ಮಾರ್ಗಸೂಚಿ ಪಾಲಿಸದಿದ್ದರೆ ಅಪಾಯ ಖಚಿತ: ಡಾ| ಸುಧಾಕರ್
Team Udayavani, Apr 8, 2021, 10:35 PM IST
ಬೆಂಗಳೂರು: ಎಲ್ಲ ಪಕ್ಷಗಳೂ ರಾಜಕೀಯ ಸಭೆ, ಸಮಾರಂಭಗಳನ್ನು ಮಾರ್ಗಸೂಚಿಗಳ ಅನ್ವಯವೇ ನಡೆಸಬೇಕು. ಇಲ್ಲದಿದ್ದರೆ ಮುಂದಿನ ಆಗುಹೋಗುಗಳಿಗೆ ನಾವೆಲ್ಲರೂ ನೈತಿಕ ಹೊಣೆ ಹೊರಬೇಕಾಗುತ್ತದೆ ಎಂದು ಸಚಿವ ಡಾ| ಕೆ. ಸುಧಾಕರ್ ಹೇಳಿದರು.
ಬಿಬಿಎಂಪಿ, ಬೆಂಗಳೂರು ನಗರ ಜಿಲ್ಲೆ, ಗ್ರಾಮಾಂತರ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಕಾಸಸೌಧದಲ್ಲಿ ಗುರುವಾರ ವೀಡಿಯೋ ಸಂವಾದ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳಿಗೂ ನಿಯಮಗಳನ್ನು ಬದಲಾಯಿಸಲು ಹಕ್ಕಿಲ್ಲ ಎಂದು ಆರೋಗ್ಯ ಸಚಿವನಾಗಿ ನಾನು ಹೇಳುತ್ತಿದ್ದೇನೆ ಎಂದು ಹೇಳಿದರು.
ಈಗಾಗಲೇ ಚುನಾವಣ ಆಯುಕ್ತರಿಗೂ ಮನವಿ ಮಾಡಲಾಗಿದ್ದು, ಅವರು ಕೆಲವು ಮಾರ್ಗಸೂಚಿಗಳನ್ನು ನೀಡಿದ್ದಾರೆ. ಆದರೆ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಆ ಮಾರ್ಗಸೂಚಿಗಳು ಶೇ.100ರಷ್ಟು ಪಾಲನೆಯಾಗುತ್ತಿಲ್ಲ ಎಂಬುದನ್ನು ನಾನು ಗಮನಿಸಿದ್ದೇನೆ. ನಮಗಿರುವ ಇತಿಮಿತಿಯಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಮದುವೆ, ಜಾತ್ರೆ, ಧಾರ್ಮಿಕ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಲು ಅವಕಾಶವಿಲ್ಲ. ಸರಕಾರದ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಅಧಿಕಾರಿಗಳು ಕಠಿನ ಕ್ರಮ ಜರಗಿಸಲಿದ್ದಾರೆ. ಜನರು ಸಹಕರಿಸದಿದ್ದರೆ ಖಂಡಿತವಾಗಿಯೂ ಪರಿಸ್ಥಿತಿ ಕೈಮೀರಿ ಹೋಗಲಿದೆ. ಕರ್ನಾಟಕದಲ್ಲಿ ಅಂತಹ ಸ್ಥಿತಿ ತಲುಪುವುದು ಬೇಡ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.