ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ. 51.12ರಷ್ಟು ಪದವಿ ವಿದ್ಯಾರ್ಥಿ, ಬೋಧಕರಿಗೆ ವ್ಯಾಕ್ಸಿನ್
Team Udayavani, Jul 9, 2021, 5:43 PM IST
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ವಿದ್ಯಾರ್ಥಿಗಳು, ಬೋಧಕ ಮತ್ತಿತರೆ ಸಿಬ್ಬಂದಿಗೆ ಕೋವಿಡ್ ಲಸಿಕೀಕರಣ ವೇಗವಾಗಿ ಸಾಗುತ್ತಿದ್ದು, ಗುರುವಾರದ (ಜೂನ್ 8) ಹೊತ್ತಿಗೆ 51.12% ಮಂದಿಗೆ ವ್ಯಾಕ್ಸಿನ್ ಕೊಡಲಾಗಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಇದನ್ನೂ ಓದಿ : ನಾಗರಿಕ ವಿಮಾನಯಾನ ಸಚಿವರಾಗಿ ಜ್ಯೋತಿರಾದಿತ್ಯ ಸಿಂದಿಯಾ ಅಧಿಕಾರ ಸ್ವೀಕಾರ
ಈ ಬಗ್ಗೆ ಇಂದು (ಶುಕ್ರವಾರ, ಜುಲೈ 9) ಹೇಳಿಕೆ ನೀಡಿರುವ ಅವರು, ಬಿಬಿಎಂಪಿಯ ಒಟ್ಟು 8 ವಲಯಗಳಲ್ಲಿನ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ 59179 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ಪೈಕಿ 31147 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ 52.63% ಗುರಿ ತಲುಪಲಾಗಿದೆ. ಹಾಗೆಯೇ, 3076 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದು, ಈ ಪೈಕಿ 2518 ಸಿಬ್ಬಂದಿಗೆ ಲಸಿಕೆ ನೀಡಿ ಶೇ. 81.86 ಗುರಿ ತಲುಪಲಾಗಿದೆ ಎಂದಿದ್ದಾರೆ.
ಎಂಟೂ ವಲಯಗಳಲ್ಲಿ ವಿದ್ಯಾರ್ಥಿಗಳ ಲಸಿಕೀಕರಣ ಅತ್ಯಂತ ವೇಗವಾಗಿ, ವ್ಯವಸ್ಥಿತವಾಗಿ ಸಾಗಿದ್ದು ಆದಷ್ಟು ಬೇಗ ಲಸಿಕೀಕರಣ ಮುಗಿಸಲಾಗುವುದು ಎಂದಿರುವ ಡಿಸಿಎಂ, ಈವರೆಗೂ ಲಸಿಕೆ ಪಡೆಯದ ವಿದ್ಯಾರ್ಥಿಗಳು ತಪ್ಪದೇ ತಮ್ಮ ಕಾಲೇಜುಗಳಲ್ಲಿ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ತಮಿಳುನಾಡು ವಿರೋಧ : ಸರ್ವ ಪಕ್ಷ ಸಭೆ ಕರೆದ ಸ್ಟಾಲಿನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.