ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ಚಾಲನೆ
Team Udayavani, Oct 17, 2020, 6:10 AM IST
ಮೈಸೂರು ನಗರವು ವಿದ್ಯುತ್ ದೀಪಗಳಿಂದ ಅಲಂಕರಿಸಲ್ಪಟ್ಟು ಜಗಮಗಿಸುತ್ತಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ನಡೆಯಲಿದ್ದು, 10 ದಿನಗಳ ಉತ್ಸವಕ್ಕೆ ಶನಿವಾರ ವಿಧ್ಯುಕ್ತ ಚಾಲನೆ ದೊರೆಯಲಿದೆ.
ಪ್ರತಿವರ್ಷವೂ ವಿಶ್ವದ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಮೈಸೂರು ದಸರಾ ಈ ಬಾರಿ ಸಾರ್ವಜನಿಕರು, ಪ್ರವಾಸಿಗರಿಲ್ಲದೆ ಅರಮನೆಗಷ್ಟೇ ಸೀಮಿತವಾಗಿದೆ. ಈ ಬಾರಿ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿ ಅರಮನೆಗೆ ಸೀಮಿತವಾಗಿದ್ದು, ಪಂಜಿನ ಕವಾಯತು ರದ್ದಾಗಿದೆ. ದೀಪಾಲಂಕಾರ ಎಂದಿನಂತಿದ್ದು, ಆನ್‌ಲೈನ್ ಮೂಲಕ ದಸರಾ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ದಸರಾ ಮಹೋತ್ಸವಕ್ಕೆ 7.45ರಿಂದ 8.15ರೊಳಗಿನ ಶುಭ ಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಯ ಅಗ್ರಪೂಜೆಯೊಡನೆ ಚಾಲನೆ ದೊರೆಯಲಿದೆ. ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ಹಿರಿಯ ಪ್ರಾಧ್ಯಾಪಕ ಮತ್ತು ನಿರ್ದೇಶಕ ಡಾ| ಸಿ.ಎನ್.ಮಂಜುನಾಥ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಸಚಿವರು, ಗಣ್ಯರ ಉಪಸ್ಥಿತಿಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಅಗ್ರ ಪೂಜೆ ಸಲ್ಲಿಸಿ ಉದ್ಘಾಟಿಸಲಿದ್ದಾರೆ. ಸಂಜೆ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ ಸಿಗಲಿದೆ. ಅ.26ರಂದು ಅರಮನೆ ಆವರಣದಲ್ಲಿ ಜಂಬೂ ಸವಾರಿ ನಡೆಯಲಿದೆ.
ಕೋವಿಡ್ ವಾರಿಯರ್ಸ್‌ಗೆ ಸಮ್ಮಾನ
ಉದ್ಘಾಟನಾ ಸಮಾರಂಭದಲ್ಲಿ ಕೊರೊನಾ ವಿರುದ್ಧ ಹಗಲಿರುಳೆನ್ನದೆ ಅವಿರತ ಶ್ರಮಿಸಿರುವ ಕೊರೊನಾ ವಾರಿಯರ್‌ಗಳನ್ನು ಸಮ್ಮಾನಿಸಲಾಗುತ್ತದೆ. ಎಚ್‌ಎಚ್‌ಎಂಬಿಜಿ ಆಸ್ಪತ್ರೆ ವೈದ್ಯಾಧಿಕಾರಿ ಡಾ| ನವೀನ್ ಟಿ.ಆರ್., ಜಿಲ್ಲಾ ಆಸ್ಪತ್ರೆಯ ಹಿರಿಯ ಶುಶ್ರೂಷಾಧಿಕಾರಿ ರುಕ್ಮಿಣಿ, ಪೊಲೀಸ್ ಕಾನ್‌ಸ್ಟೆಬಲ್ ಕುಮಾರ ಪಿ., ಪಾಲಿಕೆ ಪೌರಕಾರ್ಮಿಕರಾದ ಮರಗಮ್ಮ, ನಂಜನಗೂಡು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ನೂರ್ ಜಾನ್, ಸಮಾಜ ಸೇವಕ ಆಯೂಬ್ ಅಹಮದ್ ಅವರನ್ನು ಸಮ್ಮಾನಿಸಲಾಗುತ್ತದೆ.
ಯದುವೀರ್ ಖಾಸಗಿ ದರ್ಬಾರ್
ದಸರಾ ಸರಳವಾಗಿ ನಡೆದರೂ ರಾಜಮನೆ ತನದ ಖಾಸಗಿ ದರ್ಬಾರ್ ಎಂದಿನಂತೆ ನ.17ರಿಂದ ಅರಮನೆಯ ದರ್ಬಾರ್ ಹಾಲ್‌ನಲ್ಲಿ ನಡೆಯಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಿಸಲಾಗುತ್ತಿದೆ. ಸಾರ್ವಜನಿಕರು ಸೋಂಕಿನಿಂದ ದೂರವಿರಲು ಕೋವಿಡ್ ಮಾರ್ಗಸೂಚಿ ಪಾಲಿಸಬೇಕು. ಸಾರ್ವಜನಿಕರ ಅಪೇಕ್ಷೆಯಂತೆಯೇ ದಸರಾ ನಡೆಯುತ್ತಿದ್ದು, ನಾಡಿನ ಸಮಸ್ತ ಜನತೆಗೆ ನಾಡಹಬ್ಬ, ನವರಾತ್ರಿ ಶುಭಾಶಯಗಳು.
– ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.