ಐಟಿ, ಬಿಟಿಯಲ್ಲಿ ಮಹಿಳೆಯರಿಗೆ ರಾತ್ರಿ ಪಾಳಿ ಬೇಡ; ಸಮಿತಿ ಶಿಫಾರಸು
Team Udayavani, Mar 28, 2017, 4:57 PM IST
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಐಟಿ, ಬಿಟಿ ಕಂಪನಿಗಳಲ್ಲಿ ರಾತ್ರಿ ಪಾಳಿಯಲ್ಲಿ ಮಹಿಳೆಯರನ್ನು ಕೆಲಸಕ್ಕೆ ನಿಯೋಜಿಸಬಾರದು ಎಂದು ಸದನ ಸಮಿತಿ ವಿಧಾನಸಭೆಯಲ್ಲಿ ಮಂಡಿಸಿರುವ ವರದಿಯಲ್ಲಿ ಶಿಫಾರಸು ಮಾಡಿದೆ.
ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ಶಾಸಕ ಎನ್.ಎ.ಹ್ಯಾರಿಸ್ ನೇತೃತ್ವದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸದನ ಸಮಿತಿ 32 ಪುಟಗಳ ವರದಿಯನ್ನು ನೀಡಿದ್ದು, ಐಟಿ, ಬಿಟಿ ಕಂಪನಿಗಳಲ್ಲಿ ರಾತ್ರಿ ಪಾಳಿಯಲ್ಲಿ ಮಹಿಳಾ ಉದ್ಯೋಗಿಗಳು ಕಾರ್ಯನಿರ್ವಹಿಸುವುದು ಸುರಕ್ಷತೆಯ ದೃಷ್ಟಿಯಿಂದ ಸೂಕ್ತವಲ್ಲ ಎಂದು ಹೇಳಿದೆ. ಅಲ್ಲದೆ ಐಟಿ ಬಿಟಿ ಕಂಪನಿಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ಬೆಳಗ್ಗೆ ಅಥವಾ ಮಧ್ಯಾಹ್ನದ ಪಾಳಿಯನ್ನು ನಿಗದಿಗೊಳಿಸುವುದು ಉತ್ತಮ ಎಂದು ಶಿಫಾರಸು ಮಾಡಿದೆ.
ಐಟಿ, ಬಿಟಿ ಕಂಪನಿಗಳು ರಾತ್ರಿ ಪಾಳಿಯಲ್ಲಿ ಗಂಡಸರೇ ಕಾರ್ಯನಿರ್ವಹಿಸುವಂತೆ ಸೂಚಿಸಬೇಕು ಎಂದು ವರದಿ ಹೇಳಿದೆ. ಕಳೆದ ವರ್ಷ ಈ ಸಮಿತಿ ಇನ್ಫೋಸಿಸ್ ಮತ್ತು ಬಯೋಕಾನ್ ಸಂಸ್ಥೆಗೆ ಭೇಟಿ ನೀಡಿ ಆಡಳಿತ ಮಂಡಳಿ, ಉದ್ಯೋಗಿಗಳ ಜೊತೆ ಮಾತುಕತೆ ನಡೆಸಿ ಅವರ ಸಲಹೆ ಮೇರೆಗೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.