ವೈದ್ಯರ ಮುಷ್ಕರ: ಮಣಿದ ಸರಕಾರ


Team Udayavani, Nov 18, 2017, 8:01 AM IST

govt.jpg

ಬೆಳಗಾವಿ: ಅಂತೂ ಇಂತೂ 60 ಮಂದಿ ಪ್ರಾಣಬಿಟ್ಟ ಬಳಿಕ ರಾಜ್ಯ ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರ ನಡುವಿನ ಹಗ್ಗ ಜಗ್ಗಾಟಕ್ಕೆ ತೆರೆ ಬಿದ್ದಿದೆ. ಕರ್ನಾಟಕ ಖಾಸಗಿ ವೈದ್ಯರ ನಿಯಂತ್ರಣ ಮಸೂದೆಯಲ್ಲಿ ಕೆಲವು ಅಂಶಗಳನ್ನು ಕೈಬಿಡಲು ಸರಕಾರ ನಿರ್ಧರಿಸಿದ್ದು, ವೈದ್ಯರು ತಮ್ಮ ಪಟ್ಟು ಸಡಿಲಿಸಿದ್ದಾರೆ. ಸೋಮವಾರವೇ ಕೆಲವು ತಿದ್ದುಪಡಿಗಳೊಂದಿಗೆ ಮಸೂದೆ ಮಂಡನೆಯಾಗಲಿದೆ.

ವೈದ್ಯರ ಮುಷ್ಕರಕ್ಕೆ ಕಾರಣವಾದ ಪ್ರಮುಖ ಬೇಡಿಕೆಗಳಿಗೆ ಸರಕಾರ ಮಣಿದಿದೆ. ಜತೆಗೆ 2007ರ ಮೂಲ ಕಾಯ್ದೆಯಲ್ಲೇ ಇದ್ದ ಜೈಲು ಶಿಕ್ಷೆ ರದ್ದುಗೊಳಿಸಿ ಕೇವಲ ದಂಡ ಮಾತ್ರ ಉಳಿಸಿಕೊಳ್ಳಲಾಗಿದೆ. ಅದೇ ರೀತಿ ಕೆಪಿಎಂಇ ಮಸೂದೆಯಲ್ಲಿದ್ದ ಸಿಇಒ ಅಧ್ಯಕ್ಷತೆಯ ದೂರು ನಿವಾರಣೆ ಸಮಿತಿ ಜವಾಬ್ದಾರಿಯನ್ನು ನೋಂದಣಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ. ಸಾಮೂಹಿಕ ದರ ನಿಗದಿ ಕೈಬಿಟ್ಟು ಸರಕಾರಿ ಯೋಜನೆಗಳಿಗೆ ಮಾತ್ರ ತಾನು ದರ ನಿಗದಿ ಮಾಡಲು ಸರಕಾರ ಒಪ್ಪಿದೆ. ಇನ್ನು ವೈದ್ಯರ ವಿರುದ್ಧ ನಿರ್ಲಕ್ಷ್ಯದ ದೂರು ಬಂದರೆ ವಕೀಲರಿಲ್ಲದೆ ವೈದ್ಯರೇ ಖುದ್ದಾಗಿ ಹಾಜರಾಗಬೇಕು ಎಂಬ ಅಂಶವನ್ನು ಸಡಿಲಿಸಿ ವಕೀಲರ ಮೂಲಕ ವಾದ ಮಾಡಲು ಅವಕಾಶ ಕಲ್ಪಿಸುವು
ದಾಗಿ ಸರಕಾರ ಹೇಳಿದೆ. ಇದಕ್ಕೆ ವೈದ್ಯ ಸಂಘಟನೆಗಳ ಪ್ರಮುಖರು ಒಪ್ಪಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ನಡೆದ ಆರೋಗ್ಯ ಸಚಿವರು ಹಾಗೂ ವೈದ್ಯ ಸಂಘಟನೆಗಳ ಪ್ರಮುಖರೊಂದಿಗಿನ ಸಭೆಯಲ್ಲಿ ಸುಮಾರು ಮೂರು ಗಂಟೆ ಕಾಲ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ.

ಚಿಕಿತ್ಸೆ ವೇಳೆ ನಿರ್ಲಕ್ಷ éದಿಂದ ರೋಗಿ ಸತ್ತರೆ ವೈದ್ಯರಿಗೆ ಜೈಲು ಶಿಕ್ಷೆ ವಿಧಿಸುವುದು, ಖಾಸಗಿ ಆಸ್ಪತ್ರೆಗಳಿಗೆ ಸರಕಾರ ದರ ಪಟ್ಟಿ  ನಿಗದಿಪಡಿ ಸುವುದು, ವೈದ್ಯರ ವಿರುದ್ಧ ದೂರು ಬಂದರೆ ದೂರು ಪ್ರಾಧಿಕಾರದ ಮುಂದೆ ವಕೀಲರಿಲ್ಲದೆ ವೈದ್ಯರೇ ಖುದ್ದು ಹಾಜರಾಗುವುದು, ಸುಳ್ಳು ದೂರು ನೀಡುವುದು ಹಾಗೂ ಈಗಾ ಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನೋಂದಣಿ ಪ್ರಾಧಿಕಾರ ಇರುವಾಗ ಸಿಇಓ ನೇತೃತ್ವದಲ್ಲಿ ದೂರು ಪ್ರಾಧಿಕಾರ ರಚಿಸುವ ಬಗ್ಗೆ ವೈದ್ಯ ಸಂಘಟನೆಗಳ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಮಂತ್ರಿ ಮತ್ತು ಆರೋಗ್ಯ ಸಚಿವರು, 2007ರ ಮೂಲ ಕಾಯ್ದೆಯಲ್ಲೇ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ವೈದ್ಯರಿಗೆ 6 ತಿಂಗಳಿನಿಂದ 3 ವರ್ಷ ದವರೆಗೆ ಶಿಕ್ಷೆ ವಿಧಿಸುವ ಪ್ರಸ್ತಾವವಿದೆ. ತಿದ್ದುಪಡಿ ವೇಳೆ ಜೈಲು ಶಿಕ್ಷೆ ರದ್ದು ಗೊಳಿಸಲಾಗುವುದು. 

ಆದರೆ, ನೋಂದಣಿ ಇಲ್ಲದೆ ಕ್ಲಿನಿಕ್‌ ಅಥವಾ ಆಸ್ಪತ್ರೆಗಳನ್ನು ಆರಂಭಿಸುವವರು, ನಕಲಿ ವೈದ್ಯರಿಗೆ ಜೈಲು ಶಿಕ್ಷೆಯಿಂದ ವಿನಾಯಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಅದೇ ರೀತಿ ದರ ಪಟ್ಟಿ ವಿಚಾರದಲ್ಲಿ ಸರಕಾರಿ ಯೋಜನೆಗಳಿಗೆ ಮಾತ್ರ (ಯೂನಿವರ್ಸಲ್‌ ಹೆಲ್ತ್‌ ಕಾರ್ಡ್‌ ಯೋಜನೆ) ಸರಕಾರ ದರಪಟ್ಟಿ ವಿಧಿಸುತ್ತದೆ. ಖಾಸಗಿಯಾಗಿ ಯಾರಾದರೂ ಆಸ್ಪತ್ರೆಗೆ ದಾಖಲಾದರೆ ಆಸ್ಪತ್ರೆಗಳೇ ದರ ನಿಗದಿಪಡಿಸಬಹುದು. ಆದರೆ, ಬಿಪಿಎಲ್‌ ಕಾರ್ಡುದಾರರಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕಿದ್ದು, ಈ ವೆಚ್ಚವನ್ನು ಸರಕಾರ ನಿಗದಿಪಡಿಸಿದ ದರದಂತೆ ಪಾವತಿಸಲಾಗುತ್ತದೆ ಎಂದೂ ಸಿಎಂ ತಿಳಿಸಿದರು.

ವೈದ್ಯರ ಮುಷ್ಕರದಿಂದ ಜನ ಸತ್ತಿದ್ದಕ್ಕೆ ಸಾಕ್ಷಿ ಏನಿದೆ?:  ವೈದ್ಯರ ಮುಷ್ಕರದಿಂದಲೇ ಜನ ಸತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಏನಿದೆ?  ನೋಟು ಅಮಾನ್ಯ ಸಂದರ್ಭ ನೂರಾರು ಜನ ಸತ್ತರಲ್ಲ, ಅದಕ್ಕೆ ಯಾರು ಜವಾಬ್ದಾರಿ?

ಖಾಸಗಿ ವೈದ್ಯರು ಮುಷ್ಕರ ನಡೆಸಿದ್ದರಿಂದ ಸಕಾಲದಲ್ಲಿ ಚಿಕಿತ್ಸೆ ಲಭ್ಯವಾಗದೆ 60ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇದಕ್ಕೆ ಯಾರು ಜವಾಬ್ದಾರಿ ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ. ಯಾರು ಸತ್ತಿ¨ªಾರೆ ಎಂಬುದನ್ನು ಪತ್ರಿಕೆಯಲ್ಲಿ ನೋಡಿದ್ದೇವೆ. ಆದರೆ, ಯಾವುದಕ್ಕೆ ಸತ್ತರು ಎಂಬುದು ಗೊತ್ತಿಲ್ಲ. ವೈದ್ಯರ ಮುಷ್ಕರದಿಂದ ಚಿಕಿತ್ಸೆ ಸಿಗದೇ ಸತ್ತರು ಎಂಬುದಕ್ಕೆ ಸಾಕ್ಷಿ ಏನಿದೆ? ಎಂದು ಮರುಪ್ರಶ್ನೆ ಮಾಡಿದರು. ಈ ಬಗ್ಗೆ ಇದುವರೆಗೆ ಯಾವುದೇ ದೂರು ಬಂದಿಲ್ಲ. ದೂರು ಬಂದರೆ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ವೈದ್ಯರ ಒತ್ತಡಕ್ಕೆ ಮಣಿದು  ಮಸೂದೆಯಲ್ಲಿ ತಿದ್ದುಪಡಿ ಮಾಡಲಾಗುತ್ತದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ, ಅದನ್ನು ಈಗ ಹೇಳಲು ಸಾಧ್ಯವಿಲ್ಲ.  ಮಸೂದೆಯಲ್ಲಿ ಏನಿದೆ ಎಂಬುದು ಸದನದಲ್ಲಿ ಗೊತ್ತಾಗುತ್ತದೆ ಎಂದರು. 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.