ಮಾದಕವಸ್ತು ನಿಯಂತ್ರಣಕ್ಕೆ 2012ರಲ್ಲೇ ಶಿಫಾರಸು!
ಯೋಗೀಶ್ ಭಟ್ ವರದಿ ಆಧರಿಸಿ ಸಭೆ ನಡೆಸಿದ ಗೃಹ ಸಚಿವ
Team Udayavani, Sep 2, 2020, 6:55 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
– ಶಂಕರ ಪಾಗೋಜಿ
ಬೆಂಗಳೂರು: ರಾಜ್ಯದಲ್ಲಿ ಮಾದಕವಸ್ತು ಜಾಲ ಆತಂಕ ಸೃಷ್ಟಿಸುತ್ತಿರುವ ಬಗ್ಗೆ ಎಂಟು ವರ್ಷಗಳ ಹಿಂದೆಯೇ ವಿಧಾನಸಭೆಯ ಅರ್ಜಿಗಳ ಸಮಿತಿ ವಿಸ್ತೃತ ಅಧ್ಯಯನ ನಡೆಸಿತ್ತು.
ಅದನ್ನು ಮಟ್ಟಹಾಕಲು ಪ್ರಬಲ ಕಾನೂನು ಜಾರಿ ಸಹಿತ ಸುಮಾರು 18 ಶಿಫಾರಸುಗಳನ್ನು ಮಾಡಿತ್ತು.
ಸ್ಯಾಂಡಲ್‌ವುಡ್‌ನಲ್ಲಿ ಮಾದಕದ್ರವ್ಯ ಸದ್ದು ಮಾಡಿರುವ ಹಿನ್ನೆಲೆಯಲ್ಲಿ ಆ ವರದಿ ಈಗ ಮತ್ತೆ ಮುನ್ನೆಲೆಗೆ ಬಂದಿದೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾಜಿ ಶಾಸಕ ಎನ್. ಯೋಗೀಶ್ ಭಟ್ ಅವರ ವರದಿಯ ಕುರಿತು ಚರ್ಚೆ ನಡೆಸಲಾಗಿದೆ.
ಈ ವರದಿಯ ಪ್ರಮುಖ ಶಿಫಾರಸುಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಗೃಹ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಯೋಗೀಶ್ ಭಟ್ ವರದಿ ಸಲ್ಲಿಕೆಯಾದ ಅನಂತರ ರಾಜ್ಯದ ಮೂರು ಪ್ರಮುಖ ಪಕ್ಷಗಳು ಅಧಿಕಾರ ನಡೆಸಿದ್ದರೂ ಈ ವರದಿಯ ಶಿಫಾರಸುಗಳನ್ನು ಪರಿಗಣನೆಗೆ ತೆಗೆದುಕೊಂಡಿರಲಿಲ್ಲ. ಈಗ ಮತ್ತೆ ಮಾದಕ ವಸ್ತು ಜಾಲದ ಕರಾಳ ಮುಖ ಸ್ಫೋಟಗೊಂಡಿದೆ.
ಶಿಫಾರಸುಗಳು
– ಸರಕಾರ ಮಾದಕ ವಸ್ತುಗಳ ಬಳಕೆ ಬಗ್ಗೆ ಸಮಗ್ರ ಮಾಹಿತಿ ಪಡೆಯಬೇಕು. ಅದರ ಆಧಾರದ ಮೇಲೆ ಮಾದಕ ವ್ಯಸನಿಗಳ ಪ್ರಮಾಣ ಮತ್ತು ಪೊಲೀಸರು ಪ್ರಕರಣ ದಾಖಲಿಸುವ ಪ್ರಮಾಣದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ.
– ಮಾದಕ ವ್ಯಸನಿಗಳ ಪುನರ್ವಸತಿಗೆ ನೀತಿ ರೂಪಿಸಬೇಕು.
– ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ವಿಶಿಷ್ಟ ಯೋಜನೆ ರೂಪಿಸಬೇಕು.
- ಮಾದಕ ವಸ್ತು ವ್ಯಸನಿಗಳ ಚಿಕಿತ್ಸೆಗೆ ಎಲ್ಲ ಸೌಕರ್ಯಗಳನ್ನು ಒಳಗೊಂಡ ಕೇಂದ್ರಗಳನ್ನು ಪ್ರಮುಖ ಸ್ಥಳಗಳಲ್ಲಿ ಪ್ರಾರಂಭಿಸಬೇಕು.
– ಮಾದಕ ವಸ್ತು ಮಾರಾಟ ಜಾಲ ತಡೆಯಲು ಕಠಿನ ಕಾನೂನು ರೂಪಿಸಬೇಕು.
– ಐಟಿ -ಬಿಟಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಯುವಕ-ಯುವತಿಯರು ಕೆಲಸದ ಒತ್ತಡದಿಂದ ಮಾದಕ ವಸ್ತು ವ್ಯಸನಿಗಳಾಗುತ್ತಿದ್ದಾರೆ. ಇವರಿಗೆ ಮಾನಸಿಕ ಒತ್ತಡ ನಿಭಾವಣೆಯ ಕುರಿತು ಸೂಕ್ತ ತರಬೇತಿ ನೀಡುವಂತೆ ಐಟಿ-ಬಿಟಿ ಕಂಪೆನಿಗಳಿಗೆ ಸರಕಾರ ನಿರ್ದೇಶನ ನೀಡಬೇಕು.
– ಮಾದಕ ವಸ್ತು ಮಾರಾಟ ಮಾಡುವವರು ಕನಿಷ್ಠ 250 ಗ್ರಾಂನಷ್ಟು ಹೊಂದಿದ್ದರೆ ಮಾತ್ರ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ. ಆದರೆ ಮಾದಕ ವಸ್ತು ಮಾರಾಟಗಾರರು ಶಾಲಾ, ಕಾಲೇಜುಗಳಲ್ಲಿ ಚಿಲ್ಲರೆಯಾಗಿ ಮಾರಾಟ ಮಾಡುವುದರಿಂದ ಅವರನ್ನು ಪತ್ತೆಹಚ್ಚಿದರೂ ಕಾನೂನು ಕ್ರಮ ಕೈಗೊಳ್ಳಲು ಈಗಿರುವ ಕಾನೂನಿನಲ್ಲಿ ಅವಕಾಶವಿಲ್ಲ. ಹೀಗಾಗಿ ಮಾನದಂಡವನ್ನು ಕನಿಷ್ಠ 10 ಗ್ರಾಂಗೆ ಬದಲಾಯಿಸಬೇಕು.
– ಮಾದಕ ವಸ್ತುಗಳ ನಿಯಂತ್ರಣದಲ್ಲಿ ರಾಸಾಯನಿಕಗಳ ವಿಶ್ಲೇಷಣೆ ಅತ್ಯಂತ ಮುಖ್ಯವಾಗಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು ಬಲಗೊಳಿಸಲು ಕ್ರಮ ಕೈಗೊಳ್ಳಬೇಕು.
– ಮಾದಕ ದ್ರವ್ಯ ನಿಯಂತ್ರಣ ಘಟಕ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಡ್ರಗ್ಸ್ ಮಾಫಿಯಾ ಚಟುವಟಿಕೆ ನಿರ್ಮೂಲನೆ ಮಾಡುವ ಮಾಹಿತಿ ಕಲೆ ಹಾಕಿ ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಲು ದಕ್ಷ ಮತ್ತು ಸಮರ್ಥ ಅಧಿಕಾರಿಗಳನ್ನು ನೇಮಕ ಮಾಡಬೇಕು.
– ಶಿಕ್ಷಣ ಸಂಸ್ಥೆಗಳ ನೂರು ಮೀಟರ್ ವ್ಯಾಪ್ತಿಯೊಳಗಡೆ ತಂಬಾಕು ಮತ್ತು ಮಾದಕ ದ್ರವ್ಯಗಳ ಮಾರಾಟ ಮಾಡುತ್ತಿರುವ ಅಂಗಡಿಗಳನ್ನು ಮುಚ್ಚಬೇಕು/ ಸ್ಥಳಾಂತರ ಮಾಡಬೇಕು.
– ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಮಾದಕ ವಸ್ತುಗಳಿಂದ ದೂರ ನಿಲ್ಲುವ ಕುರಿತು ತರಬೇತಿ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು.
– ಮಾದಕ ವಸ್ತು ಸೇವನೆಯಿಂದ ನಡೆಯುತ್ತಿರುವ ಮಹಿಳೆಯ ಮೇಲಿನ ದೌರ್ಜನ್ಯ, ಅತ್ಯಾಚಾರ, ವಿದ್ಯಾರ್ಥಿಗಳ ಆತ್ಮಹತ್ಯೆ, ಮಹಿಳೆಯರ ಕಳ್ಳಸಾಗಾಣಿಕೆಯಂತಹ ಪ್ರಕರಣ ಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ತಂಡ ರಚಿಸಬೇಕು.
ವರದಿಯಲ್ಲೇನಿದೆ?
2012ರಲ್ಲಿ ಮಂಗಳೂರಿನಲ್ಲಿ ಮಾದಕ ವಸ್ತು ಜಾಲ ಅವ್ಯಾಹತವಾಗಿತ್ತು. ಇದನ್ನು ತಡೆಯಲು ಹೆತ್ತವರು, ಪೋಷಕರು ವಿಧಾನಸಭೆಯ ಅರ್ಜಿಗಳ ಸಮಿತಿಗೆ ದೂರು ಸಲ್ಲಿಸಿದ್ದರು. ಇದರ ಅನ್ವಯ ಯೋಗೀಶ್ ಭಟ್ ಅಧ್ಯಕ್ಷತೆಯ ಸಮಿತಿ 8 ತಿಂಗಳು ಅಧ್ಯಯನ ಮಾಡಿ 18 ಶಿಫಾರಸುಗಳನ್ನು ನೀಡಿತ್ತು.
ಮಾದಕ ದ್ರವ್ಯ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕುವುದಾಗಿ ಗೃಹ ಸಚಿವ ಬೊಮ್ಮಾಯಿ ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಈ ಬಗ್ಗೆ ಸರಕಾರ ನಿರ್ಣಾಯಕ ಹೆಜ್ಜೆಗಳನ್ನು ಇರಿಸಬೇಕು. ಇದರಲ್ಲಿ ಸರಕಾರ ಮತ್ತು ಪೊಲೀಸ್ ಇಲಾಖೆ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
– ಎನ್. ಯೋಗೀಶ್ ಭಟ್, ಮಾಜಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.