ಸುಮಲತಾಗೆ ಟಿಕೆಟ್ ಇಲ್ಲ?
Team Udayavani, Feb 27, 2019, 1:08 AM IST
ಬಳ್ಳಾರಿ: ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ವಿಚಾರವಾಗಿ ರಾಜ್ಯದ ನಾಯಕರ ಜತೆ ಚರ್ಚಿಸಲಾಗುವುದು ಎಂದು ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿ, ಈ ಹಿಂದಿನ ಉಪಚುನಾವಣೆ ಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿತ್ತು. ಈ ಬಾರಿ ಕೂಡ ಮಂಡ್ಯವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲಾಗುವುದು. ಜೆಡಿಎಸ್‌ನೊಂದಿಗೆ ಕಾಂಗ್ರೆಸ್ ಪಕ್ಷದ ಸ್ನೇಹ ಮುಂದುವರಿಯುತ್ತದೆ ಎಂದರು. ಸುಮಲತಾ ಅವರು ರಾಜಕೀಯಕ್ಕೆ ಬಂದಿರೋದು ಸ್ವಾಗತಾರ್ಹ.
ಅವರಿಗೆ ಪಕ್ಷದ ವೇದಿಕೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. ಅವರಿಗೆ ಟಿಕೆಟ್ ನೀಡಲು ಇನ್ನೂ ಸಾಕಷ್ಟು ಅವಕಾಶಗಳಿವೆ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ, ನಿರ್ಣಯ ಕೈಗೊಳ್ಳಲಾಗುತ್ತದೆ ಎನ್ನುವ ಮೂಲಕ ಅವರಿಗೆ ಟಿಕೆಟ್ ಸಿಗೋದು ಅನುಮಾನ ಎಂಬುದನ್ನು ಪರೋಕ್ಷವಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ
ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ
Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು
Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್.ಬಿ.ತಿಮ್ಮಾಪುರ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.