CM ವಿರುದ್ಧ ಹರಿಪ್ರಸಾದ್ ಪರೋಕ್ಷ ಟೀಕೆಯಿಂದ ಸರಕಾರಕ್ಕೆ ಮುಜುಗರ: ಸಚಿವ ತಂಗಡಗಿ
ಹತಾಶೆಯಿಂದ ಟೀಕಿಸುವ ಬದಲು ಅರ್ಥ ಮಾಡಿಕೊಂಡು ಸಲಹೆ ಸಹಕಾರ ನೀಡಲಿ
Team Udayavani, Sep 11, 2023, 7:31 PM IST
ಗಂಗಾವತಿ: ”ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾನು ದೇವರಾಜು ಅರಸು ಎಂದು ಎಲ್ಲಿಯೂ ಹೇಳಿಲ್ಲ. ಆದರೂ ಬಿ.ಕೆ.ಹರಿಪ್ರಸಾದ್ ಪರೋಕ್ಷವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಟೀಕೆ ಮಾಡುತ್ತಿರುವುದು ಅವರಿಗೆ ಶೋಭೆಯಲ್ಲ. ಈ ಕುರಿತು ಪಕ್ಷದ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ” ಎಂದು ಸಚಿವ ಶಿವರಾಜ್ ಎಸ್ ತಂಗಡಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಸಣ್ಣ, ಅತೀ ಸಣ್ಣ ಸಮಾಜಗಳನ್ನು ದೃಷ್ಠಿಯಲ್ಲಿಟ್ಟುಕೊಂಡು 2013 ಹಾಗೂ 2023 ರ ಬಜೆಟ್ ನಲ್ಲಿ ಸಿದ್ದರಾಮಯ್ಯನವರು ಯೋಜನೆಗಳನ್ನು ಘೋಷಣೆ ಮಾಡಿ ಅನುಷ್ಠಾನ ಮಾಡುತ್ತಿದ್ದಾರೆ. ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಬಿ.ಕೆ.ಹರಿಪ್ರಸಾದ್ ಸಮಾವೇಶ ಮಾಡಿ ಬಿಜೆಪಿಯವರನ್ನು ಆಹ್ವಾನಿಸಿ ಅವರ ಎದುರಿನಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಸರಕಾರವನ್ನು ಪರೋಕ್ಷ ಟೀಕೆ ಮಾಡುವುದು ಸರಿಯಾದ ಕ್ರಮವಲ್ಲ. ಸಣ್ಣ ಸಣ್ಣ ಸಮಾಜಗಳಿಗೆ ಅನ್ಯಾಯವಾಗಿದ್ದರೆ ನಮ್ಮದೇ ಸರಕಾರವಿದ್ದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನೊಂದಿಗೆ ಅತ್ಯುತ್ತಮ ಬಾಂಧವ್ಯ ಇರುವ ಹರಿಪ್ರಸಾದ್ ಅವರು ಮಾತನಾಡಿ ನ್ಯಾಯ ಕೊಡಿಸಲಿ.ಅದು ಬಿಟ್ಟು ಹತಾಶೆಯಿಂದ ಮುಖ್ಯಮಂತ್ರಿ ಹಾಗೂ ಸರಕಾರದ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ ಎಂದರು.
ಈಗಾಗಲೇ ಈಡಿಗ ಸಮಾಜದಿಂದ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸಾಮಾಜಿಕ ನ್ಯಾಯದ ಬದ್ಧತೆ ಇದ್ದು ಹಿರಿಯರಾದ ಹರಿಪ್ರಸಾದ್ ಅರ್ಥ ಮಾಡಿಕೊಂಡು ಸರಕಾರದ ಯೋಜನೆಗಳಿಗೆ ಸಲಹೆ ಸಹಕಾರ ನೀಡಬೇಕೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.