58 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಚುನಾವಣೆ
Team Udayavani, Dec 27, 2021, 7:00 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಮತ್ತು ವಿಟ್ಲ ಪಟ್ಟಣ ಪಂಚಾಯತ್ ಹಾಗೂ ಉಡುಪಿಯ ಕಾಪು ಪುರಸಭೆ ಸೇರಿದಂತೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಸೋಮವಾರ (ಡಿ. 27) ಮತದಾನ ನಡೆಯಲಿದೆ. ವಿವಿಧ ಪಕ್ಷಗಳ 3,440 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
5 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯತ್ ಸಹಿತ ಒಟ್ಟು 58 ನಗರ ಸ್ಥಳೀಯ ಸಂಸ್ಥೆಗಳ 1,185 ವಾರ್ಡ್‌ಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 5ರ ತನಕ ಮತದಾನ ನಡೆಯಲಿದೆ. 1,577 ಮತಗಟ್ಟೆ ಗಳನ್ನು ಸ್ಥಾಪಿಸಲಾಗಿದೆ. ವಿವಿಧ ಕಾರಣಗಳಿಗೆ ತೆರ ವಾಗಿರುವ ವಿವಿಧ ನಗರ ಸ್ಥಳೀಯ ಸಂಸ್ಥೆಗಳ 9 ವಾರ್ಡ್‌ಗಳಿಗೂ ಇದೇ ವೇಳೆ ಉಪಚುನಾವಣೆ ನಡೆ ಯಲಿದೆ. 5,138 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ದ್ದರು. ಅಂತಿಮವಾಗಿ ಬಿಜೆಪಿಯ 1,048, ಕಾಂಗ್ರೆಸ್‌ನ 1,047, ಜೆಡಿಎಸ್‌ನ 244 ಹಾಗೂ ಪಕ್ಷೇತರರು 910 ಸೇರಿ ಒಟ್ಟು 3,440 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.
ನಗರ ಸ್ಥಳೀಯ ಸಂಸ್ಥೆಗಳ ಮತದಾನಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳ ಲಾಗಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಅಗತ್ಯ ಸೂಚನೆಗಳನ್ನು ನೀಡ ಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ತಾಕೀತು ಮಾಡಲಾಗಿದೆ. -ಡಾ| ಬಿ. ಬಸವರಾಜು, ರಾಜ್ಯ ಚುನಾವಣ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.