Constitution ಪರವಿದ್ದವರಿಗೆ ಅಧಿಕಾರ ನೀಡಿ : ಸಿದ್ದರಾಮಯ್ಯ
ಸಾಮಾಜಿಕ ಅಸಮಾನತೆ ಅಳಿಸಿ ಹಾಕುವುದು ಸರಕಾರದ ಜವಾಬ್ದಾರಿ
Team Udayavani, Feb 24, 2024, 11:45 PM IST
ಬೆಂಗಳೂರು: ಸಂವಿಧಾ ನವು ಸ್ವಾತಂತ್ರ್ಯ ಸಮಾನತೆಯ ಭ್ರಾತೃತ್ವ, ಸಮ ಸಮಾಜ ನಿರ್ಮಾ ಣದ ಪರವಾಗಿರುವವರ ಕೈಯಲ್ಲಿದ್ದರೆ ಯಶಸ್ವಿಯಾಗುತ್ತದೆ. ಸಂವಿಧಾ ನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿ ಅಧಿಕಾರವಿದ್ದರೆ ನಮಗೆ ಉಳಿಗಾಲ ವಿಲ್ಲ. ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರು ವವರಿಗೆ ಅಧಿಕಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾವೆಲ್ಲರೂ ಸಂವಿಧಾನದ ಮಾಲಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕ್ತಿಯಿಲ್ಲ. ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳನ್ನು ಸಿದ್ದರಾಮಯ್ಯ ಉಲ್ಲೇಖಿಸಿದರು.
ಸಾಮಾಜಿಕ, ಆರ್ಥಿಕ ಅಸಮಾನತೆ ಯುಳ್ಳ ಸಮಾಜದಲ್ಲಿ ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾ ಪ್ರಭುತ್ವದ ತಳಹದಿ ಮೇಲೆ ನಿಂತಾಗ ಮಾತ್ರ ಯಶಸ್ವಿಯಾಗುತ್ತದೆ. ಇಲ್ಲದಿದ್ದರೆ ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿಯೊಂದು ಸರಕಾರದ ಜವಾಬ್ದಾರಿ ಎಂದು ಸಿದ್ದರಾಮಯ್ಯ ಹೇಳಿದರು.
ಸಮಾಜ ಕಲ್ಯಾಣ ಸಚಿವ ಡಾ| ಎಚ್.ಸಿ.ಮಹದೇವಪ್ಪ ಮಾತನಾಡಿ, ಸಂವಿಧಾನದ ಆಶಯಗಳ ಗುರಿ ಮುಟ್ಟಲು ಇನ್ನೂ ಪ್ರಯತ್ನ ಅಗತ್ಯವಿದೆ. ಜ.26ರಿಂದ ಆರಂಭವಾಗಿದ್ದ ಸಂವಿಧಾನ ಜಾಗೃತಿ ಜಾಥಾವು ರಾಜ್ಯ 5,600 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಿದೆ. ಎಲ್ಲರಿಗೂ ಆರ್ಥಿಕ ನ್ಯಾಯ ಸಿಕ್ಕಿಲ್ಲ. ಸಮ ಸಮಾಜ ನಿರ್ಮಾಣವಾಗಿಲ್ಲ. ಶೇ.75 ಶಿಕ್ಷಣ ಸಿಗುತ್ತಿಲ್ಲ. ಅಲ್ಪಸಂಖ್ಯಾಕರು, ಕೃಷಿಕರು ಬದುಕಿಗಾಗಿ ಆಕಾಶ ನೋಡುತ್ತಿದ್ದಾರೆ ಎಂದು ಹೇಳಿದರು.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲ ಗೌಡ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಮಾತನಾಡಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಂವಿಧಾನ ಪೀಠಿಕೆ ಓದಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಎಸ್.ಟಿ. ಸೋಮಶೇಖರ್, ಅಪರ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್ ಮುಂತಾದವರು ಉಪಸ್ಥಿತರಿದ್ದರು.
ನಾಲ್ಕು ಜಿಲ್ಲೆಗಳಿಗೆ ಬಹುಮಾನ
ಸಂವಿಧಾನ ಜಾಗೃತಿ ಜಾಥಾ ಜಿಲ್ಲೆಗಳಿಗೆ ಬಂದಿದ್ದ ವೇಳೆ ಅತ್ಯುತ್ತಮ ಚಟುವಟಿಕೆ ಆಯೋಜಿಸಿದ್ದ ತುಮಕೂರು ಜಿಲ್ಲೆ, ದಾವಣಗೆರೆ, ಮೈಸೂರು, ಕೊಡಗು, ಬಳ್ಳಾರಿ ಜಿಲ್ಲೆಗಳಿಗೆ ಬಹುಮಾನ ಹಾಗೂ ನೆನಪಿನ ಕಾಣಿಕೆ ವಿತರಿಸಲಾಯಿತು.
ಬಾಲಕನ ಸಂವಿಧಾನದ ಜ್ಞಾನಕ್ಕೆ ತಲೆಬಾಗಿದ ಜನ
ಸಮಾವೇಶದಲ್ಲಿ ಚಾಮರಾಜನಗರ ಜಿಲ್ಲೆಯ ಕೇಂದ್ರೀಯ ವಿದ್ಯಾಲಯದ ಎರಡನೇ ತರಗತಿ ವಿದ್ಯಾರ್ಥಿ ತೇಜಸ್ ಚಕ್ರವರ್ತಿ ಸಂವಿಧಾನದ ಹಲವು ವಿಧಿಗಳು, ಅವುಗಳ ವಿವರಣೆ, ಮೂಲಭೂತ ಹಕ್ಕುಗಳ ಬಗ್ಗೆ ನಿರರ್ಗಳವಾಗಿ ಮಾತನಾಡಿ ಎಲ್ಲರ ಗಮನ ಸೆಳೆದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.