ವಾರಾಹಿ ಹಿನ್ನೀರು ಪ್ರದೇಶ ಮಾಣಿ ಡ್ಯಾಂ ಬಳಿ ಭೂಕಂಪ

Team Udayavani, Feb 4, 2019, 12:54 AM IST

earthquake.jpg

ತೀರ್ಥಹಳ್ಳಿ/ಹೊಸನಗರ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನ ಕೆಲವೆಡೆ ಶನಿವಾರ ತಡರಾತ್ರಿ 1.33ರ ಸುಮಾರಿಗೆ ಭೂಕಂಪವಾಗಿದ್ದು, ದೊಡ್ಡ ಹಾನಿ ಸಂಭವಿಸಿಲ್ಲ.

ತೀರ್ಥಹಳ್ಳಿ ತಾಲೂಕಿನ ವಿಠಲನಗರ ಭೂಕಂಪನದ ಕೇಂದ್ರ ಸ್ಥಾನವಾಗಿದ್ದು, ರಿಕ್ಟರ್‌ ಮಾಪಕದಲ್ಲಿ 2.2ರಷ್ಟು ತೀವ್ರತೆ ದಾಖಲಾಗಿದೆ. ಆದರೆ, ವಾರಾಹಿ ಹಿನ್ನೀರು ಪ್ರದೇಶ ಹಾಗೂ ಮಾಣಿ ಡ್ಯಾಂ ಭಾಗದಲ್ಲಿ ಇದೇ ಮೊದಲ ಬಾರಿಗೆ ಭೂಕಂಪವಾಗಿದ್ದು ಆತಂಕ ಸೃಷ್ಟಿಸಿದೆ. ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಸುತ್ತಮುತ್ತಲಿನ ಗ್ರಾಮಗಳಾದ ಹನಸ, ಕರುಣಾಪುರ, ಅಚ್ಚಾರು, ಹುರುಳಿ, ಕೊಕ್ಕೋಡು, ಗಾರ್ಡರಗದ್ದೆ, ಶಿರೂರು, ಪಡುವಳ್ಳಿ ಹಾಗೂ ಹೊಸನಗರ ತಾಲೂಕಿನ ನಗರ ಹೋಬಳಿಯ ಸುಳುಗೋಡು, ಯಡೂರು, ಮಾಸ್ತಿಕಟ್ಟೆ, ತಮ್ಮೇಮನೆಗಳಲ್ಲಿಯೂ ಭೂಮಿ ಕಂಪಿಸಿದೆ.

ಶನಿವಾರ ತಡ ರಾತ್ರಿ ಇದ್ದಕ್ಕಿದ್ದಂತೆ ದೊಡ್ಡ ಶಬ್ದ ಕೇಳಿ ಬಂತು. ಇದರಿಂದ ಮಲಗಿದ್ದ ಜನ ಬೆಚ್ಚಿದರು. ಏನಾಗಿರಬಹುದು ಎಂದುಕೊಳ್ಳುವಷ್ಟರಲ್ಲೇ ಭೂಮಿ ಸಣ್ಣದಾಗಿ ಕಂಪಿಸಿದೆ. ಎತ್ತರದ ಸ್ಥಳದಲ್ಲಿಟ್ಟಿದ್ದ ವಸ್ತುಗಳೆಲ್ಲ ಕೆಳಕ್ಕೆ ಬಿದ್ದಿವೆ. ಹೊಸನಗರದ ಕೌರಿ ಎಂಬಲ್ಲಿ ದೇವೇಂದ್ರ ನಾಯ್ಕ ಎಂಬುವರ ಮನೆಯ ಗೋಡೆ ಬಿರುಕು ಬಿಟ್ಟಿದೆ. ಭಯಗೊಂಡ ಜನ ರಾತ್ರಿ ರಸ್ತೆಯಲ್ಲೇ ಕಾಲ ಕಳೆದಿದ್ದಾರೆ.

ಡ್ಯಾಂ ಪ್ರದೇಶದಲ್ಲಿ ಇದೇ ಮೊದಲು: ವಾರಾಹಿ ಜಲವಿದ್ಯುತ್‌ ಉತ್ಪಾದನಾ ಕೇಂದ್ರದ ಮಾಣಿ ಡ್ಯಾಂ ಬಳಿ ಇದೇ ಮೊದಲ ಬಾರಿಗೆ ಭೂಕಂಪನ ಆಗಿದೆ. ಜಲಾಶಯದ ಸುತ್ತಮುತ್ತ ಮತ್ತು ಹಿನ್ನೀರು ಪ್ರದೇಶದಲ್ಲಿ ಭೂಮಿ ಕಂಪಿಸಿದ್ದರಿಂದ ಇದು ದೊಡ್ಡ ಅನಾಹುತದ ಮುನ್ಸೂಚನೆಯೇ ಎಂದು ಜನ ಭಯಗೊಂಡಿದ್ದಾರೆ. ಇದೇ ವೇಳೆ, ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಹೊಸಂಗಡಿ, ಸಿದ್ದಾಪುರ, ಉಳ್ಳೂರು-74 ಪರಿಸರದಲ್ಲಿಯೂ ಶನಿವಾರ ಮಧ್ಯರಾತ್ರಿ 1.35ರಿಂದ 1.40ರ ಮಧ್ಯೆ ಸುಮಾರು 50 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವಾಗಿದೆ. ಆದರೆ, ಎಲ್ಲಿಯೂ ಕೂಡ ಹಾನಿ ಸಂಭವಿಸಿಲ್ಲ.

ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನ ಕೆಲವೆಡೆ ಭೂಮಿ ಕಂಪಿಸಿದೆ. ಮಾಣಿ ಡ್ಯಾಂ ಸಮೀಪದ ಸುಣ್ಣದಮನೆ ಬಳಿಯ ವಿಠಲನಗರ ಭೂಕಂಪನ ದಾಖಲು ಕೇಂದ್ರದಲ್ಲಿ 2.2ರಷ್ಟು ತೀವ್ರತೆ ದಾಖಲಾಗಿದೆ. ಈ ಭಾಗದಲ್ಲಿನ ಕಲ್ಲು ಗಣಿಗಾರಿಕೆಯಿಂದ ಭೂಮಿ ಕಂಪಿಸಿದೆ ಎನ್ನಲಾಗದು. ಇದಕ್ಕೆ ನಿಖರ ಕಾರಣ ಏನು ಎಂಬ ಬಗ್ಗೆ ತಜ್ಞರಿಂದ ಮಾಹಿತಿ ಪಡೆಯಲಾಗುವುದು. ● ಕೆ.ಎ.ದಯಾನಂದ, ಜಿಲ್ಲಾಧಿಕಾರಿ.

ಟಾಪ್ ನ್ಯೂಸ್

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.