ಕಾಲಾ ಶೋ ಬೇಡ ; ಬೀದಿಗಿಳಿದ ಕನ್ನಡ ಪರ ಕಾರ್ಯಕರ್ತರು; ವ್ಯಾಪಕ ಭದ್ರತೆ
Team Udayavani, Jun 7, 2018, 9:44 AM IST
ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಕಾಲಾ ಚಿತ್ರ ಗುರುವಾರ ನಸುಕಿನ ವೇಳೆಯೇ ವಿಶ್ವಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.ಕರ್ನಾಟಕದಲ್ಲಿ ಚಿತ್ರ ಪ್ರದರ್ಶನಕ್ಕೆ ಕನ್ನಡ ಪರ ಸಂಘಟನೆಗಳು ವ್ಯಾಪಕ ವಿರೋಧ ವ್ಯಕ್ತ ಪಡಿಸಿವೆ.
ಬೆಂಗಳೂರಿನಲ್ಲಿ ನೂರಾರು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ರಾತ್ರಿಯಿಂದಲೇ ಬೀದಿಗಳಿದು ಚಿತ್ರ ಪ್ರದರ್ಶನ ಮಾಡದಂತೆ ಮನವಿ ಮಾಡುತ್ತಿದ್ದಾರೆ.
ಈಗಾಗಲೇ ಕರ್ನಾಟಕರದಲ್ಲಿ 100 ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಬಿಡುಗಡೆ ನಿಗದಿಯಾಗಿದ್ದು, ಎಲ್ಲಾ ಚಿತ್ರ ಮಂದಿರಗಳಿಗೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಚಿತ್ರಮಂದಿರಗಳು ಮತ್ತು ಮಾಲ್‌ಗಳ ಬಳಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದು, ರಜನಿ ಕಾಂತ್ ಅಭಿಮಾನಿಗಳಲ್ಲಿ ಚಿತ್ರ ವೀಕ್ಷಿಸಬೇಡಿ ಎಂದು ಮನವಿ ಮಾಡಿದ್ದಾರೆ.
ಮಲ್ಲೇಶ್ವರದ ಮಂತ್ರಿ ಮಾಲ್, ವಿವೇಕನಗರದ ಬಾಲಾಜಿ ಚಿತ್ರ ಮಂದಿರ, ಓರಿಯನ್ ಮಾಲ್, ಗೋಪಾಲನ್ ಮಾಲ್‌ಗಳಲ್ಲಿ ಚಿತ್ರ ಇನ್ನೂ ಪ್ರದರ್ಶನ ಕಂಡಿಲ್ಲ .
ರಾಯಚೂರಿನಲ್ಲಿ ಟಿಕೆಟ್ ಪಡೆದವರಿಗೆ ನಿರಾಸೆ
ರಾಯಚೂರಿನ ಪದ್ಮಭಾಭ ಚಿತ್ರ ಮಂದಿರದಲ್ಲಿ ಟಿಕೆಟ್ ಖರೀದಿಸಿದ್ದ ಪ್ರೇಕ್ಷಕರು ನಿರಾಸೆ ಅನುಭವಿಸಬೇಕಾಯಿತು. ಪ್ರತಿಭಟನೆ ವ್ಯಕ್ತವಾದ ಹಿನ್ನಲೆಯಲ್ಲಿ ಚಿತ್ರ ಪ್ರದರ್ಶನ ರದ್ದು ಮಾಡಲಾಗಿದೆ.
ಬಳ್ಳಾರಿಯಲ್ಲಿ ಚಿತ್ರಮಂದಿರಕ್ಕೆ ನುಗ್ಗಿದ ಕಾರ್ಯಕರ್ತರು
ಬಳ್ಳಾರಿಯಲ್ಲಿ ಕಾಲಾ ಪ್ರದರ್ಶನಕ್ಕೆ ಸಿದ್ಧತೆ ನಡೆಸುತ್ತಿದ್ದ ಚಿತ್ರ ಮಂದಿರಕ್ಕೆ ಕನ್ನಡಪರ ಸಂಘಟನೆಗಳು ದಾಳಿ ನಡೆಸಿದ್ದು , ಚಿತ್ರ ಪ್ರದರ್ಶಿಸದಂತೆ ಎಚ್ಚರಿಕೆ ನೀಡಿದ್ದಾರೆ.
ಮಂಗಳರೂರಿನಲ್ಲಿ ಟಿಕೆಟ್ ಸೋಲ್ಡ್ ಔಟ್
ಮಂಗಳೂರಿನ ಮಲ್ಟಿಪ್ಲೆಕ್ಸ್‌ಗಲ್ಲಿ 12 ರ ಬಳಿಕ ಚಿತ್ರ ಪ್ರದರ್ಶನ ನಡೆಯಲಿದ್ದು,ಈಗಾಗಲೇ ಟಿಕೇಟ್‌ಗಳು ಸೋಲ್ಡ್ ಔಟ್ ಆಗಿವೆ ಎಂದು ವರದಿಯಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕನ್ನಡ ಪರ ಸಂಘಟನೆಗಳು ಇದುವರೆಗೆ ಜಿಲ್ಲೆಯಲ್ಲಿ ಹೋರಾಟಕ್ಕಿಳಿದಿಲ್ಲ.
ಶೋ ಅರ್ಧಕ್ಕೆ ಮೊಟಕು !
ಕೊಪ್ಪಳದ ಕಾರಟಗಿ ಲಕ್ಷ್ಮೀ ಚಿತ್ರಮಂದಿರ ರಲ್ಲಿ ಕಾಲಾ ಚಿತ್ರ ಪ್ರದರ್ಶನವಾಗುತ್ತಿದ್ದ ವೇಳೆ ಕನ್ನಡಪರ ಹೋರಾಟಗಾರರು ಚಿತ್ರ ಮಂದಿರಕ್ಕೆ ನುಗ್ಗಿದ್ದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಹಿನ್ನಲೆಯಲ್ಲಿ ಚಿತ್ರ ಪ್ರದರ್ಶನವನ್ನು ಅರ್ಧದಲ್ಲೇ ಮೊಟಕುಗೊಳಿಸಲಾಗಿದೆ.
ಕೆಲ ಚಿತ್ರ ಮಂದಿರಗಳು ಚಿತ್ರ ಪ್ರದರ್ಶಿಸುವ ಸಾಧ್ಯತೆಗಳಿದ್ದು, ಸಂಘಟನೆಗಳು ಪ್ರತಿಭಟನೆ ನಡೆಸಿದರೆ ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಗಳಿವೆ.
ಪ್ರತಿಭಟನೆಯ ಕಾವು ಇರುವುದು ಮತ್ತು ಹಲವು ಸಂಘಟನೆಗಳು ಬೀದಿಗಿಳಿದಿರುವ ಹಿನ್ನಲೆಯಲ್ಲಿ ರಜನಿ ಅಭಿಮಾನಿಗಳು ಏನಾದರು ಸಂಭವಿಸಬಹುದು ಎಂಬ ಭಯದಲ್ಲಿ ಚಿತ್ರ ಮಂದಿರದತ್ತ ಬರಲು ಹಿಂದೇಟು ಹಾಕುತ್ತಿದ್ದಾರೆ.
ಕಾವೇರಿ ವಿಷಯವಾಗಿ ರಜನಿಕಾಂತ್ ನೀಡಿದ ಹೇಳಿಕೆಯನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು “ಕಾಲಾ’ ಬಿಡುಗಡೆಗೆ ತಡೆಯೊಡ್ಡಿದ್ದವು. ಚಿತ್ರ ಬಿಡುಗಡೆಗೆ ಕನ್ನಡಪರ ಸಂಘಟನೆಗಳು ಅಡ್ಡಿಪಡಿಸುವ ಬೆದರಿಕೆ ಹಿನ್ನಲೆಯಲ್ಲಿ ಸೂಕ್ತ ರಕ್ಷಣೆ ನೀಡಲು ನಿರ್ದೇಶಿಸುವಂತೆ ಕೋರಿ ಚಿತ್ರ ನಿರ್ಮಾಣ ಸಂಸ್ಥೆಯು ರಿಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಪೀಠವು, ಚಿತ್ರ ಪ್ರದರ್ಶನದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.