ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ?: ಡಿಕೆಶಿ ಪ್ರಶ್ನೆ
Team Udayavani, May 18, 2022, 3:15 PM IST
ಬೆಂಗಳೂರು: ರಾಜ್ಯಾದ್ಯಂತ ಕೋಮು ಆಧಾರಿತ ಬೆಳವಣಿಗೆಗಳು ತೀವ್ರಗತಿಯಲ್ಲಿ ನಡೆಯುತ್ತಿವೆ. ಹಿಜಾಬ್ ನಿಂದ ಹಿಡಿದು ಆಜಾನ್ ವರೆಗೆ ಹಲವು ವಿವಾದಗಳು ಹೊಗೆಯಾಡುತ್ತಿರುವ ಬೆನ್ನಲ್ಲೇ, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಚರ್ಚಿಸದೆ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಜರೂರತ್ತು ಏನಿತ್ತು.?” ಎಂದು ಟ್ವೀಟ್ ಮೂಲಕ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
“ಇದು ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ.? ಆಕ್ಸಿಜನ್ ಸಿಗದೆ ಕೋವಿಡ್ ಸಮಯದಲ್ಲಿ ಸತ್ತವರಿಗೆ ಇದು ಮರುಜೀವ ನೀಡುವುದೇ.?” ಎಂದು ಮತಾಂತರ ಕಾಯ್ದೆಯ ಅನುಷ್ಠಾನದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ
“ಇದು, ಸುಳ್ಳು ಆರೋಪಗಳ ಮೇಲೆ ಅಲ್ಪಸಂಖ್ಯಾತರಿಗೆ ತೊಂದರೆ ಕೊಡುವ ತಂತ್ರವೇ.?” ಎಂದೂ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಡಿ.ಕೆ ಶಿವಕುಮಾರ್, ಸರ್ಕಾರದ ಈ ಅಸಂವಿಧಾನಿಕ ನಡೆಯನ್ನು ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.