![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 17, 2024, 12:31 AM IST
ಬೆಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿಯಲ್ಲಿ ರಾಜ್ಯದ ಎಲ್ಲ ಸರಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಧರಿಸಬೇಕು ಎಂದು ರಾಜ್ಯ ಸಕಾರ ಆದೇಶ ಹೊರಡಿಸಿದೆ.
ರಾಜ್ಯ ಸರಕಾರದ ಎಲ್ಲ ಇಲಾಖೆಗಳು, ನಿಗಮ ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಹಾಗೂ ಸರಕಾರಿ ಸ್ವಾಮ್ಯದ ಎಲ್ಲ ಕಚೇರಿಗಳಲ್ಲಿ ಎಲ್ಲ ಅಧಿಕಾರಿಗಳು/ಸಿಬಂದಿಗೆ ಕೆಂಪು ಹಳದಿ ಬಣ್ಣದ ಟ್ಯಾಗ್ ಒದಗಿಸಿಕೊಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನೂತನ ಕೊರಳುದಾರದ ವಿನ್ಯಾಸವನ್ನು http://photos.app.goo.gl/YcjeNHnDNPecW8Q48 ಎಲ್ಲ ಈ ಆನ್‌ಲೈನ್ ವಿಳಾಸದಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ (ರಾಜಕೀಯ) ಇವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಇಲ್ಲಿಯವರೆಗೆ ರಾಜ್ಯದ ಸರಕಾರಿ ನೌಕರರು ನೀಲಿ ಬಣ್ಣದ ಐಡಿ ಟ್ಯಾಗ್ ಹಾಕುತ್ತಿದ್ದರು. ಇದೀಗ ಅದನ್ನು ಬದಲಿಸಿ ಕೆಂಪು-ಹಳದಿ ಬಣ್ಣದ ಟ್ಯಾಗ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.