ಖಾಲಿ ಡಂಗುರ ಬಾರಿಸುವುದು ನಿಮಗೆ ಶೋಭೆ ತರುವುದಿಲ್ಲ: ಸಿದ್ದು ವಿರುದ್ಧ ಬಿ.ಸಿ ನಾಗೇಶ್ ಕಿಡಿ

Team Udayavani, Sep 6, 2022, 9:11 AM IST

siddaramaih nagesh

ಬೆಂಗಳೂರು: ಭ್ರಷ್ಟಾಚಾರದ ಕುರಿತು ದಾಖಲೆಗಳಿದ್ದರೆ ತನಿಖಾ ಸಂಸ್ಥೆಗಳಿಗೆ ದೂರು ನೀಡಿ, ಅದನ್ನು ಬಿಟ್ಟು ಖಾಲಿ ಡಂಗುರ ಬಾರಿಸುವುದು ನಿಮ್ಮ ಹುದ್ದೆಗೆ ಶೋಭೆ ತರುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ.

ತಮ್ಮ ಇಲಾಖೆ ವಿರುದ್ಧ ಸಿದ್ದರಾಮಯ್ಯ ಮಾಡುತ್ತಿದ್ದ ಆರೋಪಗಳಿಗೆ ಇದೇ ಮೊದಲ ಬಾರಿಗೆ ಸರಣಿ ಟ್ವೀಟ್ ಮೂಲಕ ಉತ್ತರಿಸಿರುವ ನಾಗೇಶ್, ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ನೀವು, ಆರೋಪಗಳ ಬಗ್ಗೆ ಪುರಾವೆ ಸಮೇತ ದೂರು ನೀಡಿ ಸಾಬೀತುಪಡಿಸಿ. ಬರೀ ಗಾಳಿಯಲ್ಲಿ ಗುಂಡು ಹಾರಿಸುವುದೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ಅಧಿಕಾರದಲ್ಲಿದ್ದಾಗ ಲೋಕಾಯುಕ್ತ ಸಂಸ್ಥೆಯ ಅಧಿಕಾರ ಕಸಿದು ಎಸಿಬಿ ರಚಿಸಿದ್ದು ದುರುದ್ದೇಶದಿಂದ ಅಲ್ಲವೇ?  ಹಿಂದೂಗಳ ವಿಭಜನೆಗೆ ಯತ್ನ, ಹಗರಣಗಳು, ಭ್ರಷ್ಟಾಚಾರ, ಅಧಿಕಾರಿಗಳ ಸಾವುಗಳು, ಶಾಲಾ ಮಕ್ಕಳಲ್ಲಿ ತಾರತಮ್ಯ, ಸಮಾಜವಾದದ ಹೆಸರಿನಲ್ಲಿ‌ ಹೂಬ್ಲೋಟ್ ವಾಚ್ ಧರಿಸಿ ಮಜಾವಾದ ಹೀಗೆ ಪಟ್ಟಿ ಮಾಡುತ್ತಾ ಹೋದರೆ ಕೊನೆಯೇ ಇಲ್ಲ. ತುಷ್ಟೀಕರಣ, ಜಾತಿವಾದ, ಹಿಂದೂಗಳ ನಂಬಿಕೆ ಮತ್ತು ಧಾರ್ಮಿಕ ಆಚರಣೆಗಳ ಅವಹೇಳನ, ಅವಮಾನ ಮಾಡಿಕೊಂಡು ಓಡಾಡುವ ನಿಮಗೆ ಈಗಾಗಲೇ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಆದರೂ, ಅಹಂಕಾರ ಮುಂದುವರೆಸಿರುವ ನಿಮಗೆ ನಿಮ್ಮ ಪಕ್ಷದವರೂ ಒಳಗೊಂಡಂತೆ ಜನರು ಮತ್ತೊಮ್ಮೆ ಪಾಠ ಕಲಿಸಲು ಕಾಯುತ್ತಿದ್ದಾರೆ ನೆನಪಿರಲಿ ಎಂದು ವ್ಯಂಗ್ಯವಾಡಿದ್ದಾರೆ.

ಕಳೆದೊಂದು ವರ್ಷದಲ್ಲಿ 15,000 ಶಿಕ್ಷಕರ ನೇಮಕ, 8,100 ಕೊಠಡಿಗಳ ನಿರ್ಮಾಣ, ಪೌಷ್ಟಿಕ ಆಹಾರ ವಿತರಣೆ, ಅತಿಥಿ ಉಪನ್ಯಾಸಕರು, ಶಿಕ್ಷಕರು, ಬಿಸಿಯೂಟ ಕಾರ್ಯಕರ್ತರ ಗೌರವ ಸಂಭಾವನೆ ಹೆಚ್ಚಳ, ಶಿಕ್ಷಣದ ಸಮಗ್ರ ಸುಧಾರಣೆಗಾಗಿ ಎನ್ಇಪಿ ಅನುಷ್ಠಾನ ಕಾರ್ಯ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವುದು ನಿಮಗೆ ಸಹಿಸಲಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ಶಾಲಾ ಮಕ್ಕಳ ಸಮವಸ್ತ್ರ, ನೈತಿಕ ಶಿಕ್ಷಣ ತರಗತಿ, ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕ ಪೌಷ್ಟಿಕ ಆಹಾರ ವಿತರಣೆ, ಪಠ್ಯ ಪುಸ್ತಕ ಪರಿಷ್ಕರಣೆ ಮುಂತಾದ ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿಸಲು ಪ್ರಯತ್ನ ಮಾಡಿ ವಿಫಲರಾಗಿ ಈಗ ಮತ್ತೊಂದು ಸುಳ್ಳಿನ ಸರ ಪೋಣಿಸಲು ಪ್ರಯತ್ನ ಮಾಡುತ್ತಿರುವಿರಿ. ನಿಮ್ಮ ಸುಳ್ಳುಗಳು ನೀರಿನ ಮೇಲಿನ ಗುಳ್ಳೆಯಂತೆ ಎಂದು ವ್ಯಂಗ್ಯವಾಡಿದ್ದಾರೆ

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.