31ರಂದು ಹಿರಿಯ ಶ್ರೀಗಳ ಪುಣ್ಯ ಸ್ಮರಣೆ;ಧಾರ್ಮಿಕ ಕಾರ್ಯ ಮುಂದುವರಿಕೆ

Team Udayavani, Jan 25, 2019, 12:38 AM IST

70.jpg

ತುಮಕೂರು: ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜ.31ರ ಬೆಳಗ್ಗೆ 10.30ಕ್ಕೆ ಸಿದ್ಧಗಂಗಾ ಕ್ಷೇತ್ರದಲ್ಲಿ ನಡೆಸಲಾಗುವುದು ಎಂದು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.

ನಗರದ ಸಿದ್ಧಗಂಗಾ ಮಠದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು. ಸ್ವಾಮೀಜಿಯವರ ಪುಣ್ಯಸ್ಮರಣೆ ಸಮಾರಂಭವನ್ನು 11ನೇ ದಿನವಾದ ಜ.31ರಂದು ಮಠದ ಆವರಣದಲ್ಲಿರುವ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಿರಿಗೆರೆಯ ತರಳಬಾಳು ಸಂಸ್ಥಾನ ಮಠದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಬೆಂಗಳೂರಿನ ಆರ್ಟ್‌ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್‌ ಗುರೂಜಿ ಹಾಗೂ ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಸಾನ್ನಿಧ್ಯದಲ್ಲಿ ಪುಣ್ಯಸ್ಮರಣೆ ಸಮಾರಂಭ ಜರುಗಲಿದೆ ಎಂದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಸಿದ್ದರಾಮಯ್ಯ ಹಾಗೂ ಎಂ.ವೀರಪ್ಪ ಮೊಯ್ಲಿ, ಗೃಹ ಸಚಿವ ಎಂ.ಬಿ.ಪಾಟೀಲ್‌, ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್‌, ವಿಧಾನಸಭಾ ಸದಸ್ಯ ವಿ.ಸೋಮಣ್ಣ ಅವರು ನುಡಿ ನಮನ ಸಲ್ಲಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಸಚಿವರು, ಸಂಸದರು, ಶಾಸಕರು, ಜಿಪಂ ಅಧ್ಯಕ್ಷರು, ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು. ಮಠದ ಎಲ್ಲಾ ಭಕ್ತರು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಹೇಳಿದರು. ಈ ವೇಳೆ ಮಠದ ಆಡಳಿತಾಧಿಕಾರಿ ಹಾಗೂ ಇತರ ವಿಭಾಗಗಳ ಮುಖ್ಯಸ್ಥರು ಹಾಜರಿದ್ದರು.

ಅಪೂರ್ಣ ಕಾಮಗಾರಿ ಪೂರ್ಣಗೊಳಿಸಲು ಆದ್ಯತೆ: ಸಿದ್ಧಗಂಗಾ ಮಠದಲ್ಲಿ ಹಿರಿಯ ಶ್ರೀಗಳು ಇದ್ದಾಗ ನಡೆಯುತ್ತಿದ್ದ ಪೂಜಾ ಕೈಂಕರ್ಯ, ಧಾರ್ಮಿಕ ಕಾರ್ಯಗಳು ನಿಲ್ಲುವುದಿಲ್ಲ. ಈ ಬಾರಿಯೂ ಜಾತ್ರಾ ಮಹೋತ್ಸವ, ವಸ್ತು ಪ್ರದರ್ಶನ, ಜಾನುವಾರು ಜಾತ್ರೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ನಿಗದಿತ ಸಮಯದಲ್ಲಿ ನಡೆಯುತ್ತವೆ. ಇದು ಹಿರಿಯ ಶ್ರೀಗಳ ಆಶಯವೂ ಆಗಿದೆ ಎಂದು ಸ್ವಾಮೀಜಿ ತಿಳಿಸಿದರು.

ಶ್ರೀಗಳ ಮಾರ್ಗದರ್ಶನದಲ್ಲಿ ಮಠವನ್ನು ಮುನ್ನಡೆಸಲಾಗುವುದು. ಈ ಹಿಂದೆ ಮಠದಲ್ಲಿ ಏನೆಲ್ಲಾ ಧಾರ್ಮಿಕ, ಸಾಮಾಜಿಕ ಕಾರ್ಯಗಳು ಜಾತ್ಯತೀತವಾಗಿ ನಡೆಯುತ್ತಿತ್ತೋ, ಅದೇ ರೀತಿಯಲ್ಲಿ ಮುಂದೆಯೂ ನಡೆಯಲಿದೆ. ಮಠದಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕಡೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು ಶಿವಕುಮಾರ ಸ್ವಾಮೀಜಿಯವರ ಕಂಚಿನ ಪುತ್ಥಳಿಯನ್ನು ಮಠಕ್ಕೆ ನೀಡಿದು,್ದ ಅದನ್ನು ವಸ್ತು ಪ್ರದರ್ಶನ ಆವರಣದ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಪ್ರತಿಷ್ಠಾಪಿಸಲಾಗುವುದು. ಮುಂದಿನ ದಿನಗಳಲ್ಲಿ ಶ್ರೀಗಳು ಉಪಯೋಗಿಸುತ್ತಿದ್ದ ಪ್ರತಿಯೊಂದು ವಸ್ತುವನ್ನೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತಿಮ ದರ್ಶನ, ಅಂತ್ಯಕ್ರಿಯೆ, ಮತ್ತಿತರ ಎಲ್ಲಾ ಕಾರ್ಯಗಳನ್ನು ಸುಸೂತ್ರವಾಗಿ ನಡೆಸಲು ಹಗಲಿರುಳು ಶ್ರಮಿಸಿದ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆಗಳಿಗೆ ಕೃತಜ್ಞತೆ ಸಲ್ಲಿಸಿದರು. ಅಲ್ಲದೆ, ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿ ಶ್ರೀಗಳ ದರ್ಶನಕ್ಕೆ ಅನುವು ಮಾಡಿಕೊಟ್ಟ ರೈಲ್ವೆ ಇಲಾಖೆ ಹಾಗೂ ಸಾರಿಗೆ ಇಲಾಖೆಗಳಿಗೆ ಧನ್ಯವಾದ ಅರ್ಪಿಸಿದರು.

ಶ್ರೀಗಳಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ಶ್ರಮಿಸಿದ ಚೆನ್ನೈನ ರೇಲಾ ಆಸ್ಪತ್ರೆ, ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆ, ಸ್ಥಳೀಯ ಸಿದ್ಧಗಂಗಾ ಆಸ್ಪತ್ರೆಯ ವೈದ್ಯರ ತಂಡದ ಕಾರ್ಯ ಶ್ಲಾಘಿಸಿದರು.

ಶ್ರೀಗಳ ಗದ್ದುಗೆಗೆ ಹರಿದು ಬರುತ್ತಿದೆ ಭಕ್ತ ಸಾಗರ

ಸಿದ್ಧಗಂಗಾ ಮಠಕ್ಕೆ ಭಕ್ತ ಸಾಗರ ಹರಿದು ಬರುವುದು ನಿಂತಿಲ್ಲ. ಗುರುವಾರ ಬೆಳಗ್ಗೆಯಿಂದ ರಾತ್ರಿವರೆಗೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತರ ದಂಡು ಬರುತ್ತಲೇ ಇದೆ. ಶ್ರೀಗಳ ಗದ್ದುಗೆ ನೋಡಿ ಭಕ್ತರು, ಗಣ್ಯರ ದಂಡು ನಮಿಸುತ್ತಿದ್ದಾರೆ. ಮಾಜಿ ಸಚಿವ ವಿ.ಸೋಮಣ್ಣ , ಮಾಜಿ ಶಾಸಕರಾದ ಚೆಲುವರಾಯಸ್ವಾಮಿ, ಬಾಲಕೃಷ್ಣ ಕೂಡ ಆಗಮಿಸಿ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ಮಧ್ಯೆ, ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ಮುಂಜಾನೆಯೇ ಬೆಟ್ಟದ ಮೇಲಿನ ಶ್ರೀ ಸಿದ್ಧಲಿಂಗೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ, ಉದ್ಧಾನ ಶಿವಯೋಗಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ, ಪಂಚಾಕ್ಷರ ಮಂತ್ರ ಪಠಿಸಿ ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗದ್ದುಗೆಗೆ ಮಠದ ವಿದ್ಯಾರ್ಥಿಗಳು ಪೂಜೆ ಸಲ್ಲಿಸಿ ನಮಿಸಿದರು. ಇದೇ ವೇಳೆ, ಮಕ್ಕಳ ಮೊದಲ ಪ್ರಾರ್ಥನೆಯಲ್ಲಿ ಶ್ವಾನ ಭಾಗಿಯಾಗಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Vishwaprabha Award 2025 to Actor Naveen D. Padil

Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.