High Court: ನಾಗೇಂದ್ರಗೆ ಇ.ಡಿ. ತುರ್ತು ನೋಟಿಸ್
Team Udayavani, Oct 25, 2024, 12:27 AM IST
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಪ್ರಕರಣ ಸಂಬಂಧ ಮಾಜಿ ಸಚಿವ ಬಿ. ನಾಗೇಂದ್ರ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಅರ್ಜಿ ಸಂಬಂಧ ಬಿ. ನಾಗೇಂದ್ರಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.
ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಜಾರಿ ನಿರ್ದೇಶನಾಲಯದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಹಾಗೂ ವಿಶೇಷ ಎಸ್ಪಿಪಿ ಪಿ. ಪ್ರಸನ್ನಕುಮಾರ್ ಹಾಜರಿದ್ದರು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳ ವಾದ (ಸಚಿವ ನಾಗೇಂದ್ರ) ಆಲಿಸದೆ ಯಾವುದೇ ಆದೇಶ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿತು. ಅಲ್ಲದೆ, ಬಿ. ನಾಗೇಂದ್ರಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.