ದೇವಾಲಯಗಳಲ್ಲಿ ಇ-ಹುಂಡಿ ವ್ಯವಸ್ಥೆ: ಕೋಟ ಶ್ರೀನಿವಾಸ ಪೂಜಾರಿ
Team Udayavani, Aug 31, 2019, 3:05 AM IST
ಉಡುಪಿ: ರಾಜ್ಯದ ಎಲ್ಲ ದೇವಾಲಯಗಳ ಹುಂಡಿಯಲ್ಲಿ ಸಂಗ್ರಹವಾಗುವ ಮೊತ್ತವನ್ನು ಅತ್ಯಂತ ನಿಖರವಾಗಿ ಎಣಿಕೆ ಮಾಡುವ ಇ-ಹುಂಡಿ ವ್ಯವಸ್ಥೆಯನ್ನು ಇ ಗವರ್ನೆನ್ಸ್ ಇಲಾಖೆ ಮೂಲಕ ಜಾರಿಗೊಳಿಸಲಾಗುವುದು ಎಂದು ರಾಜ್ಯದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
ದೇವಾಲಯದ ಹುಂಡಿಗಳಲ್ಲಿ ಭಕ್ತರು ಹಣ ಹಾಕಿದ ಕೂಡಲೇ ಅದರ ನಿರ್ದಿಷ್ಟ ಮೊತ್ತವನ್ನು ತೋರಿಸುವ ಹುಂಡಿ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಹಣ ಮಾತ್ರವಲ್ಲದೆ ಹುಂಡಿಯಲ್ಲಿ ಹಾಕುವ ಚಿನ್ನಾಭರಣಗಳ ತೂಕ ವನ್ನೂ ಸಹ ಇದರಲ್ಲಿ ಪರೀಕ್ಷಿಸ ಬಹುದಾಗಿದೆ. ಹುಂಡಿಯಲ್ಲಿ ಸಂಗ್ರಹ ವಾಗುವ ಮೊತ್ತ ನೇರ ವಾಗಿ ಸಂಬಂಧಪಟ್ಟ ದೇವಾಲಯದ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ. ಇದರಿಂದ ಭಕ್ತರು ನೀಡಿದ ಮೊತ್ತವನ್ನು ಅತ್ಯಂತ ಪಾರದರ್ಶಕವಾಗಿ ದೇಗುಲದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಸಲು ಹಾಗೂ ಭಕ್ತರಿಗೆ ಅಗತ್ಯ ಸೌಲಭ್ಯ ಒದಗಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.
ದೇವಾಲಯಗಳಲ್ಲಿ ವಿವಿಧ ಸೇವೆ ಗಳಿ ಗಾಗಿ ನೀಡುವ ರಸೀದಿಯನ್ನು ಏಕರೂಪದ ತಂತ್ರಾಂಶದ ಮೂಲಕ ನಿರ್ವಹಣೆ ಮಾಡಲು ನಿರ್ಧರಿಸಿದ್ದು, ಈಗಾಗಲೇ ಕೊಲ್ಲೂರು ಮುಂತಾದ ದೇವಾಲಯಗಳಲ್ಲಿ ಈ ವ್ಯವಸ್ಥೆ ಇದೆ. ಇದನ್ನು ರಾಜ್ಯದ ಎಲ್ಲ ದೇವಾಲಯಗಳಲ್ಲಿ ಅಳವಡಿಸಲಾಗುವುದು ಎಂದು ಸಚಿವರು ಹೇಳಿದರು. ರಾಜ್ಯದ ದೇವಾಲಯಗಳ ಕಾಮಗಾರಿ ಗಳ ಕುರಿತಂತೆ ಅಗತ್ಯ ಯೋಜನೆ ರೂಪಿಸಲು ಮತ್ತು ತಾಂತ್ರಿಕ ಅನು ಮೋದನೆ ನೀಡಲು ಪ್ರತ್ಯೇಕ ಎಂಜಿನಿಯರಿಂಗ್ ವಿಭಾಗ ತೆರೆಯಲು ಹಾಗೂ ಮುಜರಾಯಿ ಇಲಾಖೆಯಲ್ಲಿ 1,000 ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಮುಜರಾಯಿ ಇಲಾಖೆಯಲ್ಲಿ 2 ಕೋಟಿ ರೂ.ವರೆಗಿನ ನಿರ್ಮಾಣ ಕಾಮಗಾರಿಗೆ ಮತ್ತು 1 ಕೋಟಿ ರೂ.ವರೆಗಿನ ಇತರ ಕಾಮ ಗಾರಿಗೆ ಅನುಮೋದನೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡುವ ಕುರಿತಂತೆ ಪರಿಶೀಲಿಸಲಾಗುವುದು ಮತ್ತು 25 ಲಕ್ಷಕ್ಕಿಂತ ಹೆಚ್ಚಿನ ಆದಾಯ ಇರುವ “ಬಿ’ ವರ್ಗದ ದೇವಸ್ಥಾನಗಳನ್ನು ತಕ್ಷಣವೇ “ಎ’ ವರ್ಗಕ್ಕೆ ಸೇರ್ಪಡೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
ದೇವಾಲಯಗಳ ಮೂಲಕ ಗೋ ಸಂರಕ್ಷಣೆ: ರಾಜ್ಯದ “ಎ’ ವರ್ಗದ ದೇವಾಲಯ ಗಳ ಮೂಲಕ ಗೋ ಸಂರಕ್ಷಣೆ ಮಾಡುವ ಉದ್ದೇಶ ಹೊಂದಿದ್ದು, ಪ್ರಾಯೋಗಿಕವಾಗಿ ಕೊಲ್ಲೂರು ಮತ್ತು ಮಂದಾರ್ತಿ ದೇವಾಲಯಗಳಲ್ಲಿ ಗೋ ಸಂರಕ್ಷಣೆ ಕೇಂದ್ರ ಆರಂಭಿಸಲಾ ಗುತ್ತದೆ ಎಂದರು. ಈ ಕುರಿತಂತೆ ಕಂದಾಯ ಇಲಾಖೆಯ ಅಧಿಕಾರಿಗ ಳೊಂದಿಗೆ ಅಗತ್ಯ ಭೂಮಿಯನ್ನು ಗುರುತಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.