ಡಿಕೆಶಿ ವಿರುದ್ಧದ ಇಸಿಐಆರ್ ಕೋರ್ಟ್‌ಗೆ ಸಲ್ಲಿಸಿದ ಇಡಿ
Team Udayavani, Mar 15, 2019, 2:28 AM IST
ಬೆಂಗಳೂರು: ಐಟಿ ದಾಳಿಗೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್ ಮತ್ತವರ ಆಪ್ತ ಸಚಿನ್ ನಾರಾಯಣ್ ಮತ್ತಿತರರ ವಿರುದ್ಧ ದಾಖಲಿಸಿಕೊಂಡಿರುವ “ಜಾರಿ ಪ್ರಕರಣ ಮಾಹಿತಿ ವರದಿ’ಯ (ಇಸಿಐಆರ್) ದಾಖಲೆಗಳನ್ನು ಜಾರಿ ನಿರ್ದೇಶನಾಲಯ ಗುರುವಾರ ಹೈಕೋರ್ಟ್‌ಗೆ ಸಲ್ಲಿಸಿದೆ.
ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಮತ್ತು ಇತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ| ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಜಾರಿ ನಿರ್ದೇಶನಾಲಯದ ಪರ ವಕೀಲರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಮುಚ್ಚಿದ ಲಕೋಟೆಯಲ್ಲಿ ಇಸಿಐಆರ್ ಸಲ್ಲಿಸಿದರು. ಆಗ ಲಕೋಟೆ ತೆರದು ಇಸಿಐಆರ್ ವರದಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳು, ಬಳಿಕ ಅದನ್ನು ವಾಪಸ್ ನೀಡಿದರು. ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಆ ವರದಿಯನ್ನು ಕೇಳುತ್ತೇನೆ ಎಂದು ಹೇಳಿದರು. ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಪೀಠ ವಿಚಾರಣೆಯನ್ನು ಮಾ. 18ಕ್ಕೆ ಮುಂದೂಡಿತು.
ಇದೇ ವೇಳೆ ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್, ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಿಂದ ಇನ್ನೂ ತನಿಖೆ ಬಾಕಿ ಇದೆ. ಈಗ ಆರೋಪಿಗಳಿಂದ ಯಾವುದೇ ದಾಖಲೆಗಳನ್ನು ಕೇಳಿಲ್ಲ. ಕೇವಲ ಅವರಿಗೆ ಹಾಜರಾಗಲು ಸೂಚಿಸಲಾಗಿದೆ. ಮೇಲ್ನೋಟಕ್ಕೆ ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ. ತನಿಖೆ ನಡೆದರೆ ಬೇರೆ ಅಂಶಗಳು ಲಭ್ಯವಾಗಬಹುದು. ಮೇಲಾಗಿ ಅರ್ಜಿದಾರರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ. ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೂ ಅವರು ಸಮನ್ಸ್ ರದ್ದು ಕೋರಿರುವುದು ನ್ಯಾಯಸಮ್ಮತವಲ್ಲ ಮತ್ತು ಈ ಹಂತದಲ್ಲಿ ಇದೊಂದು ಅಪಕ್ವ ವಾದವಾಗಿದೆ. ಆದ್ದರಿಂದ ಅರ್ಜಿದಾರರ ಮನವಿಯನ್ನು ಪುರಸ್ಕರಿಸಬಾರದು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.