ತಾ.ಪಂ.,ಜಿ.ಪಂ: ಕ್ಷೇತ್ರ ಪುನರ್‌ ವಿಂಗಡನೆ ಮೀಸಲು ನಿಗದಿ: ಹೈಕೋರ್ಟ್‌ ಗಡುವು ಪಾಲನೆ ಅನುಮಾನ!

Team Udayavani, Aug 9, 2022, 6:50 AM IST

ತಾ.ಪಂ.,ಜಿ.ಪಂ: ಕ್ಷೇತ್ರ ಪುನರ್‌ ವಿಂಗಡನೆ ಮೀಸಲು ನಿಗದಿ: ಹೈಕೋರ್ಟ್‌ ಗಡುವು ಪಾಲನೆ ಅನುಮಾನ!

ಬೆಂಗಳೂರು: ರಾಜ್ಯದ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡನೆ ಮತ್ತು ಮೀಸಲಾತಿ ನಿಗದಿಗೆ ಸಂಬಂಧಿಸಿ ಹೈಕೋರ್ಟ್‌ ನೀಡಿರುವ ಗಡುವನ್ನು ಸರಕಾರ ಪಾಲಿಸುವ ಲಕ್ಷಣ ಕಂಡು ಬರುತ್ತಿಲ್ಲ.

ಕ್ಷೇತ್ರ ಪುನರ್‌ ವಿಂಗಡನೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು 12 ವಾರಗಳಲ್ಲಿ ಪೂರ್ಣಗೊಳಿಸುವಂತೆ 2022ರ ಮೇ 24ರಂದು ಹೈಕೋರ್ಟ್‌ ಆದೇಶಿಸಿದ್ದು, ರಾಜ್ಯ ಚುನಾವಣ ಆಯೋಗದ ಪ್ರಕಾರ ಆ ಗಡುವು ಆಗಸ್ಟ್‌ 16ಕ್ಕೆ ಮುಗಿಯಲಿದೆ.

ಆದರೆ ಇನ್ನೂ ಕ್ಷೇತ್ರ ಪುನರ್‌ವಿಂಗಡನೆ ಕಾರ್ಯವೇ ಮುಗಿದಿಲ್ಲ. ಮೀಸಲಾತಿ ನಿಗದಿಯಂತೂ ದೂರದ ಮಾತು.
ಕ್ಷೇತ್ರ ಪುನರ್‌ ವಿಂಗಡನೆ ಹಾಗೂ ಒಬಿಸಿ ಸಹಿತ ಒಟ್ಟಾರೆ ಮೀಸಲು ನಿಗದಿಯನ್ನು 12 ವಾರಗಳಲ್ಲಿ ಪೂರ್ಣಗೊಳಿಸಬೇಕು. ಅದಾದ ಒಂದು ವಾರದಲ್ಲಿ ಚುನಾವಣ ಆಯೋಗ ಚುನಾವಣ ಪ್ರಕ್ರಿಯೆ ಆರಂಭಿಸಬೇಕೆಂದು ಹೈಕೋರ್ಟ್‌ ಹೇಳಿತ್ತು. ಆದರೆ ಈವರೆಗೆ ಕ್ಷೇತ್ರಗಳ ಪುನರ್‌ವಿಂಗಡನೆಯ ಕರಡನ್ನೂ ಪ್ರಕಟಿಸಲಾಗಿಲ್ಲ. ಕ್ಷೇತ್ರಗಳು ಅಂತಿಮಗೊಂಡ ಬಳಿಕವಷ್ಟೇ ಮೀಸಲಾತಿ ವಿಚಾರ ಬರುತ್ತದೆ. ಕ್ಷೇತ್ರ ಮತ್ತು ಮೀಸಲಾತಿ ಚಿತ್ರಣ ಸ್ಪಷ್ಟವಾದ ಬಳಿಕ ಇತರ ಪ್ರಕ್ರಿಯೆ ಆರಂಭಿಸಬೇಕಾಗುತ್ತದೆ.

ಕ್ಷೇತ್ರ ಪುನರ್‌ ವಿಂಗಡನೆ ಪ್ರಕ್ರಿಯೆ ನಿಗದಿತ ವೇಗದಲ್ಲಿ ಸಾಗುತ್ತಿಲ್ಲ. ಜುಲೈ ತಿಂಗಳಲ್ಲೇ ಕರಡು ಹೊರಡಿ ಸಲಾಗುತ್ತದೆ ಎನ್ನಲಾಗಿತ್ತು. ಆದರೆ ಸೀಮಾ ನಿರ್ಣಯ ಆಯೋಗ ಇನ್ನೂ ಕರಡು ಪ್ರಕಟಿಸಿಲ್ಲ. ಅಲ್ಲದೆ, ಒಬಿಸಿ ವರ್ಗಗಳಿಗೆ ಮೀಸಲಾತಿ ನೀಡುವ ಸಂಬಂಧ ನ್ಯಾ| ಭಕ್ತವತ್ಸಲ ಸಮಿತಿ ಶಿಫಾರಸು ಆಧರಿಸಿ ಮೀಸಲಾತಿ ನಿಗದಿಗೆ ಕ್ರಮ ಕೈಗೊಳ್ಳಬೇಕಾಗಿದೆ. ಸದ್ಯದ ಸ್ಥಿತಿಯನ್ನು ಗಮನಿಸಿದರೆ ಇದು ಅಷ್ಟೊಂದು ಬೇಗ ಮುಗಿಯವ ಕೆಲಸವಲ್ಲ.

ಏನಾಗಿತ್ತು?
ಕಳೆದ ಎಪ್ರಿಲ್ , ಮೇ ಮತ್ತು ಜೂನ್‌ ತಿಂಗಳಲ್ಲಿ ಅವಧಿ ಪೂರ್ಣ ಗೊಂಡ ರಾಜ್ಯದ ಜಿ.ಪಂ. ಹಾಗೂ ತಾ.ಪಂ. ಗಳಿಗೆ ಸಾರ್ವತ್ರಿಕ ಚುನಾ ವಣೆ ನಡೆಸಲು ಸಿದ್ಧತೆ ಆರಂಭಿಸಿದ್ದ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್‌ವಿಂಗಡನೆ ಮಾಡಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಅಂತೆಯೇ ಮೀಸಲಾತಿ ಕರಡನ್ನೂ ಪ್ರಕಟಿಸಲಾಗಿತ್ತು. ಚುನಾವಣೆಗೆ ದಿನಾಂಕ ಘೋಷಿಸಬೇಕು ಎನ್ನುವಷ್ಟರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣ ಆಯೋಗದಿಂದ ಹಿಂಪಡೆದ ಸರಕಾರ, ಸೀಮಾ ನಿರ್ಣಯ ಆಯೋಗವನ್ನು ರಚಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣ ಆಯೋಗ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಜಿ.ಪಂ., ತಾ.ಪಂ. ಕ್ಷೇತ್ರಗಳ ಪುನರ್‌ ವಿಂಗಡಣೆ ಪ್ರಕ್ರಿಯೆ ಮುಗಿದಿದೆ. ಆದಷ್ಟು ಬೇಗ ಕರಡು ಹೊರಡಿಸಲಾಗುವುದು.
– ಎಂ. ಲಕ್ಷ್ಮೀನಾರಾಯಣ, ಅಧ್ಯಕ್ಷರು, ಸೀಮಾ ನಿರ್ಣಯ ಆಯೋಗ.

ನಿಗದಿತ ಸಮಯದಲ್ಲಿ ಚುನಾವಣೆ ನಡೆಯಬೇಕು ಎಂಬುದು ಆಯೋಗದ ನಿಲುವು. ಅದಕ್ಕಾಗಿಯೇ ಆಯೋಗ ಹೈಕೋರ್ಟ್‌ ಮೊರೆ ಹೋಗಿದೆ. ನ್ಯಾಯಾಲಯ ಸರಕಾರಕ್ಕೆ 12 ವಾರಗಳ ಗಡುವು ನೀಡಿದ್ದು, ಅದರ ಬಗ್ಗೆ ಸರಕಾರದ ಅಭಿಪ್ರಾಯ ಮತ್ತು ನ್ಯಾಯಾಲಯದಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
– ಡಾ| ಬಿ. ಬಸವರಾಜು,
ರಾಜ್ಯ ಚುನಾವಣ ಆಯುಕ್ತರು

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.