Engineering ಪ್ರವೇಶ ಶುಲ್ಕ ಶೇ. 10 ಹೆಚ್ಚಳಕ್ಕೆ ಅಸ್ತು
2024-25ರ ಸಾಲಿನ ಪ್ರವೇಶಕ್ಕೆ ಅನ್ವಯ
Team Udayavani, Jul 21, 2024, 6:50 AM IST
ಬೆಂಗಳೂರು: ಸರಕಾರಿ, ವಿಶ್ವವಿದ್ಯಾನಿಲಯ, ಖಾಸಗಿ ಅನುದಾನಿತ, ಖಾಸಗಿ ಅನುದಾನ ರಹಿತ ಎಂಜಿನಿಯರಿಂಗ್, ಆರ್ಕಿಟೆಕ್ಚರ್ ಕಾಲೇಜುಗಳ ಶುಲ್ಕವನ್ನು ಶೇ. 10ರಷ್ಟು ಹೆಚ್ಚಿಸಿ ರಾಜ್ಯ ಸರಕಾರ ಆದೇಶಿಸಿದೆ. ಈ ಪರಿಷ್ಕೃತ ಶುಲ್ಕ 2024-25ರ ಸಾಲಿನ ಪ್ರವೇಶಕ್ಕೆ ಅನ್ವಯವಾಗಲಿದೆ.
ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಶೇ. 100 ಸರಕಾರಿ ಕೋಟಾದ ಸೀಟುಗಳಿಗೆ, ಮೈಸೂರು ವಿಶ್ವವಿನಿದ್ಯಾಲಯ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಗಳ ಶೇ. 50 ಎಂಜಿನಿಯರಿಂಗ್ ಮತ್ತು ಆರ್ಕಿ ಟೆಕ್ಚರ್ ಸೀಟುಗಳಿಗೆ 42,116 ರೂ. ಶುಲ್ಕ ನಿಗದಿಪಡಿಸಲಾಗಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿ.ವಿ. (ಯುವಿಸಿಇ)ಗೆ 47,250 ರೂ., ಖಾಸಗಿ ಅನುದಾನಿತ ಕಾಲೇಜು ಮತ್ತು ಖಾಸಗಿ ವಿ.ವಿ.ಗಳ ಸರಕಾರಿ ಕೋಟಾದ ಸೀಟುಗಳಿಗೆ 42,116 ರೂ., ಖಾಸಗಿ ಅನುದಾನರಹಿತ ಎಂಜಿನಿಯರಿಂಗ್/ಆರ್ಕಿಟೆಕ್ಚರ್ ಕಾಲೇಜುಗಳ ಸರಕಾರಿ ಕೋಟಾದ ಸೀಟುಗಳಿಗೆ 76,135 ರೂ. ಅಥವಾ 84,596 ರೂ. ನಿಗದಿಪಡಿಸಲಾಗಿದೆ.
ಕಾಮೆಡ್-ಕೆ ಕೋಟಾದ ಸೀಟುಗಳು ಹಾಗೂ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾಕ ವೃತ್ತಿಪರ ಕಾಲೇಜುಗಳ ಒಕ್ಕೂಟದ ಕಾಲೇಜುಗಳಿಗೆ 1,86,111 ರೂ. ಅಥವಾ 2,61,477 ರೂ., ಶುಲ್ಕವನ್ನು ನಿಗದಿಪಡಿಸಲಾಗಿದೆ.
ಇತರ ಶುಲ್ಕಕ್ಕೆ ಷರತ್ತು
ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಪ್ರತೀ ವಿದ್ಯಾರ್ಥಿಯಿಂದ ಇತರ ಶುಲ್ಕವಾಗಿ ವಾರ್ಷಿಕ 20 ಸಾವಿರ ರೂ. ಮೀರದಂತೆ ಪ್ರಥಮ ವರ್ಷದ ಶುಲ್ಕವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಶೇ. 15ರಷ್ಟು ಶುಲ್ಕ ಏರಿಕೆಗೆ ಬೇಡಿಕೆ ಸಲ್ಲಿಸಿದ್ದವು. ಆದರೆ ಸರಕಾರ ಶೇ. 10ರಷ್ಟು ಶುಲ್ಕ ಏರಿಸಲು ತೀರ್ಮಾನಿಸಿತ್ತು. ಅದರಂತೆ ಹೊಸ ಶುಲ್ಕ ಸಂರಚನೆಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಕಳೆದ ವರ್ಷ ಎಷ್ಟು ಶುಲ್ಕ ಇತ್ತು?
ಕಳೆದ ವರ್ಷ ಸರಕಾರಿ ಮತ್ತು ಅನುದಾನಿತ ಕಾಲೇಜು ಗಳ ಸರಕಾರಿ ಕೋಟಾದ ಸೀಟುಗಳಿಗೆ 40,860 ರೂ., ಯುವಿಸಿಇ ಕಾಲೇಜು 45,000 ರೂ., ಅನುದಾನ ರಹಿತ ಮತ್ತು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ 69,214 ರೂ. ಅಥವಾ 76,905 ರೂ., ಕಾಮೆಡ್-ಕೆ ಸೀಟುಗಳಿಗೆ ಹಾಗೂ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾಕ ವೃತ್ತಿಪರ ಕಾಲೇಜುಗಳ ಒಕ್ಕೂಟದ ಕಾಲೇಜುಗಳಿಗೆ 1,69,192 ಅಥವಾ 2,33,706 ರೂ. ಶುಲ್ಕ ನಿಗದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.