ರಾಜ್ಯದಲ್ಲಿಂದು 1 ಕೋಟಿ ಡೋಸ್ ಲಸಿಕೆ ವಿತರಣೆ : ಡಾ. ಸುಧಾಕರ್
Team Udayavani, May 5, 2021, 4:58 PM IST
ಬೆಂಗಳೂರು : ಕೋವಿಡ್ ಸೋಂಕಿನ ರೂಪಂತರಿ ಅಲೆ ರಾಜ್ಯವನ್ನು ಬಿಕ್ಕಟ್ಟಿಗೆ ಸಿಲುಕಿಸಿದೆ. ರಾಜ್ಯದಲ್ಲಿ ಕಠಿಣ ಜನತಾ ಕರ್ಫ್ಯೂ ಜಾರಿಯಲ್ಲಿದ್ದರೂ ಕೂಡ ದಿನ ನಿತ್ಯ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಕೋವಿಡ್ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ಪ್ರಯತ್ನ ಪಡುತ್ತಿದ್ದರೂ ಕೂಡ ಸರ್ಕಾರದ ನ್ಯೂನ್ಯತೆ ಎದ್ದು ಕಾಣಿಸುತ್ತಿರುವುದು ಸ್ಪಷ್ಟ. ವಿರೋಧ ಪಕ್ಷ ಕಾಂಗ್ರೆಸ್ ಆಡಳಿತ ಪಕ್ಷವನ್ನು ರೂಪಾಂತರಿ ಅಲೆ ಆರಂಭವಾದಾಗಿನಿಂದಲೂ ದೂರುತ್ತಾ ಬಂದಿದೆ.
ಕೋವಿಡ್ ಸೋಂಕಿತರ ಚಿಕಿತ್ಸೆಗೆ ವೈದ್ಯಕೀಯ ಸೌಲಭ್ಯಗಳ ಅಭಾವ ರಾಜ್ಯವನ್ನು ಬಲವಾಗಿ ಕಾಡುತ್ತಿವೆ. ಮಾತ್ರವಲ್ಲದೇ, ಬೆಡ್ ಬ್ಲಾಕಿಂಗ್ ದಂಧೆಗಳು ಖಾಸಗಿ ಆಸ್ಪತ್ರೆಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಎನ್ನುವ ವಿಚಾರ ನಿನ್ನೆ(ಮೇ. 04)ಯಷ್ಟೇ ಬಯಲಿಗೆ ಬಂದಿದೆ. ಅತ್ತ, ಸೋಂಕಿತರ ಚಿಕಿತ್ಸೆಗೆ ಆಮ್ಲಜನಕದ ಕೊರತೆ ಒಂದಡೆಯಾದರೇ, ಇನ್ನೊಂದೆಡೆ ಲಸಿಕೆ ಹಾಕಿಸಿಕೊಳ್ಳಲು ನೋಂದಣಿ ಮಾಡಿಕೊಂಡವರು ಲಸಿಕಾ ಕೇಂದ್ರಗಳಲ್ಲಿ ಲಸಿಕೆಯ ಕೊರತೆಯ ನಡುವೆ ಸಾಲುಗಟ್ಟಿ ನಿಲ್ಲಬೇಕಾದ ಪರಿಸ್ಥಿತಿ ಇರುವುದು ಕೆಲವು ದಿನಗಳಿಂದೀಚೆಗೆ ರಾಜ್ಯದಲ್ಲಿ ಕಂಡುಬರುತ್ತಿವೆ.
ಓದಿ : ಸಿಎಸ್ ಕೆ ಬ್ಯಾಟಿಂಗ್ ಕೋಚ್ ಮೈಕಲ್ ಹಸ್ಸಿಗೂ ಕೋವಿಡ್ ಪಾಸಿಟಿವ್
ಈ ವಿಚಾರವಾಗಿ ಭಾರಿ ಆಕ್ರೋಶಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಂತೆ ಕಂಡುಬಂದಿದ್ದು, ರಾಜ್ಯದಲ್ಲಿ ಇಂದು(ಬುಧವಾರ, ಮೇ. 05) ಒಂದು ಕೋಟಿ ಡೋಸ್ ಲಸಿಕಾ ವಿತರಣೆ ಪೂರೈಸಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತಾಗಿ ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಕಂಚಿಕೊಂಡಿರುವ ಸುಧಾಕರ್, ಕರ್ನಾಟಕ ಇಂದು 1 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸಿದೆ. ಈವರೆಗೂ ಕೇಂದ್ರದಿಂದ ರಾಜ್ಯಕ್ಕೆ 1,05,49,970 ಡೋಸ್ ಲಸಿಕೆ ಲಭ್ಯವಾಗಿದ್ದು, ರಾಜ್ಯ ಸರ್ಕಾರ 3 ಲಕ್ಷ ಡೋಸ್ ತರಿಸಿಕೊಂಡಿದೆ. ಕೊರೊನಾ ವಿರುದ್ಧದ ಈ ಸಮರದಲ್ಲಿ ಲಸಿಕೆ ನಮ್ಮ ಅತ್ಯಂತ ದೊಡ್ಡ ಅಸ್ತ್ರವಾಗಿದ್ದು ಪ್ರತಿಯೊಬ್ಬರಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಬರೆದುಕೊಂಡಿದ್ದಾರೆ.
ಕರ್ನಾಟಕ ಇಂದು 1 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸಿದೆ. ಈವರೆಗೂ ಕೇಂದ್ರದಿಂದ ರಾಜ್ಯಕ್ಕೆ 1,05,49,970 ಡೋಸ್ ಲಸಿಕೆ ಲಭ್ಯವಾಗಿದ್ದು, ರಾಜ್ಯ ಸರ್ಕಾರ 3 ಲಕ್ಷ ಡೋಸ್ ತರಿಸಿಕೊಂಡಿದೆ. ಕೊರೊನಾ ವಿರುದ್ಧದ ಈ ಸಮರದಲ್ಲಿ ಲಸಿಕೆ ನಮ್ಮ ಅತ್ಯಂತ ದೊಡ್ಡ ಅಸ್ತ್ರವಾಗಿದ್ದು ಪ್ರತಿಯೊಬ್ಬರಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ನೀಡಲು ಸರ್ಕಾರ ಬದ್ಧವಾಗಿದೆ
— Dr Sudhakar K (@mla_sudhakar) May 5, 2021
ಇನ್ನು, ರಾಜ್ಯದಲ್ಲಿ ಕೋವಿಡ್ ಸೋಂಕನ್ನು ನಿವಾರಣೆಯ ಕುರಿತಾಗಿ ತೀವ್ರ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಕೋವಿಡ್ ನಿಯಂತ್ರಣ ಮಾಡುವ ಉದ್ದೇಶದಿಂದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿನ್ನೆ(ಮೇ. 04) ಐವರು ಸಚಿವರಿಗೆ ನಿರ್ವಹಣೆಯ ಅಧಿಕಾರವನ್ನು ನೀಡಿದೆ. ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವಥ್ ನಾರಾಯಣ ಅವರಿಗೆ ರೆಮಿಡೆಸಿವಿರ್ ಪೂರೈಕೆಯ ಜವಾಬ್ದಾರಿ, ಜಗದೀಶ್ ಶೆಟ್ಟರ್ ಗೆ ಆಮ್ಲಜನಕ ನಿರ್ವಹಣೆ, ಬಸವರಾಜ್ ಬೊಮ್ಮಾಯಿ ಹಾಗೂ ಆರ್ ಅಶೋಕ್ ಗೆ ಹಾಸಿಗೆ ನಿರ್ವಹಣೆ, ಅರವಿಂದ ಲಿಂಬಾವಳಿ ಅವರಿಗೆ ವಾರ್ ರೂಂ ಹಾಗೂ ಸಹಾಯವಾಣಿ ಜವಾಬ್ದಾರಿ ನೀಡಲಾಗಿದೆ.
ಓದಿ : ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಷಿಜನ್ ರಾಜ್ಯದ ಬಳಕೆಗೆ ಇರಲಿ: ಸಿದ್ದರಾಮಯ್ಯ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.