿಶೀಲಿಸಲು ಗುರುವಾರ ರಾಜ್ಯ ಸಚಿವ ಸಂಪುಟ ಮುಖ್ಯ ಮಂತ್ರಿಗಳಿಗೆ ಅಧಿಕಾರ ನೀಡಿದೆ. ಇದರೊಂದಿಗೆ ಖಾಸಗಿ ವೈದ್ಯರ ಪ್ರತಿಭಟನೆಯ ಬಿಸಿಗೆ ರಾಜ್ಯ ಸರ್ಕಾರ ಕೊಂಚ ಮಣಿದಂತೆ ಕಾಣುತ್ತಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕ ಕುರಿತು ಸುದೀರ್ಘ‌ ಚರ್ಚೆ ನಡೆದು, ಮುಂದಿನ ಸೋಮವಾರದಿಂದ ಬೆಳಗಾವಿಯಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲು ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೂ, ಅದರಲ್ಲಿನ ಕೆಲವು ಅಂಶಗಳ ಬಗ್ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಂತಿಮವಾಗಿ ಮತ್ತೂಂದು ಬಾರಿ ಪರಾಮರ್ಶಿಸಿ, ಸಂಬಂಧ ಪಟ್ಟವ ರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪುಟ ಅಧಿಕಾರ ನೀಡಿದೆ. ಹೀಗಾಗಿ, ತಪ್ಪು ಮಾಡುವ ಖಾಸಗಿ ವೈದ್ಯಕೀಯ ಸಂಸ್ಥೆಗಳು ಹಾಗೂ ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಂಡು ಎರಡು ವರ್ಷ ಜೈಲು ಶಿಕ್ಷೆಗೆ ಗುರಿ ಪಡಿಸುವುದು. 5 ಲಕ್ಷದವರೆಗೂ ದಂಡ ವಿಧಿಸುವುದು ಮತ್ತು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ದೂರು ನಿವಾರಣಾ ಸಮಿತಿಗಳ ರಚನೆ ಮಾಡುವ ಪ್ರಸ್ತಾವನೆಯನ್ನು ಮರುಪರಿಶೀಲಿಸುವ ಸಾಧ್ಯತೆಗಳಿವೆ. ಈ ಅಂಶಗಳ ಬಗ್ಗೆಯೇ ಖಾಸಗಿ ವೈದ್ಯಕೀಯ ಸಂಸ್ಥೆಗಳಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಖಾಸಗಿ ವೈದ್ಯರು ಈಚೆಗೆ ಒಂದು ದಿನದ ಮುಷ್ಕರ ನಡೆಸಿದ್ದಲ್ಲದೆ, ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಸಂದರ್ಭ “ಬೆಳಗಾವಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು.

ಗುರುವಾರ ನಡೆದ ಸಂಪುಟ ಸಭೆಯಲ್ಲಿಯೂ ಹಲವು ಸಚಿವರು ಖಾಸಗಿ ವೈದ್ಯರ ನಿಲುವಿನ ಪರ ವಹಿಸಿ ಮಾತನಾಡಿದರು. ಖಾಸಗಿ ಆಸ್ಪತ್ರೆಗಳ ವ್ಯವಹಾರ ಕಾರ್ಯ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರಲು ಮುಂದಾಗಿರುವ ಕ್ರಮದ ಬಗ್ಗೆ ಅನೇಕ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಸರ್ಕಾರ ಬಡವರ ಪರವಾದ ವಿಧೇಯಕ ಜಾರಿಗೆ ಮುಂದಾಗಿದ್ದು, ಇದರಿಂದ ಖಾಸಗಿ ವೈದ್ಯಕೀಯ ಸಂಸ್ಥೆಗಳ ಧನ ದಾಹಕ್ಕೆ ಬ್ರೇಕ್‌ ಬೀಳಲಿದೆ.ಅಲ್ಲದೇ ಬಡವರಿಗೆ ಅನುಕೂಲವಾಗಲಿದೆ ಎಂದು ಆರೋಗ್ಯ ಸಚಿವ ರಮೇಶ್‌ ಕುಮಾರ್‌ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌ ಸಂಪುಟ ಸಹೋದ್ಯೋಗಿಗಳಿಗೆ ವಿವರಣೆ ನೀಡುವ ಪ್ರಯತ್ನ ನಡೆಸಿದ್ದಾರೆ.

ಆದರೆ, ಅವರ ವಾದಕ್ಕೆ ಅನೇಕ ಹಿರಿಯ ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರೇ ವಿಧೇಯಕದ ಕುರಿತು ಪರಾಮರ್ಶೆ ನಡೆಸಿ, ವಿಧೇಯಕದ ಸಾಧಕ ಬಾಧಕಗಳ ಕುರಿತಂತೆ ಸಂಬಂಧ ಪಟ್ಟವರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದ್ದಾರೆಂದು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಹೇಳಿದರು. ಸಿಎಂ ಬೆಳಗಾವಿ ಚಳಿಗಾಲದ ಅಧಿವೇಶನದ ಒಳಗೆಯೇ ಸಂಬಂಧ ಪಟ್ಟವರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡರೆ,  ಇದೇ  ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. 

ಆಕ್ಷೇಪಾರ್ಹ ಅಂಶ ಕೈಬಿಟ್ಟರೆ ಹೋರಾಟ ವಾಪಸ್‌
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ (ಕೆಪಿಎಂಇ) ತಿದ್ದುಪಡಿ ವಿಧೇಯಕದಲ್ಲಿ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಸರ್ಕಾರ ಕೈಬಿಡುವವರೆಗೂ ಖಾಸಗಿ ವೈದ್ಯರ ಹೋರಾಟದಲ್ಲಿಯಾವುದೇ ಬದಲಾವಣೆ ಇಲ್ಲ ಎಂದು ಭಾರತೀಯ ವೈದ್ಯ ಸಂಘದ (ಐಎಂಎ) ರಾಜ್ಯ ಶಾಖೆ ಸ್ಪಷ್ಟಪಡಿಸಿದೆ. ತಿದ್ದುಪಡಿ ವಿಧೇಯಕ ಮಂಡನೆಗೂ ಮುನ್ನ ಖಾಸಗಿ ವೈದ್ಯರು, ಆಸ್ಪತ್ರೆಗಳ ಆಕ್ಷೇಪಣೆಗಳ ಬಗ್ಗೆ ಪುನರ್‌ಪರಿಶೀಲನೆಗಾಗಿ ಸಭೆ ನಡೆಸಲು ಸಿಎಂ ನಿರ್ಧರಿಸಿರುವುದನ್ನು ಸಂಘ ಸ್ವಾಗತಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸಂಘದ ರಾಜ್ಯ ಶಾಖೆ ಅಧ್ಯಕ್ಷ ಡಾ.ಎಚ್‌.ಎನ್‌. ರವೀಂದ್ರ, “”ವಿಧೇಯಕದ ತಿದ್ದುಪಡಿಗೆ ಸಂಬಂಧಿಸಿದಂತೆ ಖಾಸಗಿ ವೈದ್ಯರ ಆಕ್ಷೇಪಣೆ ಆಲಿಸಲು ಮುಖ್ಯಮಂತ್ರಿಗಳು ಸಭೆ ಕರೆಯಲು ತೀರ್ಮಾನಿಸಿರುವುದು ಸ್ವಾಗತಾರ್ಹ. ವಿಧೇಯಕದಲ್ಲಿನ ಪ್ರಸ್ತಾಪಿತ ಅಂಶಗಳಿಂದ ಉಂಟಾಗುವ ಪರಿಣಾಮದ ಬಗ್ಗೆಯೂ ಯೋಚಿಸಬೇಕು” ಎಂದಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.