ವೈದ್ಯಕೀಯ ಶಿಕ್ಷಣ ಮತ್ತು “ಆರೋಗ್ಯ ಸಚಿವ” ಡಾ| ಸುಧಾಕರ್: ಶ್ರೀರಾಮುಲು ಖಾತೆ ಸುಧಾಕರ್ ಪಾಲಿಗೆ
Team Udayavani, Oct 12, 2020, 10:40 AM IST
ಬೆಂಗಳೂರು: ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಇನ್ನು ಮುಂದೆ ಆರೋಗ್ಯ ಸಚಿವರೂ ಹೌದು. ಸಚಿವ ಬಿ ಶ್ರೀರಾಮುಲು ಬಳಿಯಿದ್ದ ಆರೋಗ್ಯ ಖಾತೆಯನ್ನು ಸುಧಾಕರ್ ಗೆ ನೀಡಲಾಗಿದ್ದು, ಅವರಿನ್ನು ಅವಳಿ ಜವಾಬ್ದಾರಿ ನಿಭಾಯಿಸಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರವಿವಾರ ಸಂಜೆ ವೈದ್ಯಕೀಯ ಶಿಕ್ಷಣ ಖಾತೆ ಜತೆಗೆ ಆರೋಗ್ಯ ಖಾತೆಯನ್ನೂ ವಹಿಸಿಕೊಂಡು ಸರಿಯಾಗಿ ಕೋವಿಡ್-19 ನಿಯಂತ್ರಿಸಿ ರಾಜ್ಯದ ಜನತೆಗೆ ಉತ್ತಮ ಆರೋಗ್ಯ ಭಾಗ್ಯ ಸಿಗುವಂತೆ ಕ್ರಾಂತಿಕಾರಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
“ ಮೊದಲಿಗೆ ಸಿಎಂ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಜನತೆಗೆ ಉತ್ತಮ ಆರೋಗ್ಯ ಕಲ್ಪಿಸಲು ಶಕ್ತಿ, ಯುಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದು ಡಾ.ಕೆ. ಸುಧಾಕರ್ ತಿಳಿಸಿದರು.
ಇದನ್ನೂ ಓದಿ:ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಖುಷ್ಬೂ ರಾಜೀನಾಮೆ! ಬಿಜೆಪಿ ಸೇರ್ಪಡೆ ಬಹುತೇಕ ಖಚಿತ
ರಾಮುಲುಗೆ ಸಮಾಜ ಕಲ್ಯಾಣ
ಕೋವಿಡ್ ಆರಂಭದಿಂದಲೂ ಆರೋಗ್ಯ ಇಲಾಖೆಯ ಬೆಳವಣಿಗೆಗಳ ಬಗ್ಗೆ ಅಸಮಾಧಾನಗೊಂಡಿದ್ದ ಬಿ.ಶ್ರೀರಾಮುಲು ಅವರಿಗೆ ಆರೋಗ್ಯ ಇಲಾಖೆ ಬದಲು ಮಹತ್ವದ ಸಮಾಜ ಕಲ್ಯಾಣ ಇಲಾಖೆಯ ಜವಾಬ್ದಾರಿ ವಹಿಸಲು ನಿರ್ಧರಿಸಲಾಗಿದೆ. ಈಗಾಗಲೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರಾಮುಲು ಅವರ ಬಳಿ ಇರುವುದರಿಂದ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವುದರ ಮೂಲಕ ಅವರಿಗೂ ಬೇಸರವಾಗದಂತೆ ಮುಖ್ಯಮಂತ್ರಿ ಯಡಿಯೂರಪ್ಪ ನೋಡಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ
ಕಾರಜೋಳಗೆ ಕನ್ನಡ ಮತ್ತು ಸಂಸ್ಕೃತಿ?: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬಳಿ ಇದ್ದ ಮಹತ್ವದ ಸಮಾಜ ಕಲ್ಯಾಣ ಖಾತೆಯನ್ನು ಶ್ರೀರಾಮುಲು ಅವರಿಗೆ ವಹಿಸಲು ನಿರ್ಧರಿಸಿದ್ದು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಹಿನ್ನಡೆಯಾದಂತಾಗುತ್ತದೆ. ಅಲ್ಲದೇ ಅದು ತಪ್ಪು ಸಂದೇಶ ರವಾನೆ ಮಾಡಿದಂತಾಗುತ್ತದೆ ಎನ್ನುವ ಕಾರಣಕ್ಕೆ ಅವರಿಗೆ ಸಿ.ಟಿ.ರವಿ ಅವರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.