“Modi ಗ್ಯಾರಂಟಿ’ಗೆ ಮರುಳಾಗದಿರಿ: ಸಿಎಂ ಸಿದ್ದರಾಮಯ್ಯ
ನೂರು ಹೊಸ ವಿನ್ಯಾಸದ "ಅಶ್ವಮೇಧ' ಬಸ್ ಉದ್ಘಾಟನೆ
Team Udayavani, Feb 5, 2024, 9:25 PM IST
ಬೆಂಗಳೂರು: ಗ್ಯಾರಂಟಿಗಳನ್ನು ಮೂದಲಿಸಿದವರೇ ಈಗ “ಮೋದಿ ಗ್ಯಾರಂಟಿ’ ಎಂಬ ಹೊಸ ಮಂತ್ರ ಆರಂಭಿಸಿದ್ದಾರೆ. ಆದರೆ ಈ ಸುಳ್ಳು ಭರವಸೆಗೆ ಜನ ಮರುಳಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧ ಮುಂಭಾಗದಲ್ಲಿ ಸೋಮವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂರು ಹೊಸ ವಿನ್ಯಾಸದ “ಅಶ್ವಮೇಧ’ ಬಸ್‌ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿದ್ದರೂ ನಾವು (ರಾಜ್ಯ ಕಾಂಗ್ರೆಸ್ ಸರಕಾರ) ನೀಡಿದಂತಹ ಒಂದೇ ಒಂದು ಗ್ಯಾರಂಟಿಗಳನ್ನು ಜನರಿಗೆ ಬಿಜೆಪಿ ನೀಡಲಿಲ್ಲ. ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತಂದರೆ ಭಾರತದ ಪ್ರತಿ ಕುಟುಂಬಕ್ಕೂ 15 ಲಕ್ಷ ರೂ. ನೀಡುವ, ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು. ಆದರೆ ಯಾವುದನ್ನೂ ಈಡೇರಿಸದವರು ಈಗ “ಮೋದಿ ಗ್ಯಾರಂಟಿ’ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
1.17 ಕೋಟಿ ಯಜಮಾನಿಗೆ ತಿಂಗಳಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸಲಾಗಿದೆ. ಶಕ್ತಿ ಯೋಜನೆಯಡಿ 4,530 ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯದಡಿ 5 ಕೆಜಿ ಅಕ್ಕಿ ಜತೆ 5 ಕೆಜಿ ಅಕ್ಕಿಯ ಮೊತ್ತ, ಯುವನಿಧಿ ಯೋಜನೆಯಡಿ ಯುವಕರಿಗೆ ಆರ್ಥಿಕ ಸಹಾಯ ನೀಡುತ್ತಿದ್ದೇವೆ. ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4ರಿಂದ 5 ಸಾವಿರ ರೂ. ಆರ್ಥಿಕ ಸಹಾಯ ನೀಡುವ ಮೂಲಕ ಜನರ ಖರೀದಿಸುವ ಶಕ್ತಿಯನ್ನು ಹೆಚ್ಚಿಸಲಾಗಿದೆ. ನಮ್ಮ ಪಂಚಗ್ಯಾರಂಟಿಗಳು ರಾಜ್ಯದ ನಾಲ್ಕೂವರೆ ಕೋಟಿ ಜನರಿಗೆ ತಲುಪುತ್ತಿವೆ. ಬಡವರಿಗೆ ನಾವು ನೀಡಿದ ಈ ಗ್ಯಾರಂಟಿಗಳನ್ನು ಬಿಟ್ಟಿ ಭಾಗ್ಯ ಎಂದು ಇದೇ ಬಿಜೆಪಿಯವರು ಮೂದಲಿಸಿದರು. ಬಡವರ ಬಗ್ಗೆ ಕಾಳಜಿ ಇದ್ದು, ರಾಜಕೀಯ ಇಚ್ಛಾಶಕ್ತಿ ಇದ್ದಾಗ ಮಾತ್ರ ಜನರಿಗೆ ಉತ್ತಮ ಕಾರ್ಯಕ್ರಮಗಳನ್ನು ನೀಡಲು ಸಾಧ್ಯ. ಬಡವರಿಗೆ ಆರ್ಥಿಕ ಶಕ್ತಿ ತುಂಬುವುದು ಕಾಂಗ್ರೆಸ್‌ನ ಬದ್ಧತೆ ಎಂದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ (ವಾಸು), ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.