Earthquake: ಗುಮ್ಮಟ ನಗರದಲ್ಲಿ ಭೂಕಂಪನ
Team Udayavani, Jul 6, 2023, 9:47 AM IST
ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಜು.6ರ ಗುರುವಾರ ನಸುಕಿನಲ್ಲಿ ಭೂಕಂಪನವಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಲಘು ಕಂಪನದ ಪರಿಣಾಮ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ.
ಗುರುವಾರ ನಸುಕಿನ 1.38 ರ ಸಮಯದಲ್ಲಿ 3.4 ರಷ್ಟು ತೀವ್ರತೆ ಹೊಂದಿದ್ದ ಭೂಕಂಪನ ಸಂಭವಿಸಿದೆ. ಜನರು ಗಾಢ ನಿದ್ರೆಯಲ್ಲಿದ್ದ ಕಾರಣ ಭೂಕಂಪನದ ಅನುಭವ ಬಹುತೇಕರಿಗೆ ಆಗಿಲ್ಲ. ಹೀಗಾಗಿ ಜನರು ಈ ಹಿಂದಿನ ಘಟನೆಗಳಂತೆ ಆತಂಕಗೊಂಡು ಮನೆಯಿಂದ ಹೊರಗೆ ಓಡಿ ಬಂದಿಲ್ಲ.
ವಿಜಯಪುರ ನಗರ, ಐನಾಪುರ, ಕತಕನಹಳ್ಳಿ, ಹಿಟ್ನಳ್ಳಿ ಸೇರಿದಂತೆ ಸುತ್ತಲಿನ ಬಹುತೇಕ ಗ್ರಾಮಗಳಲ್ಲಿ ಭೂಕಂಪನದ ಅನುಭವ ಆಗಿದೆ.
ವಿಜಯಪುರ ನಗರದ ಹೊರ ವಲಯದಲ್ಲಿರುವ ಐನಾಪುರ ಗ್ರಾಮದ ಪರಿಸರದ ಭೂಮಿಯ 5 ಕಿ.ಮೀ. ಆಳದಲ್ಲಿ ಭೂಕಂಪನದ ಬಿಂದು ಕೇಂದ್ರೀಕೃತವಾಗಿದೆ.
ಭೂಕಂಪನ ಘಟನೆ ರಿಕ್ಟರ್ ಮಾಪನ ಕೇಂದ್ರದಲ್ಲಿ ದಾಖಲಾಗಿರುವುದನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ (ಕೆ.ಎಸ್.ಎನ್.ಡಿ.ಎಂ.ಸಿ) ದೃಢಪಡಿಸಿದ್ದಾಗಿ ಜಿಲ್ಲಾಡಳಿತ ಖಚಿತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.