ಆಧುನಿಕ ತಂತ್ರಜ್ಞಾನ ಆಧಾರಿತ ಕೌಶಲ್ಯ ಅಳವಡಿಸಿಕೊಳ್ಳಿ: ವೆಂಕಯ್ಯ ನಾಯ್ಡು
Team Udayavani, Nov 15, 2021, 9:15 PM IST
ಬೆಂಗಳೂರು: ದೇಶದಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಕೌಶಲ್ಯವಾಗಿ ಮಾರ್ಪಡಿಸಬೇಕಿದೆ. ಆಧುನಿಕ ತಂತ್ರಜ್ಞಾನಗಳಾದ ಕೃತಕ ಬುದ್ಧಿಮತ್ತೆ, ಮಷಿನ್ ಲರ್ನಿಂಗ್, 5ಜಿ ಟೆಕ್ನಾಲಜಿ, ರೋಬ್ಯಾಟಿಕ್ಸ್, ಜೈವಿಕ ತಂತ್ರಜ್ಞಾನ ಮತ್ತು ಡ್ರೋನ್ ತಂತ್ರಜ್ಞಾನಗಳ ಅಳವಡಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಸಲಹೆ ನೀಡಿದರು.
ಸೋಮವಾರ ನಡೆದ ಪಿಇಎಸ್ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ದೇಶದಲ್ಲಿ ತಂತ್ರಜ್ಞಾನ ಬೆಳವಣಿಗೆ ಹೊಂದುತ್ತಿದ್ದು, ಅದಕ್ಕೆ ತಕ್ಕಂತೆ ನಾವು ಕೂಡ ಬದಲಾಗಬೇಕಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಸಾಕಷ್ಟು ಉದ್ಯೋಗವಕಾಶಗಳು ಸೃಷ್ಟಿಯಾಗಲಿದ್ದು, ಯುವ ಜನತೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದರು.
ಶಿಕ್ಷಣದಲ್ಲಿ ಬದಲಾವಣೆ ತರುವ ಉದ್ದೇಶದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಜ್ಞಾನಾಧಾರಿತ ಚಟುವಟಿಕೆಗಳು ಹೆಚ್ಚಾಗಲಿದ್ದು, 2050ರ ವೇಳೆಗೆ ಭಾರತದ ಆರ್ಥಿಕತೆ ಟ್ರಿಲಿಯನ್ ಡಾಲರ್‌ಗೆ ವೃದ್ಧಿಯಾಗಲಿದೆ ಎಂಬ ನಿರೀಕ್ಷೆ ಇದೆ. ಇದರಲ್ಲಿ ಕನಿಷ್ಠ ಶೇ.50ರಷ್ಟು ಶಿಕ್ಷಣ ಕ್ಷೇತ್ರಕ್ಕೆ ಸೇರಲಿದೆ. ತಾಂತ್ರಿಕ ವಿಶ್ವವಿದ್ಯಾಲಯಗಳು ಭಾರತವನ್ನು ಜ್ಞಾನದ ಶಕ್ತಿಯಾಗಿ ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಹೇಳಿದರು.
ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಾಣಬೇಕಾದಲ್ಲಿ, ಶಿಸ್ತು, ಸಮರ್ಪಣಾ ಮನೋಭಾವ ಮತ್ತು ಒಳ್ಳೆಯ ನಿರ್ಣಯ ತೆಗೆದುಕೊಳ್ಳುವ ಸಾಮರ್ಥ್ಯವನ್ನು ರೂಢಿಸಿಕೊಳ್ಳಬೇಕು. ಜೀವನದಲ್ಲಿ ದೊಡ್ಡ ಕನಸುಗಳನ್ನು ಇಟ್ಟುಕೊಳ್ಳುವ ಜೊತೆಗೆ ಅದನ್ನು ಸಾಧಿಸಲು ಕಠಿಣ ಪರಿಶ್ರಮ ಹಾಕಬೇಕು. ಯಶಸ್ಸಿಗೆ ಯಾವುದೇ ಶಾರ್ಟ್ ಕಟ್ ಇಲ್ಲ. ಕಠಿಣ ಪರಿಶ್ರಮವೊಂದೇ ಮಾರ್ಗ ಎಂದು ಸಲಹೆ ನೀಡಿದರು.
ಇದನ್ನೂ ಓದಿ:ಬುಸ್ ನಾಗಪ್ಪ ದೆಹಲಿಗೂ ಹೋಯಿತು: ಕೇಂದ್ರ ಸಚಿವ ನಾರಾಯಣಸ್ವಾಮಿ ಲೇವಡಿ
ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಮಾಜದಲ್ಲಿ ಎದುರಾಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಕಡೆ ಆಲೋಚಿಸಬೇಕು. ಇಂದು ನಮ್ಮ ದೇಶದಲ್ಲಿ ವಾತಾವರಣ ಬದಲಾವಣೆಯಾಗುತ್ತಿದೆ. ಜನ ಸಂಖ್ಯೆ ಪ್ರಮಾಣ ಹೆಚ್ಚಳವಾಗುತ್ತಿದೆ. ಈ ರೀತಿ ಹತ್ತು ಹಲವು ಸಮಸ್ಯೆಗಳಿದ್ದು, ಇದಕ್ಕೆ ಪರಿಹಾರ ಕಲ್ಪಿಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜತೆಗೆ ಆರೋಗ್ಯದ ಕಡೆಗೂ ಗಮನ ನೀಡಬೇಕು. ಜಂಕ್‌ಫುಡ್‌ಗಳ ಸೇವನೆ ಬಿಡಬೇಕು. ನಮ್ಮ ಅಹಾರ ಪದ್ಧತಿಯನ್ನೇ ಮುಂದುವರಿಸುತ್ತಾ, ಪ್ರತಿ ನಿತ್ಯ ಯೋಗ, ವಾಕಿಂಗ್ ರೂಢಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಪಿಇಎಸ್ ವಿಶ್ವವಿದ್ಯಾಲಯವು ಡಿಆರ್‌ಡಿಒ, ಇಸ್ರೋ ಜತೆ ಸೇರಿ ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡಿದೆ. ಡ್ರೋನ್ ಟೆಕ್ನಾಲಜಿ ಕೋರ್ಸ್ ಪರಿಯಚಿಸುತ್ತಿರುವುದು ಖುಷಿಯ ವಿಚಾರ ಎಂದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ದೇಶವು ವಿಕಾಸದ ಹಾದಿಯಲ್ಲಿದೆ. ಭವಿಷ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಎನ್‌ಇಪಿಯನ್ನು ಅನುಷ್ಠಾನ ಮಾಡುವ ಮೂಲಕ ನಮ್ಮ ರಾಜ್ಯ ಪ್ರಥಮ ರಾಜ್ಯ ಎಂಬ ಪಟ್ಟಿಯಲ್ಲಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಇದೇ ವೇಳೆ 22 ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು 59 ಬೆಳ್ಳಿ ಪದಕ ಸೇರಿದಂತೆ ಪಿಎಚ್.ಡಿ, ಎಂ.ಟೆಕ್ ಕೋರ್ಸ್‌ಗಳಲ್ಲಿ ಒಟ್ಟಾರೆ 2,249 ವಿದ್ಯಾರ್ಥಿಗಳು ಪದವಿ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ಪಿಇಎಸ್ ವಿವಿ ಕುಲಾಧಿಪತಿ ಎಂ.ಆರ್.ದೊರೆಸ್ವಾಮಿ, ಕುಲಪತಿ ಡಾ .ಜೆ. ಸೂರ್ಯ ಪ್ರಸಾದ್, ಕುಲಸಚಿವ ಡಾ. ಕೆ.ಎಸ್ .ಶ್ರೀಧರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.