ಪಿಯು ಪ್ರವೇಶ ಹೆಚ್ಚಳಕ್ಕೆ ದಾಖಲಾತಿ ಆಂದೋಲನ
Team Udayavani, May 6, 2017, 11:30 AM IST
ಬೆಂಗಳೂರು: ಮೇ ಎರಡನೇ ವಾರದಲ್ಲಿ ಪ್ರಕಟವಾಗಲಿರುವ ಎಸ್ಸೆಸ್ಸೆಲ್ಸಿ ಫಲಿತಾಂಶದ ನಂತರ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸುವ ನಿಟ್ಟಿನಲ್ಲಿ ಹಾಗೂ ಯಾವುದೇ ವಿದ್ಯಾರ್ಥಿ ಕಾಲೇಜು ಶಿಕ್ಷಣದಿಂದ
ವಂಚಿತರಾಗದಂತೆ ನೋಡಿಕೊಳ್ಳಲು ದಾಖಲಾತಿ ಆಂದೋಲನ ಕೈಗೊಳ್ಳಲು ಪಿಯು ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲರು ತಮ್ಮ ವ್ಯಾಪ್ತಿಯ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಬೇಕು. ನಂತರ ಆ ವಿದ್ಯಾರ್ಥಿಗಳ ಪಾಲಕ, ಪೋಷಕರನ್ನು ಸಂಪರ್ಕಿಸಿ, ಪಿಯುಗೆ ದಾಖಲಾಗಲು ಪ್ರೋತ್ಸಾಹ ನೀಡಬೇಕು. ವಿದ್ಯಾರ್ಥಿಗಳ ಪಾಲಕ, ಪೋಷಕರನ್ನು ತಲುಪಲು ಕರಪತ್ರ, ದೂರವಾಣಿ ಸಂದೇಶ, ವಾಟ್ಸ್‌ಆ್ಯಪ್ ಸಂದೇಶ, ಫೇಸ್‌ಬುಕ್ ಮೂಲಕ ಅಭಿಯಾನ ಮಾಡಬೇಕು ಎಂದು ತಿಳಿಸಲಾಗಿದೆ. ಒಂದು ಸಾವಿರ ರೂ.
ಕ್ಕಿಂತ ಜಾಸ್ತಿ ವೆಚ್ಚ ಆಗದಂತೆ ಎಚ್ಚರ ವಹಿಸಲು ಸೂಚಿಸಿದೆ.
ಸ್ಥಳೀಯ ಸುದ್ದಿವಾಹಿನಿಯಲ್ಲಿ ಕಾಲೇಜಿನ ಸೌಲಭ್ಯಗಳನ್ನು ಪ್ರಸಾರ ಮಾಡುವಂತೆ ಉತ್ತೇಜಿಸುವುದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿಜ್ಞಾನ, ವಾಣಿಜ್ಯ ಸಂಯೋಜನೆಯ ಪಠ್ಯಪುಸ್ತಕವನ್ನು ಉಚಿತವಾಗಿ ನೀಡುವ ಯೋಜನೆಯ ಮನವರಿಕೆ, ಜಿಲ್ಲೆಗೆ ಪ್ರಥಮ ಬಂದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವ ವಿಚಾರ ಸೇರಿ ತಂತ್ರಜ್ಞಾನ ಆಧಾರಿತ ಕಲಿಕಾ ಕಾರ್ಯಕ್ರಮ ಜಾರಿ ಮಾಡುವುದನ್ನು ಸೇರಿಸಿಕೊಂಡು ದಾಖಲಾತಿ ಆಂದೋಲನ ನಡೆಸಲು ಪ್ರಾಂಶುಪಾಲಕರಿಗೆ ಸೂಚನೆ ನೀಡಿದೆ.
ಕಾಲೇಜು ಬಿಟ್ಟ ವಿದ್ಯಾರ್ಥಿಗಳನ್ನು ಪುನಃ ಕಾಲೇಜಿಗೆ ಕರೆತರಲು ಮನೆ, ಮನೆಗೆ ಭೇಟಿ ನೀಡುವುದು, ಈ ಆಂದೋಲನಕ್ಕಾಗಿ ಕಾಲೇಜು ಅಭಿವೃದ್ಧಿ ಸಭೆ ಕರೆದು, ಪ್ರವೇಶ ಹೆಚ್ಚಳಕ್ಕೆ ಪೂರಕವಾಗುವಂತೆ ಕಳೆದ ವರ್ಷದ
ದಾಖಲಾತಿ ವರದಿ ಸಿದ್ಧಪಡಿಸುವುದು, ತಾಲೂಕಿಗೆ ಒಬ್ಬ ಪ್ರಾಂಶುಪಾಲರನ್ನೇ ನೋಡಲ್ ಅಧಿಕಾರಿಯಾಗಿ ನೇಮಿಸುವುದು, ಕಾಲೇಜಿನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಭಾವಚಿತ್ರ ಪ್ರಕಟಿಸುವುದು ಸೇರಿ ಹಲವು ಕ್ರಮ ತೆಗೆದುಕೊಳ್ಳಲು ನಿರ್ದೇಶಿಸಲಾಗಿದೆ.
ಅಗತ್ಯ ದಾಖಲೆ ಸಲ್ಲಿಕೆ
2017-18ನೇ ಶೈಕ್ಷಣಿಕ ವರ್ಷದಲ್ಲಿ ತಾತ್ಕಾಲಿಕ ಅರ್ಹತಾ ಪತ್ರ ಹಾಗೂ ವಲಸೆ ಪ್ರಮಾಣ ಪತ್ರ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್ ಮೂಲಕ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.