High Court ಬಿಜೆಪಿ ನಾಯಕ ಪ್ರೀತಂ ಗೌಡ ಬಂಧಿಸಬೇಡಿ: “ಹೈ’
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯ ವೀಡಿಯೋ ಹಂಚಿಕೆ ಆರೋಪ
Team Udayavani, Jun 28, 2024, 11:13 PM IST
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯ ಅಶ್ಲೀಲ ವೀಡಿಯೋ ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ವಿರುದ್ಧದ ತನಿಖೆಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್, ತನಿಖಾಧಿಕಾರಿಗಳು ತಮ್ಮ ವಿವೇಚನೆಯಂತೆ ಪ್ರಕರಣದ ತನಿಖೆ ನಡೆಸಬಹುದು. ಆದರೆ, ಆರೋಪಿ ಪ್ರೀತಂ ಗೌಡ ಅವರನ್ನು ಬಂಧಿಸುವಂತಿಲ್ಲ ಎಂದು ಆದೇಶಿಸಿದೆ.
ಅಲ್ಲದೆ, ಬೆಳಗ್ಗೆ 7ರಿಂದ ರಾತ್ರಿ 9 ಗಂಟೆ ತನಕ ಪೊಲೀಸರು ಆರೋಪಿತರ ವಿಚಾರಣೆ ನಡೆಸಬಹುದು. ವಿಚಾರಣಾಧಿಕಾರಿಗಳು ಕರೆದಾಗೆಲ್ಲ ಅವರು ವಿಚಾರಣೆಗೆ ಹಾಜರಾಗಬೇಕು. ಈ ವೇಳೆ ಪೊಲೀಸರು ಅವರನ್ನು ಬಂಧಿಸುವಂತಿಲ್ಲ, ವಶಕ್ಕೆ ಪಡೆದುಕೊಳ್ಳುವಂತಿಲ್ಲ. ಆದರೆ, ತನಿಖೆಗೆ ಅಗತ್ಯವೆನಿಸಿದರೆ ಆರೋಪಿತರ ಮೊಬೈಲ್ ಫೋನ್ ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಳ್ಳಬಹುದು ಎಂದೂ ಹೈಕೋರ್ಟ್ ಹೇಳಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಪ್ರೀತಂ ಗೌಡ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಈ ಮೇಲಿನ ನಿರ್ದೆಶನ ನೀಡಿ ವಿಚಾರಣೆಯನ್ನು ಮುಂದೂಡಿತು. ಅಲ್ಲದೇ ಸರಕಾರ ಹಾಗೂ ದೂರುದಾರರಿಗೆ ನೋಟಿಸ್ ಸಹ ಜಾರಿಗೊಳಿಸಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.