ಉದ್ಯೋಗ ನೀತಿ ರಾಜ್ಯದ ಯುವಕರಿಗೆ ಲಾಭದಾಯಕ: ಬೊಮ್ಮಾಯಿ
Team Udayavani, Jan 21, 2022, 6:07 AM IST
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಉದ್ಯೋಗ ನೀತಿ ಯುವಕರಿಗೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭದಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಉದ್ಯೋಗ ನೀತಿಯಿಂದ ರಾಜ್ಯದ ಯುವಕರ ಬದುಕು ಹಸನಾಗಲಿದೆ. ಕೆಳಸ್ತರದ ದುಡಿಯುವ ವರ್ಗಕ್ಕೆ ಸಹಾಯಧನ ಬಹಳ ದೊಡ್ಡ ಆಸರೆಯಾಗಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಈ ಕಾರ್ಯಕ್ರಮದಿಂದ ಮಕ್ಕಳು ಉತ್ತಮ ಶಿಕ್ಷಣ ಪಡೆದು, ವಿವಿಧ ಉದ್ಯೋಗಳಲ್ಲಿ ತೊಡಗಿ ಕೊಂಡು ರಾಜ್ಯದ ಆರ್ಥಿಕ ತೆಯ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದವರು ತಿಳಿಸಿದರು.
ದೇಶದ ಆರ್ಥಿಕತೆಯನ್ನು ಮುನ್ನಡೆ :
ಸುವವರು ದುಡಿಯುವ ವರ್ಗ. ದೇವರು ರೈತರ ಶ್ರಮ ಹಾಗೂ ಕಾರ್ಮಿಕರ ಬೆವರಿನಲ್ಲಿದ್ದಾನೆ ಎಂದು ಕವಿ ರವೀಂದ್ರನಾಥ ಟ್ಯಾಗೋರ್ ಅವರು ತಿಳಿಸಿದಂತೆ ದುಡಿಯುವ ವರ್ಗವನ್ನು ದೈವತ್ವಕ್ಕೆ ಹೋಲಿಸುವ ಸಂಸ್ಕೃತಿ ಭಾರತ ದೇಶದಲ್ಲಿದೆ ಎಂದು ತಿಳಿಸಿದರು.
ಆರ್ಥಿಕ ಶಕ್ತಿ ವೃದ್ಧಿ :
ಸಮಾಜದಲ್ಲಿ ಕಾಯಕದ ನಿಷ್ಟೆ, ಜಾಗೃತಿ ಮೂಡಿಸುವುದು ಆವಶ್ಯಕವಾಗಿದೆ. ದೇಶದ ಜನ ಶ್ರೀಮಂತವಾಗಿದ್ದರೆ ದೇಶ ಅಭಿವೃದ್ಧಿಯಾದಂತೆ. ರಾಜ್ಯದಲ್ಲಿ ದುಡಿಯುವ ವರ್ಗಕ್ಕೆ ಆರ್ಥಿಕ ಶಕ್ತಿಯನ್ನು ನೀಡಿದರೆ ರಾಜ್ಯದ ಆರ್ಥಿಕ ಶಕ್ತಿ ವೃದ್ಧಿಸುತ್ತದೆ. ಕಟ್ಟಡ ಕಾರ್ಮಿಕರು, ವಲಸೆ ಬಂದಿರುವವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವುದು ಉತ್ತಮ ಕಾರ್ಯವಾಗಿದೆ ಎಂದು ಸಿಎಂ ಶ್ಲಾಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.