ವ್ಯಸನ ಮುಕ್ತ ಸಮಾಜಕ್ಕೆ ಪಣ ತೊಟ್ಟಿದ್ದ ಡಾ.ಮಹಾಂತ ಶ್ರೀ ಲಿಂಗೈಕ್ಯ
Team Udayavani, May 19, 2018, 11:06 AM IST
ಬಾಗಲಕೋಟೆ: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇಳಕಲ್ ಚಿತ್ತರಗಿ ವಿಜಯಮಹಾಂತೇಶ್ವರ ಸಂಸ್ಥಾನ ಮಠದ 19 ನೇ ಪೀಠಾಧ್ಯಕ್ಷರಾಗಿದ್ದ ಡಾ.ಮಹಾಂತ ಶಿವಯೋಗಿಗಳು (89) ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ.
ವ್ಯಸನಮುಕ್ತ ಸಮಾಜ ನಿರ್ಮಾಣದ ಹರಿಕಾರರು ಎಂದೇ ಕರೆಸಿಕೊಳ್ಳುತ್ತಿದ್ದ ಅವರು, ಪ್ರತಿ ಗ್ರಾಮ, ನಗರಗಳಲ್ಲಿ ಪಾದಯಾತ್ರೆ ನಡೆಸಿ, ಜನರ ವ್ಯಸನಗಳನ್ನು ತಮ್ಮ ಜೋಳಿಗೆಯಲ್ಲಿ ಹಾಕಿಕೊಂಡು ಚಟಗಳನ್ನು ಬಿಡುವಂತೆ ಬೋಧನೆ ಮಾಡಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿದ್ದ ಶ್ರೀಗಳ ಸಾಮಾಜಿಕ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.
ಶ್ರೀಗಳ ಜನ್ಮ ದಿನವಾಗಿರುವ ಅಗಸ್ಟ್1 ನ್ನು ಕಳೆದ ವರ್ಷ ಸರ್ಕಾರ ವ್ಯಸನಮುಕ್ಯ ದಿನಾಚರಣೆಯನ್ನಾಗಿ ಘೋಷಣೆ ಮಾಡಿತ್ತು.
ಶ್ರೀಗಳ ಪಾರ್ಥೀವ ಶರೀರವನ್ನು ಶನಿವಾರ ರಾತ್ರಿ ಇಳಕಲ್ಲಿನಲ್ಲಿರುವ ಶ್ರೀ ಮಠಕ್ಕೆ ತರಲಾಗುತ್ತಿದ್ದು, ಭಾನುವಾರ ಭಕ್ತರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸೋಮವಾರ ಬೆಳಗ್ಗೆ ಅಂತಿಮ ವಿಧಿ ವಿಧಾನಗಳು ನಡೆಯಲಿದೆ.
ಶ್ರೀಗಳ ನಿಧನಕ್ಕೆ ಅಪಾರ ಭಕ್ತರು ತೀವ್ರ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.