ವಸತಿ ಶಾಲೆಗೂ ವಸ್ತ್ರ ಸಂಹಿತೆ: ಅಲ್ಪಸಂಖ್ಯಾಕರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಆದೇಶ
Team Udayavani, Feb 18, 2022, 7:10 AM IST
ಬೆಂಗಳೂರು: ವಸ್ತ್ರ ಸಂಹಿತೆಯನ್ನು ಈಗ ಅಲ್ಪಸಂಖ್ಯಾಕರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಅಧೀನದಲ್ಲಿ ನಡೆಯುತ್ತಿರುವ ವಸತಿ ಶಾಲಾ-ಕಾಲೇಜುಗಳಿಗೂ ಜಾರಿ ಮಾಡಲಾಗಿದ್ದು, ಹಿಜಾಬ್, ಕೇಸರಿ ಶಾಲು ಅಥವಾ ಸ್ಕಾರ್ಫ್ ಧರಿಸದಂತೆ ಆದೇಶ ಹೊರಡಿಸಲಾಗಿದೆ.
ವಸ್ತ್ರ ಸಂಹಿತೆ ಕುರಿತ ಹೈಕೋರ್ಟ್ ಆದೇಶವು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ-ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೂ (ಆಂಗ್ಲ ಮಾಧ್ಯಮ) ಸಹ ಅನ್ವಯವಾಗುತ್ತದೆ. ವಸತಿ ಶಾಲಾ-ಕಾಲೇಜು, ಮೌಲಾನಾ ಮಾದರಿ ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ತರಗತಿ ಕೊಠಡಿಗಳಲ್ಲಿ ಕೇಸರಿ ಶಾಲು, ಹಿಜಾಬ್, ಸ್ಕಾರ್ಫ್ ಸಹಿತ ಧಾರ್ಮಿಕ ಉಡುಪುಗಳನ್ನು ಧರಿಸದಂತೆ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿಂದೆ ಪದವಿಪೂರ್ವ ಕಾಲೇಜುಗಳಲ್ಲಿ ಶಾಲಾ ಅಭಿವೃದ್ಧಿ ಸಮಿತಿ ನಿಗದಿಪಡಿಸಿದ ವಸ್ತ್ರ ಸಂಹಿತೆ ಪಾಲಿಸಬೇಕು. ಹಿಜಾಬ್, ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಭಾವುಟ ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಾಂತರ ತೀರ್ಪು ನೀಡಿತ್ತು. ಈ ಮಧ್ಯೆ, ಅಭಿವೃದ್ಧಿ ಸಮಿತಿಗಳು ಸಮವಸ್ತ್ರ ನಿಗದಿಪಡಿಸದೆ ಇದ್ದರೆ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಸಮವಸ್ತ್ರ ಧರಿಸಬೇಕು ಎಂದು ಸರಕಾರ ಆದೇಶ ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.