ಸಿದ್ದರಾಮಯ್ಯರನ್ನು ದಲಿತ ಕಾಲನಿಗೆ ಸೇರಿಸ್ಬೇಡಿ


Team Udayavani, Mar 26, 2017, 10:41 AM IST

bsy.jpg

ಮೈಸೂರು/ ನಂಜನಗೂಡು: ಪ್ರಾಮಾಣಿಕ ರಾಜಕಾರಣಿ ವಿ.ಶ್ರೀನಿವಾಸಪ್ರಸಾದ್‌ ಅವರನ್ನು ವಿನಾಕಾರಣ ಮಂತ್ರಿಮಂಡಲದಿಂದ ಕೈಬಿಟ್ಟು ಅಪಮಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಸಂಪುಟದ ಮಂತ್ರಿಗಳನ್ನು ದಲಿತ ಕಾಲನಿಗಳಿಗೆ ಬಿಟ್ಟು ಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿ ಯೂರಪ್ಪಮನವಿ
ಮಾಡಿದರು. ಉಪ ಚುನಾವಣೆ ಹಿನ್ನೆಲೆಯಲ್ಲಿ ನಂಜನಗೂಡು ಕ್ಷೇತ್ರದ ದೇಬೂರು, ಶಿರಮಳ್ಳಿ, ಕುರಿಹುಂಡಿ, ಚಂದ್ರವಾಡಿ, ಹಾಡ್ಯ, ಹಂಚೀಪುರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸಪ್ರಸಾದ್‌ ಪರ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದರು. ಚುನಾವಣಾ ಬಿಸಿ ಇನ್ನೂ ಶುರುವಾಗಿಲ್ಲ. ವಿಧಾನಮಂಡಲ ಅಧಿವೇಶನ ಮುಗಿದ ಮೇಲೆ ಸಿದ್ದರಾಮಯ್ಯ ಮತ್ತವರ ಇಡೀ ಸಂಪುಟವೇ ಎರಡೂ ಕ್ಷೇತ್ರಗಳಲ್ಲಿ ಠಿಕಾಣಿ ಹೂಡುತ್ತಾರೆ. ಹಣಬಲ, ಜಾತಿಯ ವಿಷಬೀಜ
ಬಿತ್ತಿ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಬೆಂಕಿ ಮಹದೇವುಗೆ ಕಪಾಳಕ್ಕೆ ಹೊಡೆದು ಅಪಮಾನ ಮಾಡಿದ್ದ ಸಿದ್ದರಾಮಯ್ಯ ಈಗ ಅನುಕಂಪದ ಮೇಲೆ ಮತಕೇಳಲು
ಬರುತ್ತಿದ್ದಾರೆ. ಹಿರಿಯ ದಲಿತ ನಾಯಕರಾದ ಪ್ರಸಾದ್‌ ನಮ್ಮ ಜತೆ ಬಂದಿರುವಾಗ ಅವರನ್ನು ಗೆಲ್ಲಿಸದಿದ್ದರೆ, ರಾಜ್ಯದಲ್ಲಿ ಯಾವ ರೀತಿ ತಲೆ ಎತ್ತಿಕೊಂಡು ಓಡಾಡಲಿ, ಸಣ್ಣಪುಟ್ಟ ಬೇಸರಗಳನ್ನು ಬದಿಗಿಟ್ಟು ಪ್ರಸಾದ್‌ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ನಂಜನಗೂಡು ಸುತ್ತಮುತ್ತ ಪ್ರಚಾರ ಸಭೆಯಲ್ಲಿ ಮಾತನಾಡಿದ ಬಿಎಸ್‌ವೈ, ದಲಿತರು ಕಾಂಗ್ರೆಸ್‌ ಸೇರುವುದು ಒಂದೇ, ಆತ್ಮಹತ್ಯೆ ಮಾಡಿಕೊಳ್ಳುವುದೂ ಒಂದೇ ಎಂದು ಹೇಳಿದರು. ಈ ಮಾತನ್ನು ಸ್ವಾತಂತ್ರ್ಯ ಬಂದ ಕೆಲವೇ ವರ್ಷಗಳಲ್ಲಿ ಡಾ. ಬಿ. ಆರ್‌. ಅಂಬೇಡ್ಕರ್‌ ಅವರೇ ಹೇಳಿದ್ದರು. ಅಂಬೇಡ್ಕರರನ್ನು ಅಂದು ಬಳಸಿಕೊಂಡ ಕಾಂಗ್ರೆಸ್‌ ನಂತರ ಅವರ ವಿರುದ್ಧ ಪಿತೂರಿ ಮಾಡಿ ಅವರನ್ನು ಹೊರಹಾಕಿತು. ಕೊನೆಗೆ ಅವರ ಸೋಲಿಗೂ ಕಾರಣವಾಯಿತು ಎಂದು ಟೀಕಿಸಿದರು. 

ಸಿದ್ದು ಸಂಪುಟದ ಹಲವರು ಬಿಜೆಪಿ ಸಂಪರ್ಕದಲ್ಲಿದ್ದಾರೆ

ಮೈಸೂರು: ಕಾಂಗ್ರೆಸ್‌ ಆಡಳಿತ ತೊಲಗಬೇಕು, ಮೋದಿ ಶೈಲಿಯ ಆಡಳಿತವನ್ನು ರಾಜ್ಯದಲ್ಲೂ ಕಾಣಬೇಕೆಂಬ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲೂ ಬಿಜೆಪಿ ಪರ ರಾಜಕೀಯ ಧ್ರುವೀಕರಣ ಆಗುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದರು. ನಂಜನಗೂಡು ಪಟ್ಟಣದ ದೊಡ್ಡ ಒಕ್ಕಲಗೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್‌ ಪರ ಮನೆ ಮನೆಗೆ ತೆರಳಿ ಮತಯಾಚಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎಸ್‌.
ಎಂ.ಕೃಷ್ಣ ಅವರಂಥ ನಾಯಕರು ಕಾಂಗ್ರೆಸ್‌ ಪಕ್ಷದ ವಿದ್ಯಮಾನಗಳಿಂದ ರೋಸಿ ಬಿಜೆಪಿ ಸೇರಿದ್ದಾರೆ.
ಅದೇ ಹಾದಿಯಲ್ಲಿ ಸಿದ್ದರಾಮಯ್ಯ ಸಂಪುಟದ ಹಲವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ, ಇನ್ನೂ ಒಂದು ವರ್ಷ ಅಧಿಕಾರಾವಧಿ ಇರುವುದರಿಂದ ಈಗಲೇ ಪಕ್ಷ ಬಿಡಲಾಗದೆ ಸುಮ್ಮನಿದ್ದಾರೆ. ಜೆಡಿಎಸ್‌ನಿಂದಲೂ ಹಲವರು ಬಿಜೆಪಿಗೆ ಬರುವವರಿದ್ದಾರೆ. ಆದರೆ, ರಾಜಕೀಯ ಸೂಕ್ಷ್ಮತೆಗಳ ಕಾರಣಕ್ಕೆ ನಮ್ಮ ಸಂಪರ್ಕದಲ್ಲಿರುವವರ ಹೆಸರನ್ನು ಈಗಲೇ ಬಹಿರಂಗಪಡಿಸುವುದಿಲ್ಲ ಎಂದರು. ಬಿಜೆಪಿ ತೊರೆಯುವವರ ಪಟ್ಟಿ ನಮ್ಮ ಬಳಿ ಇದೆ ಎಂಬ ಗೃಹ ಸಚಿವ ಪರಮೇಶ್ವರ್‌ ಹೇಳಿಕೆಗೆ ತಿರುಗೇಟು ನೀಡಿದ ಸದಾನಂದಗೌಡ, ಗೃಹ ಸಚಿವರಾಗಿರುವ ನಿಮ್ಮ ಬಳಿಯೇ ಇಂಟಲಿಜೆನ್ಸ್‌
ಕೂಡ ಇದೆ. ಹಾಗಿದ್ದರೆ, ನಿಮ್ಮ ಪಟ್ಟಿಯಲ್ಲಿ ಎಸ್‌.ಎಂ.ಕೃಷ್ಣ, ಜಯಪ್ರಕಾಶ್‌ ಹೆಗ್ಡೆ, ದಿನಕರ ಶೆಟ್ಟಿ ಅವರ ಹೆಸರು ಕೂಡ ಇತ್ತಾ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.