Bigg Boss ನಲ್ಲಿ ಗೆದ್ದ ಸ್ಕೂಟರನ್ನು ಬಡ ಹುಡುಗನಿಗೆ ಕೊಟ್ಟು ನುಡಿದಂತೆ ನಡೆದ ಪ್ರತಾಪ್
Team Udayavani, Feb 20, 2024, 8:58 PM IST
ಬೆಂಗಳೂರು: ಬಿಗ್ ಬಾಸ್ ಸೀಸನ್ 10 ರಲ್ಲಿ ರನ್ನರ್ ಅಪ್ ಆಗುವ ಮೂಲಕ ಡ್ರೋನ್ ಪ್ರತಾಪ್ ಅಪಾರ ಮಂದಿಯ ಮನಗೆದ್ದಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮ ಪ್ರತಾಪ್ ಅವರ ಬದುಕನ್ನು ಬದಲು ಮಾಡಿದೆ.
ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ, ರನ್ನರ್ ಅಪ್ ಹೊರಹೊಮ್ಮಿದ ಮೇಲೆ ಅವರ ವ್ಯಕ್ತಿತ್ವದಲ್ಲಿ ಬದಲಾವಣೆ ಕಂಡುಬಂದಿತ್ತು. ಹೊಸ ಪ್ರತಾಪ್ ನನ್ನು ಜನ ಕೊಂಡಾಡಿದ್ದಾರೆ. ಪ್ರತಾಪ್ ಈಗ ಸೆಲೆಬ್ರಿಟಿ ಆಗಿದ್ದಾರೆ. ಅವರು ಎಲ್ಲಿ ಹೋದರು ಜನ ಬೆಂಬಲ ಅವರೊಂದಿಗೆ ಇರುತ್ತದೆ.
ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಬಂದ ಹಣ ಹಾಗೂ ಬಹುಮಾನವನ್ನು ತಾನು ತೆಗೆದುಕೊಳ್ಳುವುದಿಲ್ಲ. ಬದಲಾಗಿ ಅದನ್ನು ಅಗತ್ಯವಿರುವವರಿಗೆ ನೀಡುವುದಾಗಿ ಫಿನಾಲೆ ವೇದಿಕೆಯಲ್ಲಿ ಹೇಳಿದ್ದರು. ಅದರಂತೆ ಫಿನಾಲೆಯಲ್ಲಿ ರನ್ನರ್ ಅಪ್ ಆದ ಪ್ರತಾಪ್ ಅವರಿಗೆ ಹಣದೊಂದಿಗೆ ಎಲೆಕ್ಟ್ರಿಕ್ ಸ್ಕೂಟರ್ ನ್ನು ಸಹ ನೀಡಲಾಗಿತ್ತು.
ಸ್ಕೂಟರ್ ಸಿಕ್ಕ ಬಳಿಕ ಪ್ರತಾಪ್ ಸ್ಕೂಟರ್ ನ್ನು ಈ ಹಿಂದೆಯೇ ಹೇಳಿದಂತೆ ಬಡವರಾಗಿ ಫುಡ್ ಡೆಲಿವರಿ ಮಾಡುಗ ಯಾರಿಗಾದರೂ ಅದನ್ನು ನೀಡುತ್ತೇವೆ ಎಂದಿದ್ದರು. ಇದೀಗ ಮಾತಿಗೆ ತಕ್ಕಂತೆ ಅವರು ಸ್ಕೂಟರ್ ನ್ನು ಯುವಕನೊಬ್ಬನಿಗೆ ನೀಡಿದ್ದಾರೆ.
ಬಿಗ್ಬಾಸ್ ನಲ್ಲಿ ಬಹುಮಾನವಾಗಿ ಬಂದ ಬೈಕ್ ಅನ್ನು ಹೇಳಿದ ಹಾಗೆ ಯಾರಿಗೆ ನೀಡಿದೆ ಅನ್ನುವುದಕ್ಕೆ ಉತ್ತರ ಇಲ್ಲಿದೆ..
ಇವರು ರಾಜು ಅಂತ ಮಧ್ಯಾಹ್ನದಿಂದ ಸಂಜೆ ವರೆಗೂ ಹೋಟಲ್ ನಲ್ಲಿ ಕೆಲಸ ಮಾಡಿ ಹಾಗೂ ಸಂಜೆಯ ಮೇಲೆ FOOD DELIVERY ಕೆಲಸ ಮಾಡುತ್ತಾರೆ ಮತ್ತು ಇವರು ತಮ್ಮ ಸ್ನೇಹಿತರ ಹೆಸರಲ್ಲಿ ಗಾಡಿಯನ್ನು ತೆಗೆದುಕೊಂಡು ಅದಕ್ಕೆ ತಿಂಗಳು ತಿಂಗಳು ಕಂತು ಕಟ್ಟುತ್ತಿದ್ದರು.ಆದರೆ ಅವರ ಸ್ನೇಹಿತ ಮಾಡಿದ ಮೋಸದಿಂದ ತಮ್ಮ ಬೈಕನ್ನು ಬ್ಯಾಂಕ್ ನವರು sieze ಮಾಡಿದರು ಹಾಗಾಗಿ ಇವರಿಗೆ ನನಗೆ ಬಹುಮಾನವಾಗಿ ಬಂದ ELECTRIC ಗಾಡಿಯನ್ನು ಈ ಹುಡುಗನಿಗೆ ನೀಡಿದು ನನಗೆ ತುಂಬಾ ಖುಷಿ ತಂದಿದೆ ಎಂದು ಡ್ರೋನ್ ಪ್ರತಾಪ್ ಬರೆದಿದ್ದಾರೆ.
ಸ್ಕೂಟರ್ ನೀಡಿದ ಫೋಟೋವನ್ನು ಪ್ರತಾಪ್ ಅವರು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.