EPF ನಿಧಿ ವಂಚನೆ: ರಾಬಿನ್ ಉತಪ್ಪ ವಿರುದ್ದದ ವಾರಂಟ್ಗೆ ಹೈಕೋರ್ಟ್ ತಡೆ
Team Udayavani, Jan 1, 2025, 9:58 AM IST
ಬೆಂಗಳೂರು: ಕಂಪನಿಯಲ್ಲಿನ ಉದ್ಯೋಗಿಗಳಿಗೆ ಉದ್ಯೋಗ ಭವಿಷ್ಯ ನಿಧಿ (EPF) ಹಣ ಪಾವತಿಸದ ಆರೋಪದಡಿ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧದ ವಾರಂಟ್ಗೆ ಹೈ ಕೋರ್ಟ್ ತಡೆ ನೀಡಿದೆ.
ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಹೊರ ಡಿಸಿರುವ ವಸೂಲಿ (ರಿಕವರಿ) ನೋಟಿಸ್, ಬಂಧನ ವಾರೆಂಟ್ ಪ್ರಶ್ನಿಸಿ
ರಾಬಿನ್ ಉತ್ತಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಸೂರಜ್ ಗೋವಿಂದರಾಜ್ ಅವರ ರಜಾ ಕಾಲದ ಏಕಸದಸ್ಯ ನ್ಯಾಯಪೀಠ, ಬೆಂಗಳೂರಿನ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಮತ್ತು ವಸೂಲಿ ಅಧಿಕಾರಿ, ಕೇಂದ್ರ ಕಾರ್ಮಿಕ ಇಲಾಖೆ, ಸಹಾಯಕ ಭವಿಷ್ಯ ನಿಧಿ ಆಯುಕ್ತರು ಮತ್ತು ವಸೂಲಿ ಅಧಿಕಾರಿ, ಪುಲಿಕೇಶಿ ನಗರ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೆ, ವಾರಂಟ್ಗೆ ತಡೆ ನೀಡಿ ವಿಚಾರಣೆ ಮುಂದೂಡಿತು. ಉತ್ತಪ್ಪ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು.
ರಾಬಿನ್ ಉತ್ತಪ್ಪ “ಸೆಂಟಾರಸ್ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈ.ಲಿ.’ ಎಂಬ ಖಾಸಗಿ ಕಂಪನಿಯ ಸಹ ಪಾಲುದಾರ ರಾಗಿದ್ದಾರೆ. ಆದರೆ, 2020ರಲ್ಲಿ ತಮ್ಮ ಪಾಲು ದಾರ ಹುದ್ದೆಗೆ ರಾಜೀನಾಮೆ ನೀಡಿ ದ್ದರು. ಹೀಗಾಗಿ ಅವರನ್ನು
ಪ್ರಕರಣದಲ್ಲಿ ಭಾಗಿಯನ್ನಾಗಿಸುವುದಕ್ಕೆ ಅವಕಾಶವಿಲ್ಲ. ಅವರಿಗೆ ನೀಡಿರುವ ನೋಟಿಸ್, ಬಂಧನ ವಾರಂಟ್
ಅನ್ನು ರದ್ದುಪಡಿಸಬೇಕು ಎಂದು ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod:ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ
Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
“ನಿಮ್ಹಾನ್ಸ್ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು
Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.