ಜವಾಬ್ದಾರಿ ಅರಿತು ಚುನಾವಣೆ ಕರ್ತವ್ಯ ನಿರ್ವಹಿಸಿ : ರಾಮಚಂದ್ರನ್
Team Udayavani, Dec 5, 2020, 3:48 PM IST
ಬೀದರ್: ಗ್ರಾಪಂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು. ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಜಾರಿಗೊಳಿಸಿರುವ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಡಿಸಿ ಆರ್. ರಾಮಚಂದ್ರನ್ ಹೇಳಿದರು.
ನಗರದ ರಂಗ ಮಂದಿರದಲ್ಲಿ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳಾದ ಆರ್‌ಒ ಮತ್ತು ಎಆರ್‌ಒಗಳಿಗೆ
ಆಯೋಜಿಸಿದ್ದ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆಯಿಂದ ಆರಂಭವಾಗಿ ಮತದಾನ, ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆವರೆಗೂ ನಿರ್ವಹಿಸಬೇಕಾದ ಎಲ್ಲ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಡೆಸಬೇಕು
ಎಂದು ಸಲಹೆ ಮಾಡಿದರು.
ಜಿಲ್ಲೆಯಲ್ಲಿ ಈ ಬಾರಿ ಗ್ರಾಪಂ ಚುನಾವಣೆಯ ಹೊಸತು ಏನೆಂದರೆ ಇವಿಎಂ ಯಂತ್ರಗಳನ್ನು ಬಳಸಲಾಗುತ್ತದೆ. ಇಡೀ ರಾಜ್ಯದಲ್ಲೇ ಬೀದರ ಜಿಲ್ಲೆಯಲ್ಲಿ ಮಾತ್ರ ಇವಿಎಂ ಯಂತ್ರಗಳನ್ನು ಬಳಸಲಾಗುತ್ತದೆ.
ಇದನ್ನೂ ಓದಿ:ಕಣ್ಣೀರು ಸುರಿಸೋದು ದೇವೇಗೌಡರ ಮನೆತನದ ಸಂಸ್ಕೃತಿ: ಸಿದ್ದರಾಮಯ್ಯ ವ್ಯಂಗ್ಯ
ಈ ಯಂತ್ರಗಳನ್ನು ಹೇಗೆ ಬಳಸಬೇಕು. ಯಾವ ರೀತಿ ಮತದಾನ ಮಾಡಬೇಕು ಎಂಬುದರ ಬಗ್ಗೆ ಚುನಾವಣೆ ಕಾರ್ಯಕ್ಕೆ
ನಿಯೋಜನೆಗೊಂಡ ಅಧಿಕಾರಿಗಳು ಅರಿಯಬೇಕು ಎಂದು ಸೂಚಿಸಿದರು. ಈ ವೇಳೆ ಚುನಾವಣಾ ಮಾಸ್ಟರ್ ಟ್ರೇನರ್ ಗೌತಮ ಅರಳಿ ಅವರು, ಚುನಾವನಾ ಕಾರ್ಯವನ್ನು ಹೇಗೆ ಮಾಡಬೇಕು, ನಾಮಪತ್ರಗಳನ್ನು ಹೇಗೆ ಪಡೆದುಕೊಳ್ಳಬೇಕು ಎಂಬುದು ಸೇರಿದಂತೆ ಹಲವಾರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತೆ ಗರೀಮಾ ಪನವಾರ ಮತ್ತು ತಾಲೂಕುಗಳ ತಹಶೀಲ್ದಾರರು ಇದ್ದರು.
201 ಆರ್‌ಒ, 211 ಎಆರ್‌ಒ
ಗ್ರಾಪಂ ಚುನಾವಣೆಯಲ್ಲಿ ಬೇರೆ ಬೇರೆ ಇಲಾಖೆಗಳ ಅಧಿ ಕಾರಿಗಳನ್ನು ಚುನಾವಣಾ ಅಧಿಕಾರಿ (ಆರ್‌ಒ) ಎಂದು ಹಾಗೂ
ಜಿಲ್ಲೆಯ ಎಲ್ಲ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳನ್ನು ಸಹಾಯಕ ಚುನಾವಣಾ ಅಧಿಕಾರಿಗಳು ಎಂದು ನಿಯೋಜಿಸಲಾಗಿದೆ.
201 ಆರ್‌ಒಗಳು ಮತ್ತು 211 ಎಆರ್ ಒಗಳನ್ನು ತರಬೇತಿಗೆ ನಿಯೋಜಿಸಲಾಗಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.