ಆಸ್ಪತ್ರೆ ನಿರ್ಮಾಣಕ್ಕೆ ಖಾಲಿ ಜಾಗ ಬಿಟ್ಟು ಕೊಡಲು ಈಶ್ವರ್ ಖಂಡ್ರೆ ಆಗ್ರಹ
Team Udayavani, Mar 11, 2022, 10:54 PM IST
ವಿಧಾನಸಭೆ: ಭಾಲ್ಕಿ ಪಟ್ಟಣದಲ್ಲಿ ತಾಯಿ ಮಗುವಿನ ಆಸ್ಪತ್ರೆ ನಿರ್ಮಾಣಕ್ಕೆ ಶಿಕ್ಷಣ ಇಲಾಖೆಯ ಜಾಗ ಬಿಟ್ಟು ಕೊಡುವಂತೆ ಶಾಸಕ ಈಶ್ವರ್ ಖಂಡ್ರೆ ಮನವಿ ಮಾಡಿಕೊಂಡರು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಭಾಲ್ಕಿ ಪಟ್ಟಣದ ಮಧ್ಯದಲ್ಲಿಯೇ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇತ್ತು. ಈಗ ಆ ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಿರುವುದರಿಂದ ಈಗಿರುವ ಶಾಲೆ ಪಾಳು ಬಿದ್ದಿದ್ದು, ಆ ಪ್ರದೇಶದಲ್ಲಿ ತಾಯಿ ಮಗುವಿನ ಆಸ್ಪತ್ರೆ ತೆರೆಯಲು ಅನುಮತಿ ದೊರೆತು, ಅನುದಾನವೂ ಬಿಡುಗಡೆಯಾಗಿದೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಆ ಪ್ರದೇಶದಲ್ಲಿ ಶಾಲೆ ನಡೆಯುತ್ತಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ವಾಸ್ತವವಾಗಿ ಅಲ್ಲಿ ಶಾಲೆ ನಡೆಯುತ್ತಿಲ್ಲ ಎಂದು ಸದನದ ಗಮನ ಸೆಳೆದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಲೆ ಸ್ಥಳಾಂತರ ಆಗಿದ್ದರೆ, ಖಾಲಿ ಜಾಗದಲ್ಲಿ ಸರ್ಕಾರಿ ಆಸ್ಪತ್ರೆ ಕಟ್ಟಿಸಲು ಜಾಗ ನೀಡಲು ಏನು ಸಮಸ್ಯೆ ಎಂದು ಪ್ರಶ್ನಿಸಿದರು. ಆ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸ್ಥಳವಾಗಿರುವುದರಿಂದ ಮುಂದಿನ ದಿನಗಳಲ್ಲಿ ಹಾಸ್ಟೆಲ್ ನಿರ್ಮಾಣ ಮಾಡಲು ಜಾಗದ ಅಗತ್ಯವಿದೆ ಎಂದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರು ಸರ್ಕಾರದ ಆಸ್ಪತ್ರೆ ನಿರ್ಮಾಣ ಮಾಡಲು ಜಾಗ ಕೇಳುತ್ತಿದ್ದಾರೆ. ಸರ್ಕಾರದ ಒಂದು ಇಲಾಖೆಯ ಜಾಗವನ್ನು ಇನ್ನೊಂದು ಇಲಾಖೆಗೆ ನೀಡಲು ಏನು ಸಮಸ್ಯೆ ಎಂದು ಪ್ರಶ್ನಿಸಿದರು. ನಂತರ ಶಿಕ್ಷಣ ಸಚಿವ ನಾಗೇಶ್ ಈ ಬಗ್ಗೆ ವರದಿ ಪಡೆದು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.